Get Updates
Get notified of breaking news, exclusive insights, and must-see stories!

ಪರಿಷ್ಕೃತ ಪಠ್ಯ ಪುಸ್ತಕ ವಾಪಸಿಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರ ಪ್ರತಿಭಟನೆ

ಬೆಂಗಳೂರು, ಜೂ. 09: ನಾಡಿನ ಮಹಾನ್ ಚೇತನಗಳಿಗೆ ಅಪಮಾನ ಮಾಡಿ ರೋಹಿತ್ ಚಕ್ರತೀರ್ಥ ಪರಿಷ್ಕರಿಸಿರುವ ಪಠ್ಯ ಪುಸ್ತಕಗಳನ್ನು ವಾಪಸು ಪಡೆಯಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು.

ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಶಾಸಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಹಾಗೂ ಕಾಂಗ್ರೆಸ್‌ ಶಾಸಕಾಂಗ ಪಕ್ಷ ಎರಡೂ ಜಂಟಿಯಾಗಿ ರೋಹಿತ್ ಚಕ್ರತೀರ್ಥ ಪರಿಷ್ಕರಣೆ ಮಾಡಿರುವ ಪಠ್ಯಕ್ರಮವನ್ನು ವಿರೋಧಿಸಿ ಸಾಂಕೇತಿಕವಾಗಿ ಇಂದು ಮುಷ್ಕರ ನಡೆಸುತ್ತಿದ್ದೇವೆ.

ಸರ್ಕಾರ ರೋಹಿತ್ ಚಕ್ರತೀರ್ಥ ಸಮಿತಿಯನ್ನು ವಿಸರ್ಜನೆ ಮಾಡಿದೆ. ಸಾರ್ವಜನಿಕರು, ಸಾಹಿತಿಗಳು, ಮಠಾಧೀಶರು, ಶಿಕ್ಷಣ ತಜ್ಞರು, ರಾಜಕಾರಣಿಗಳಿಂದ ತೀವ್ರವಾದ ವಿರೋಧ ವ್ಯಕ್ತವಾದದ್ದು ಇದಕ್ಕೆ ಕಾರಣ ಎಂದರು. ಸಮಿತಿ ವಿಸರ್ಜನೆ ಮಾಡಿದ ಮೇಲೆ ಆ ಸಮಿತಿ ಶಿಫಾರಸು ಮಾಡಿದ ಪಠ್ಯವನ್ನು ಇಟ್ಟುಕೊಂಡಿದೆ. ಸಮಿತಿ ವಜಾ ಆಗಿರುವುದರಿಂದ ಆ ಸಮಿತಿ ಪರಿಷ್ಕರಣೆ ಮಾಡಿದ ಪಠ್ಯವನ್ನು ಮಕ್ಕಳಿಗೆ ಬೋಧನೆ ಮಾಡಬಾರದು. ಪರಿಷ್ಕರಣೆಗೊಂಡ ಪಠ್ಯದಲ್ಲಿ ಇತಿಹಾಸ ತಿರುಚುವ ಕೆಲಸ ಆಗಿದೆ ಎಂದು ದೂರಿದರು.

Text Book Row: Congress Leaders Protest in Vidhana Soudha Over Saffronisation of Education

ಬಸವಣ್ಣ, ಅಂಬೇಡ್ಕರ್‌, ನಾರಾಯಣ ಗುರು, ಕುವೆಂಪು, ಭಗತ್‌ ಸಿಂಗ್‌, ಇನ್ನೂ ಅನೇಕ ಸಂತರು, ದಾರ್ಶನಿಕರ ಚರಿತ್ರೆಗಳನ್ನು ತಿರುಚಲಾಗಿದೆ. 9ನೇ ತರಗತಿ ಪಠ್ಯದಲ್ಲಿ ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರನ್ನು ಸಂವಿಧಾನ ಶಿಲ್ಪಿ ಎಂದು ಕರೆಯಲಾಗಿತ್ತು, ಈಗ ಅದನ್ನು ತೆಗೆದು ಹಾಕಲಾಗಿದೆ. ಬಸವಣ್ಣನವರು ವೈದಿಕ ಧರ್ಮಕ್ಕೆ ಪರ್ಯಾಯವಾಗಿ ಲಿಂಗಾಯತ ಧರ್ಮವನ್ನು ಸ್ಥಾಪನೆ ಮಾಡಿದ್ದಾರೆ. ಇದನ್ನು ತೆಗೆದುಹಾಕಲಾಗಿದೆ. ಹೀಗೆ ದೇಶಭಕ್ತರು, ದಾರ್ಶನಿಕರ ವಿಚಾರಗಳನ್ನು ತಿರುಚಿ ಕೇಸರಿಕರಣಗೊಳಿಸಲಾಗಿದೆ ಎಂದು ಸಿದ್ದರಾಮಯ್ಯ ಹರಿಹಾಯ್ದರು.

Text Book Row: Congress Leaders Protest in Vidhana Soudha Over Saffronisation of Education

ಶಿಕ್ಷಣ ಸಚಿವ ನಾಗೇಶ್‌ ಅವರು ಮೊದಲು ಪರಿಷ್ಕರಣೆಗೊಂಡ ಪಠ್ಯವನ್ನು ಯಾವುದೇ ಕಾರಣಕ್ಕೂ ಬದಲಾವಣೆ ಮಾಡಲ್ಲ ಎಂದು ಹೇಳಿದ್ದರು. ಗಣ್ಯ ವ್ಯಕ್ತಿಗಳಿಂದ ಇದಕ್ಕೆ ಪ್ರತಿರೋಧ ವ್ಯಕ್ತವಾದ ಮೇಲೆ ಕೆಲವು ವಿಚಾರಗಳನ್ನು ಪುನರ್‌ ಪರಿಶೀಲನೆ ಮಾಡುತ್ತೇವೆ, ಇನ್ನೊಂದು ತಿಂಗಳಲ್ಲಿ ಪಠ್ಯಪುಸ್ತಕ ಮುದ್ರಣ ಮಾಡಿ ಮಕ್ಕಳಿಗೆ ಹಂಚುತ್ತೇವೆ ಎಂದಿದ್ದಾರೆ. ಇದರರ್ಥ ತಾವು ಚರಿತ್ರೆ ತಿರುಚಿರುವುದು ಸತ್ಯ, ಆರ್.ಎಸ್.ಎಸ್‌ ನಿರ್ದೇಶನದಂತೆ ಪಠ್ಯ ರಚನೆ ಮಾಡಿದ್ದಾರೆ ಎಂದು ಒಪ್ಪಿಕೊಂಡಂತೆ ಎಂದು ಹೇಳಿದರು.

ನಾವು ಒಂದು ರಾಷ್ಟ್ರೀಯ ಪಕ್ಷವಾಗಿ ಮಕ್ಕಳಿಗೆ ವೈಜ್ಞಾನಿಕ, ವೈಚಾರಿಕ, ನೈಜ ಇತಿಹಾಸವನ್ನು ತಿಳಿಸುವ ಕೆಲಸ ಮಾಡಬೇಕು, ಕೇಸರಿಕರಣಗೊಂಡಿರುವ ಪಠ್ಯವನ್ನು ಮಕ್ಕಳಿಗೆ ತಿಳಿಸಬಾರದು ಎಂದು ಒತ್ತಾಯ ಮಾಡುತ್ತೇವೆ. ಆರ್. ಎಸ್. ಎಸ್‌ ನಲ್ಲಿ ಮಾಡುವ ಭಾಷಣವನ್ನು ಮಕ್ಕಳಿಗೆ ತಿಳಿಸಿ, ಅವರ ಮನಸನ್ನು ಹಾಳು ಮಾಡುವ ಕೆಲಸ ಮಾಡಬಾರದು ಎಂಬುದು ನಮ್ಮ ನಿಲುವು ಎಂದರು.

Text Book Row: Congress Leaders Protest in Vidhana Soudha Over Saffronisation of Education

Recommended Video

      ಕ್ಷಣ ಮಾತ್ರದಲ್ಲೇ ಪಾರಾದ ಆನೆ !! | Oneindia Kannada

      ಸರ್ಕಾರ ಪರಿಷ್ಕೃತ ಪಠ್ಯವನ್ನು ವಾಪಾಸು ಪಡಿಸಬೇಕು ಹಾಗೂ ಬರಗೂರು ರಾಮಚಂದ್ರಪ್ಪನವರು ಪರಿಷ್ಕರಣೆ ಮಾಡಿದ್ದ ಪಠ್ಯವನ್ನೇ ಮುಂದುವರೆಸಬೇಕು ಎಂಬುದು ನಮ್ಮ ಒತ್ತಾಯ. ಇದನ್ನು ಸರ್ಕಾರ ಈಡೇರಿಸದೆ ಹೋದರೆ ಮುಂದಿನ ಹೋರಾಟದ ರೂಪುರೇಷಗಳನ್ನು ಚರ್ಚಿಸಿ, ತೀರ್ಮಾನ ಮಾಡಲಾಗುವುದು ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+