Karnataka Trains: ಕೆಲವು ರೈಲುಗಳ ಸಂಚಾರ ಭಾರೀ ವಿಳಂಬ: ದಸರಾಗೆ ರೈಲುಗಳ ನಿಲುಗಡೆ, ವಿವರ: SWR
ಬೆಂಗಳೂರು, ಸೆಪ್ಟಂಬರ್ 04: ಕರ್ನಾಟಕ ವ್ಯಾಪ್ತಿಯಲ್ಲಿ ವಿವಿಧ ಮಾರ್ಗಗಳ ರೈಲುಗಳನ್ನು ನೈಋತ್ಯ ರೈಲ್ವೆ ನಿಯಂತ್ರಿಸಲಿದೆ. ಹಾಸನ-ಕೊರವಂಗಲ ಮತ್ತು ಹಾಸನ-ಮಾವಿನಕೆರೆ ನಿಲ್ದಾಣಗಳ ನಡುವಿನ ಸಂಪೂರ್ಣ ಹಳಿ ನವೀಕರಣ ಕಾರ್ಯ ನಡೆಯಲಿದೆ. ಹೀಗಾಗಿ ಕೆಲವು ರೈಲು ಸೇವೆಗಳ ನಿಯಂತ್ರಿಸಲಾಗುತ್ತದೆ. ಇದರಿಂದ ಗಂಟೆಗಳ ಕಾಲ ರೈಲು ಸಂಚಾರ ವಿಳಂಬವಾಗಲಿದೆ. ಇದರೊಂದಿಗೆ ದಸರಾ ಪ್ರಯುಕ್ತ ರಾಜ್ಯದ ಈ ನಿಲ್ದಾಣಗಳಲ್ಲಿ ರೈಲುಗಳ ತಾತ್ಕಾಲಿಕ ನಿಲುಗಡೆ ನೀಡಲಿವೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
* ಮೈಸೂರು-ತಾಳಗುಪ್ಪ ಕುವೆಂಪು ಎಕ್ಸ್‌ಪ್ರೆಸ್ ರೈಲು (ಸಂಖ್ಯೆ 16222) ಸೆಪ್ಟೆಂಬರ್ 4 ಮತ್ತು 5 ರಂದು 30 ನಿಮಿಷಗಳ ಕಾಲ ಮಾರ್ಗದಲ್ಲಿ ನಿರ್ಬಂಧಿಸಲಾಗುತ್ತದೆ. ಇದರಿಂದ ಅಂದು ಪ್ರಯಾಣಿಕರಿಗೆ ಸಂಚಾರ ವಿಳಂಬವಾಗಲಿದೆ.

* ತಾಳಗುಪ್ಪ-ಮೈಸೂರು ಕುವೆಂಪು ಎಕ್ಸ್‌ಪ್ರೆಸ್ ರೈಲು (16221) ಹಾಗೂ ಕೆಎಸ್‌ಆರ್ ಬೆಂಗಳೂರು-ಹಾಸನ ಮೆಮು ವಿಶೇಷ ರೈಲು (06583) ಸೆಪ್ಟೆಂಬರ್ 8 ರಿಂದ ಸೆಪ್ಟೆಂಬರ್ 12 ರವರೆಗೆ ಹಾಗೂ ಸೆಪ್ಟೆಂಬರ್ 15 ರಿಂದ 19 ರವರೆಗೆ ತಲಾ 15 ನಿಮಿಷಗಳ ಕಾಲ ಮಾರ್ಗದಲ್ಲಿ ನಿರ್ಬಂಧಿಸಲಾಗುತ್ತದೆ.
* ಮೈಸೂರು-ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್ ರೈಲು (16225) ಸೆಪ್ಟೆಂಬರ್ 8ರಿಂದ ಸೆಪ್ಟೆಂಬರ್ 12ರವರೆಗೆ ಹಾಗೂ ಸೆಪ್ಟೆಂಬರ್ 15 ರಿಂದ ಸೆಪ್ಟೆಂಬರ್ 19ರವರೆಗೆ 80 ನಿಮಿಷಗಳ ಕಾಲ ಈ ಮಾರ್ಗದಲ್ಲಿ ನಿರ್ಬಂಧಿಸಲಾಗುತ್ತದೆ ಎಂದು SWR ತಿಳಿಸಿದೆ.
ದಸರಾ: ಕರ್ನಾಟಕ ರೈಲುಗಳ ನಿಲುಗಡೆ ವಿವರ
ಮೈಸೂರಿನಲ್ಲಿ ನಡೆಯಲಿರುವ ದಸರಾ ಹಬ್ಬದ ಪ್ರಯುಕ್ತ ನಿರೀಕ್ಷಿತ ಪ್ರಯಾಣಿಕರ ದಟ್ಟಣೆ ಹೆಚ್ಚಿರುತ್ತದೆ. ಅವರನ್ನು ನಿಭಾಯಿಸಲು ಮತ್ತು ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಲು, ನೈಋತ್ಯ ರೈಲ್ವೆಯು ಸೆಪ್ಟೆಂಬರ್ 23 ರಿಂದ ಅಕ್ಟೋಬರ್ 2, ರವರೆಗೆ ಕೆಳಗಿನ ರೈಲುಗಳಿಗೆ ತಾತ್ಕಾಲಿಕ ನಿಲುಗಡೆ ನೀಡಲಿವೆ.
* ಮೈಸೂರು-ಶಿವಮೊಗ್ಗ ಟೌನ್-ಮೈಸೂರು ಎಕ್ಸ್‌ಪ್ರೆಸ್ ರೈಲು (16225/16226) ಬೆಳಗುಳಿ, ಕೃಷ್ಣರಾಜಸಾಗರ, ಕಲ್ಲೂರು ಎಡಹಳ್ಳಿ ಹಾಲ್ಡ್, ಸಾಗರಕಟ್ಟೆ, ಡೋರನಹಳ್ಳಿ, ಹಂಪಾಪುರ, ಅರ್ಜುನಹಳ್ಳಿ ಹಾಲ್ಟ್, ಹೊಸ ಅಗ್ರಹಾರ ಮತ್ತು ಮಾವಿನಕೆರೆ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿವೆ.
* ಮೈಸೂರು-ತಾಳಗುಪ್ತ-ಮೈಸೂರು ಎಕ್ಸ್‌ಪ್ರೆಸ್ ರೈಲು (16222/16221) ಕೃಷ್ಣರಾಜಸಾಗರ, ಕಲ್ಲೂರು ಎಡಹಳ್ಳಿ ಹಾಲ್ಟ್, ಡೋರನಹಳ್ಳಿ, ಹಂಪಾಪುರ ಮತ್ತು ಅರ್ಜುನಹಳ್ಳಿ ಹಾಲ್ಡ್ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.
* ರೈಲು ಸಂಖ್ಯೆ 17301/17302 ಮೈಸೂರು-ಬೆಳಗಾವಿ-ಮೈಸೂರು ಎಕ್ಸ್‌ಪ್ರೆಸ್ ರೈಲು ಬೆಳಗುಳಿ, ಸಾಗರಕಟ್ಟೆ, ಹೊಸ ಅಗ್ರಹಾರ, ಅಕ್ಕಿಹೆಬ್ಬಾಳು, ಬೀರಹಳ್ಳಿ ಹಾಲ್ಟ್, ಮಂದಗೆರೆ ಮತ್ತು ಮಾವಿನಕೆರೆ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಯಾಣಿಕರು ಈ ಮೇಲಿನಂತೆ ಅನುಕೂಲವಾಗುವ ರೀತಿಯಲ್ಲಿ ಪ್ರಯಾಣವನ್ನು ಪ್ಲಾನ್ ಮಾಡಿಕೊಳ್ಳಬೇಕು.












Click it and Unblock the Notifications