ನೆಲಮಂಗಲ ನಂತರ ಪುಣೆ - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ !

ರಾಜ್ಯದಲ್ಲಿ ನೆಲಮಂಗಲದ ಭೀಕರ ಕಾರು ಅಪಘಾತದ ದೃಶ್ಯಗಳನ್ನು ಮರೆಯುವ ಮುನ್ನವೇ ಕರ್ನಾಟಕದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಹಾವೇರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಈ ದೃಶ್ಯಗಳು ಎಂತವರ ಎದೆಯನ್ನು ನಡುಗಿಸಿವಂತೆ ಇದೆ. ಇಲ್ಲಿನ ಪುಣೆ - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದು, ಇನ್ನುಳಿದವರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಇತ್ತೀಚಿನ ದಿನಗಳಲ್ಲಿ ಅತಿ ವೇಗ ಹಾಗೂ ನಿರ್ಲಕ್ಷ್ಯದ ವಾಹನ ಚಾಲನೆಯಿಂದಾಗಿ ರಾ‌ಷ್ಟ್ರೀಯ ಹೆದ್ದಾರಿಗಳಲ್ಲಿ ಭೀಕರ ರಸ್ತೆ ಅಪಘಾತಗಳು ಸಂಭವಿಸುತ್ತಿವೆ. ಇದೀಗ ಪುಣೆ - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ಕಾರು ಅಪಘಾತದಲ್ಲಿ 11 ವರ್ಷದ ಬಾಲಕ ಸೇರಿದಂತೆ ನಾಲ್ವರು ಸಾವನ್ನಪ್ಪಿರುವುದು ವರದಿಯಾಗಿದೆ.

ತುಮಕೂರು-ಬೆಂಗಳೂರು ಹೆದ್ದಾರಿ ನಡುವೆ ಈಚೆಗೆ ಭೀಕರ ರಸ್ತೆ ಅಪಘಾತ ಸಂಭವಿಸಿತ್ತು. ಈ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಆರು ಜನ ಸಾವನ್ನಪ್ಪಿದ್ದರು. ಒಂದೇ ಕುಟುಂಬದ ಆರು ಜನ ಸಾವನ್ನಪ್ಪಿದ ಘಟನೆ ನೆನಪಿನಿಂದ ಮಾಸುವ ಮುನ್ನವೇ ಕರ್ನಾಟಕದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಮಗು ಸಹ ಸಾವನ್ನಪ್ಪಿದೆ.

Terrible Road Accident in Pune-Bengaluru National Highway Four people died

ಅಪಘಾತ ಸಂಭವಿಸಿದ್ದು ಹೇಗೆ: ಇಲ್ಲಿನ ಪುಣೆ - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಮಧ್ಯಾಹ್ನ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಿಂದಾಗಿ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ಪುಣೆ - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮಾರ್ಗದಲ್ಲಿರುವ ತಡಸ ಕ್ರಾಸ್ ಬಳಿ ಈ ದುರ್ಘಟನೆ ನಡೆದಿದೆ. ಅಪಘಾತ ಸಂಭವಿಸಿದ ವಿಷಯ ತಿಳಿದ ಕೂಡಲೇ ಸ್ಥಳೀಯರು ಹಾಗೂ ಪೊಲೀಸರು ಸಹಾಯಕ್ಕೆ ಧಾವಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಗಾಯಾಳುಗಾಳನ್ನು ಆಸ್ಪತ್ರೆಗೆ ಸೇರಿದ್ದಾರೆ.

ರಸ್ತೆ ಅಪಘಾತದಲ್ಲಿ ಮೃತಪಟ್ಟವರ ವಿವರ ಈ ರೀತಿ ಇದೆ. ಈ ಭೀಕರ ಅಪಘಾತದಲ್ಲಿ ಬೆಂಗಳೂರಿನ ಚಾಮರಾಜಪೇಟೆಯ ಚಂದ್ರಮ್ಮ (ವಯಸ್ಸು 59 ವರ್ಷ) ಮೀನಾ ವಯಸ್ಸು 38 ವರ್ಷ, (ಚಂದ್ರಮ್ಮನ ಮಗಳು) ಹರಿಹರ, ಮಹೇಶ್ ಕುಮಾರ್ ಸಿ ,(ಕಾರು ಚಾಲಕರು ಹಾಗೂ ಮಾಲೀಕರು) ವಯಸ್ಸು 41 ಸಾ-ಹರಿಹರ ದಾವಣಗೆರೆ ಜಿಲ್ಲೆ ಹಾಗೂ ಹರಿಹರದ 11 ವರ್ಷ ಬಾಲಕ ಧನವೀರ ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ನಜ್ಜುಗುಜ್ಜಾದ ಕಾರು: ಕಾರು ಅಪಘಾತ ಎಷ್ಟು ಭೀಕರವಾಗಿತ್ತು ಎನ್ನುವುದಕ್ಕೆ ಅಪಘಾತಕ್ಕೆ ಒಳಗಾದ ಕಾರುಗಳು ಸಾಕ್ಷಿಯಂತಿವೆ. ಕಾರುಗಳು ಸಂಪೂರ್ಣ ಜಖಂಗೊಂಡಿದ್ದು, ಅಪಘಾತದಲ್ಲಿ ಜಖಂ ಆಗಿವೆ. ಅಪಘಾತ ಸಂಭವಿಸಿದ ಸುದ್ದಿ ಕೇಳಿದ ಕೂಡಲೇ ಅಕ್ಕಪಕ್ಕದ ರಸ್ತೆಗಳಲ್ಲಿ ಇದ್ದ ಸ್ಥಳೀಯರು ಸಹಾಯಕ್ಕೆ ಧಾವಿಸಿದ್ದಾರೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತಕ್ಕೆ ಕಾರಣ ಏನು ಎನ್ನುವುದು ಪೊಲೀಸರ ತನಿಖೆಯ ನಂತರ ತಿಳಿಯಬೇಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+