ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹಿಂದೂ ಸಂಘಟನೆಗಳ ಪ್ರತಿಭಟನೆ : ಉತ್ತರ ಕನ್ನಡ ಉದ್ವಿಗ್ನ

By ಉತ್ತರ ಕನ್ನಡ ಪ್ರತಿನಿಧಿ
|
Google Oneindia Kannada News

Recommended Video

ಬಿಜೆಪಿ ಹಾಗು ವಿಶ್ವ ಹಿಂದೂ ಪರಿಷದ್ ಪ್ರತಿಭಟನೆ : ಉತ್ತರ ಕನ್ನಡ ಜಿಲ್ಲೆ ಹೊತ್ತಿ ಉರಿಯುತ್ತಿದೆ | Oneindia Kannada

ಕುಮಟಾ, ಡಿಸೆಂಬರ್. 11 : ಹೊನ್ನಾವರ ತಾಲೂಕಿನ ಪರೇಶ್ ಮೇಸ್ತ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಪ್ರಕ್ಷಬ್ಧ ವಾತಾವರಣ ನಿರ್ಮಾಣವಾಗಿದೆ.

ಸೋಮವಾರ ಕಾರವಾರ, ಹೊನ್ನಾವರ, ಕುಮಟಾ, ಮುಂಡಗೋಡದಲ್ಲಿ ಹಿಂದೂ ಸಂಘಟನೆಗಳು ಬಂದ್ ಆಚರಣೆ ಮಾಡಲಾಗುತ್ತಿವೆ. ಕುಮಟಾದಲ್ಲಿ ಬಂದ್ ವೇಳೆ ಹಿಂಸಾಚಾರ ಸಂಭವಿಸಿದೆ.

ಪರೇಶ್ ನಿಗೂಢ ಸಾವಿನ ನಂತರ ಕಟ್ಟೆಯೊಡೆಯಿತೇ ಹಿಂದುಗಳ ತಾಳ್ಮೆ?ಪರೇಶ್ ನಿಗೂಢ ಸಾವಿನ ನಂತರ ಕಟ್ಟೆಯೊಡೆಯಿತೇ ಹಿಂದುಗಳ ತಾಳ್ಮೆ?

Tension prevails in Uttara Kannada

ಕಾರವಾರದಲ್ಲಿ ಟೈರ್‌ಗಳಿಗೆ ಬೆಂಕಿ ಹಚ್ಚಲಾಗಿದೆ. ನಗರದಾದ್ಯಂತ ಮೆರವಣಿಗೆ ನಡೆಸಿದ ಹಿಂದೂಪರ ಸಂಘಟನೆಗಳು ಸುಮಾರು ಮೂರು ತಾಸು ಹೆದ್ದಾರಿ ಸಂಚಾರ ಬಂದ್ ಮಾಡಿಸಿದ್ದರು.

ಹೊನ್ನಾವರ: 2 ಗುಂಪು ಮಧ್ಯೆ ಘರ್ಷಣೆ, ಕಲ್ಲು ತೂರಾಟ, ಲಾಠಿ ಚಾರ್ಜ್ಹೊನ್ನಾವರ: 2 ಗುಂಪು ಮಧ್ಯೆ ಘರ್ಷಣೆ, ಕಲ್ಲು ತೂರಾಟ, ಲಾಠಿ ಚಾರ್ಜ್

ಸ್ವಯಂಪ್ರೇರಿತ ಬಂದ್ ಎಂದಿದ್ದ ಬಿಜೆಪಿಯವರು ತಾವೇ ಬೆಳಗ್ಗೆಯಿಂದಲೇ ಅಂಗಡಿ, ಬಸ್ಸು, ಟೆಂಪೋಗಳವರಿಗೆ ಬಂದ್ ಆಚರಿಸಲು ಒತ್ತಾಯಿಸಿದರು. ಕಿಡಿಗೇಡಿಗಳ ಗುಂಪೊಂದು ಅಗ್ನಿಶಾಮಕ ದಳದ ವಾಹನದ ಮೇಲೆ ಕಲ್ಲು ತೂರಾಟ ನಡೆಸಿತು.

ಕುಮಟಾದಲ್ಲಿ ಪಶ್ಚಿಮ ವಲಯ ಐಜಿಪಿ ಹೇಮಂತ್ ನಿಂಬಾಳ್ಕರ್ ಅವರ ಕಾರಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. 2 ಪೊಲೀಸ್ ವಾಹನಗಳನ್ನು ಜಖಂಗೊಳಿಸಿದ್ದಾರೆ. 4 ಬಸ್‌ಗಳು ಜಖಂಗೊಂಡಿದೆ. 30 ಪೊಲೀಸರು ಕಲ್ಲು ತೂರಾಟದಿಂದಾಗಿ ಗಾಯಗೊಂಡಿದ್ದಾರೆ.

ಪ್ರತಿಭಟನಾನಿರತರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದರಿಂದ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು. ಉದ್ರಿಕ್ತ ಗುಂಪನ್ನು ಚದುರಿಸಲು ಅಶ್ರುವಾಯು ಸಿಡಿಸಿದರು.

English summary
Tension prevailed in Kumta and other taluks of Uttara Kannada in the time of protest by Hindu organizations on December 11, 2017. Hindu organizations demanding for probe of Paresh Mesta murder case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X