ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

8 ರಾಜ್ಯದಲ್ಲಿ ಉಗ್ರರ ದಾಳಿ ಸಾಧ್ಯತೆ : ನೀಲಮಣಿ ರಾಜು ತುರ್ತು ಪತ್ರ

|
Google Oneindia Kannada News

ಬೆಂಗಳೂರು, ಏಪ್ರಿಲ್ 27 : ಭಾರತದ 8 ರಾಜ್ಯಗಳ ಪ್ರಮುಖ ನಗರಗಳಲ್ಲಿ ಭಯೋತ್ಪಾದಕ ದಾಳಿ ನಡೆಯಬಹುದು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ಎನ್.ರಾಜು ಅಕ್ಕ-ಪಕ್ಕದ ರಾಜ್ಯಗಳ ಪೊಲೀಸ್ ಮುಖ್ಯಸ್ಥರಿಗೆ ಪತ್ರ ಬರೆದಿದ್ದಾರೆ.

ಶುಕ್ರವಾರ ಬೆಂಗಳೂರಿನ ಪೊಲೀಸ್ ಕಂಟ್ರೋಲ್‌ ರೂಂಗೆ ಬಂದ ಫೋನ್ ಕರೆ ಆಧರಿಸಿ ಈ ಪತ್ರವನ್ನು ನೀಲಮಣಿ ಎನ್.ರಾಜು ಬರೆದಿದ್ದಾರೆ. ತಮಿಳು ಮತ್ತು ಹಿಂದಿ ಭಾಷೆಯಲ್ಲಿ ಮಾತನಾಡುತ್ತಿದ್ದ ವ್ಯಕ್ತಿ ಉಗ್ರರ ದಾಳಿಯ ನಡೆಯಬಹುದು ಎಂದು ಮಾಹಿತಿ ನೀಡಿದ್ದಾನೆ.

ಭಾರತ ನೀಡಿದ್ದ ಎಚ್ಚರಿಕೆಯನ್ನು ಲಂಕಾ ಗಂಭೀರವಾಗಿ ತೆಗೆದುಕೊಂಡಿದ್ದರೆಭಾರತ ನೀಡಿದ್ದ ಎಚ್ಚರಿಕೆಯನ್ನು ಲಂಕಾ ಗಂಭೀರವಾಗಿ ತೆಗೆದುಕೊಂಡಿದ್ದರೆ

ತಮಿಳುನಾಡು, ಕೇರಳ, ಆಂಧ್ರ ಪ್ರದೇಶ, ತೆಲಂಗಾಣ, ಪುದುಚೇರಿ, ಗೋವಾ, ಮಹಾರಾಷ್ಟ್ರ ಮತ್ತು ಕರ್ನಾಟಕದ ಪ್ರಮುಖ ನಗರಗಳಲ್ಲಿ ಉಗ್ರರು ದಾಳಿ ನಡೆಸಬಹುದು ಎಂದು ಪತ್ರದಲ್ಲಿ ವಿವರಣೆ ನೀಡಲಾಗಿದೆ.

ಪುಲ್ವಾಮಾ ಘಟನೆ: ಇನ್ನಷ್ಟು ಆತ್ಮಹತ್ಯಾ ದಾಳಿಗಳ ಅಪಾಯದ ಮುನ್ಸೂಚನೆಯೇ?ಪುಲ್ವಾಮಾ ಘಟನೆ: ಇನ್ನಷ್ಟು ಆತ್ಮಹತ್ಯಾ ದಾಳಿಗಳ ಅಪಾಯದ ಮುನ್ಸೂಚನೆಯೇ?

Neelamani N.Raju

ಪತ್ರದ ವಿವರ : ಸ್ವಾಮಿ ಸುಂದರ್ ಮೂರ್ತಿ ಎನ್ನುವ ಹೆಸರಿನ ಲಾರಿ ಡ್ರೈವರ್ ಬೆಂಗಳೂರಿನ ಪೊಲೀಸ್ ಕಂಟ್ರೋಲ್ ರೂಂಗೆ ಶುಕ್ರವಾರ ರಾತ್ರಿ ಕರೆ ಮಾಡಿದ್ದ. ತಮಿಳುನಾಡಿಗೆ ಹೋಗುತ್ತಿದ್ದ ಆತ ಹಿಂದಿ ಮತ್ತು ತಮಿಳಿನಲ್ಲಿ ಮಾತನಾಡುತ್ತಿದ್ದ.

ದೆಹಲಿ, ಮುಂಬೈ, ಗೋವಾ ಮೇಲೆ ಎರಡೆರಡು ಭಯೋತ್ಪಾದನಾ ದಾಳಿ ಎಚ್ಚರಿಕೆದೆಹಲಿ, ಮುಂಬೈ, ಗೋವಾ ಮೇಲೆ ಎರಡೆರಡು ಭಯೋತ್ಪಾದನಾ ದಾಳಿ ಎಚ್ಚರಿಕೆ

ಕರ್ನಾಟಕ, ಕೇರಳ, ಆಂಧ್ರಪ್ರದೇಶ, ತೆಲಂಗಾಣ, ಪುದುಚೇರಿ, ಗೋವಾ, ಮಹಾರಾಷ್ಟ್ರ ಮತ್ತು ತಮಿಳುನಾಡಿನ ಪ್ರಮುಖ ನಗರಗಳಲ್ಲಿ ಉಗ್ರರ ದಾಳಿ ನಡೆಯಬಹುದು. ರೈಲಿನಲ್ಲಿ ಸ್ಪೋಟ ಸಂಭವಿಸಬಹುದು. 19 ಉಗ್ರರು ತಮಿಳುನಾಡಿನ ರಾಮನಾಥಪುರಂಗೆ ಬಂದಿದ್ದಾರೆ ಎಂದು ಮಾಹಿತಿ ನೀಡಿದ್ದಾನೆ.

ತಮ್ಮ ರಾಜ್ಯಗಳಲ್ಲಿ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಬೇಕು. ಇದು ಅತ್ಯಂತ ತುರ್ತು ವಿಷಯವಾಗಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

letter
English summary
Karnataka DG-IGP Neelamani N.Raju writes to DGs of Tami Nadu, Kerala, Andhra, Telangana, Puducherry, Goa, Maharashtra following a phone call by a man claiming to have info that cities in Tamil Nadu, Karnataka, Kerala, Andhra, Telangana, Puducherry, Goa, Maharashtra will be hit by terror attacks.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X