ಬಿಎಂಟಿಸಿಗೆ 840 ಬಸ್ ಖರೀದಿಗೆ ಟೆಂಡರ್; ಹೈಕೋರ್ಟ್‌ಗೆ ಅರ್ಜಿ
ಬೆಂಗಳೂರು, ಜನವರಿ 03; ಬೆಂಗಳೂರು ಮಹಾನಗರದ ಸಾರಿಗೆ ಸಂಸ್ಥೆ (ಬಿಎಂಟಿಸಿ) 840 ಹೊಸ ಬಸ್‌ಗಳನ್ನು ಖರೀದಿಗೆ ಹೊರಡಿಸಿದ್ದ ಟೆಂಡರ್ ಅಧಿಸೂಚನೆ ಇದೀಗ ನ್ಯಾಯಾಂಗ ಪರಾಮರ್ಶೆಗೆ ಒಳಪಟ್ಟಿದೆ.
ಟೆಂಡರ್ ಪ್ರಶ್ನಿಸಿ ಬೆಂಗಳೂರು ವಿಕಲಚೇತನ ಸುನೀಲ್ ಕುಮಾರ್ ಜೈನ್ ಸಲ್ಲಿಸಿದ್ದ ಸಾರ್ವಜನಿಕ ಅರ್ಜಿ ಮುಖ್ಯ ನ್ಯಾಯಮೂರ್ತಿ ಪಿ. ಬಿ. ವರಳೆ ನೇತೃತ್ವದ ವಿಭಾಗೀಯ ಪೀಠದ ಮುಂದೆ ಸೋಮವಾರ ವಿಚಾರಣೆಗೆ ಬಂದಿತ್ತು.
ಕೆಲ ಕಾಲ ಅರ್ಜಿದಾರ ಪರ ವಕೀಲ ವಾದ ಆಲಿಸಿದ ನ್ಯಾಯಪೀಠ, ಪ್ರತಿವಾದಿಗಳಾದ ರಾಜ್ಯ ಸಾರಿಗೆ ಇಲಾಖೆ, ಕೇಂದ್ರ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ, ಅಂಗವಿಕಲರ ಸಬಲೀಕರಣ ಇಲಾಖೆ ಮತ್ತು ಬಿಎಂಟಿಸಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.

ಈ ಮಧ್ಯೆ ಅರ್ಜಿ ನ್ಯಾಯಾಲಯದಲ್ಲಿ ಇತ್ಯರ್ಥವಾಗುವರೆಗೆ 840 ಹೊಸ ಬಸ್‌ಗಳ ಖರೀದಿಗೆ ಹೊರಡಿಸಿರುವ ಟೆಂಡರ್ ಅಧಿಸೂಚನೆಗೆ ತಡೆಯಾಜ್ಞೆ ನೀಡಬೇಕು, ಇಲ್ಲವೇ ಬಸ್ ಖರೀದಿ ಪ್ರಕ್ರಿಯು ಅರ್ಜಿ ಕುರಿತ ಅಂತಿಮ ಆದೇಶಕ್ಕೆ ಒಳಪಪಟ್ಟಿರುತ್ತದೆ ಎಂದು ಸ್ಪಷ್ಟಪಡಿಸಿ ಮಧ್ಯಂತರ ಆದೇಶ ಹೊರಡಿಸಬೇಕು ಎಂದು ಅರ್ಜಿದಾರರು ಮಾಡಿದ್ದಾರೆ.
ವಿಕಲಚೇತನರಿಗೆ ಅನುಕೂಲವಿಲ್ಲ: ಅರ್ಜಿದಾರರ ಪರ ವಕೀಲರು, ಪೊಲಿಯೋ ಕಾರಣಕ್ಕೆ ಅಂಗವೈಕಲ್ಯಕ್ಕೆ ತುತ್ತಾಗಿರುವ ಅರ್ಜಿದಾರರು, ಓಡಾಟಕ್ಕಾಗಿ ಗಾಲಿ ಖುರ್ಚಿಯನ್ನು ಅವಲಂಬಿಸಿದ್ದಾರೆ. ಆದರೆ, 2022ರ ಅ.28ರಂದು ಬಿಎಂಟಿಸಿ 840 ಹೊಸ ಬಸ್‌ಗಳ ಖರೀದಿಗೆ ಟೆಂಡರ್ ಆಹ್ವಾನಿಸಿ ಅಧಿಸೂಚನೆ ಹೊರಡಿಸಿದೆ.
ಇದನ್ನು ಪ್ರಶ್ನಿಸಿರುವ ಅರ್ಜಿದಾರರು, ಖರೀದಿಸಲು ಉದ್ದೇಶಿಸಿರುವ ಬಸ್‌ಗಳ ಚಾಸಿಸ್‌ನ (ತಳಕಟ್ಟು) ಎತ್ತರ, 1000 ಮಿಲಿ ಮೀಟರ್ ಇರಬೇಕು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ. ಆದರೆ, ಮೋಟಾರು ವಾಹನ ಕಾಯ್ದೆಯ ನಿಯಮಗಳಿಗೆ ವಿರುದ್ಧವಾಗಿದೆ ಎಂದರು.
ಆದ್ದರಿಂದ ಖರೀದಿಸಲು ಉದ್ದೇಶಿಸಿರುವ ಬಸ್‌ಗಳ ಚಾಸಿಸ್‌ನ (ತಳಕಟ್ಟು) ಎತ್ತರ 1000 ಮಿಲಿ ಮೀಟರ್ ಇರಬೇಕು ಎನ್ನುವುದಕ್ಕೆ ಸೀಮಿತವಾಗಿ ಅಧಿಸೂಚನೆ ರದ್ದುಪಡಿಸಬೇಕು ಎಂದು ಕೋರಿದ್ದಾರೆ.
ಅಲ್ಲದೆ, ಬಸ್‌ನ ನೆಲಮಟ್ಟದಿಂದ ಎತ್ತರದ 400 ಮಿಲಿ ಮೀಟರ್‌ನಿಂದ 650 ಮಿ. ಮೀ. ಇರುವ ಮತ್ತು ಬಾಗಿಲು ಮೂಲಕ ಗಾಲಿ ಕುರ್ಚಿಗಳಿಂದ ಹತ್ತು ಇಳಿಯಲು ಅನುಕೂಲವಾಗುವಂತೆ ವ್ಯವಸ್ಥೆ ಇರುವ (ವೀಲ್ ಚೇರ್ ಬೋಡಿಂಗ್ ಡಿವೈಸ್) ಬಸ್‌ಗಳನ್ನು ಖರೀದಿ ಮಾಡಲು ಆದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.












Click it and Unblock the Notifications