ಪರಿಷ್ಕೃತ ಪಠ್ಯ ಪುಸ್ತಕದಲ್ಲಿನ ತಿದ್ದುಪಡಿ; ಸಿದ್ದರಾಮಯ್ಯ ಗರಂ
ಬೆಂಗಳೂರು ಜೂ. 30: "ಪಠ್ಯ ಪುಸ್ತಕ ತಿದ್ದುಪಡಿ ವಿಚಾರದಲ್ಲಿ ರಾಜ್ಯ ಸರ್ಕಾರ ಕೈಗೊಂಡ ಕ್ರಮ ಅರಾಜಕ ನಿಲುವಿನದ್ದಾಗಿದೆ" ಎಂದು ಗುರುವಾರ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ರಾಜ್ಯ ಸರ್ಕಾರ ಪಠ್ಯ ಪುಸ್ತಕ ಪರಿಷ್ಕರಣೆಯಲ್ಲಿ ಲೋಪ ದೋಷಗಳಾಗಿವೆ ಎಂದು ಕೊನೆಗೂ ಒಪ್ಪಿಕೊಂಡಿದೆ. ಒಂದರಿಂದ ರಿಂದ 10ನೇ ತರಗತಿ ವರೆಗಿನ ಕನ್ನಡ ಭಾಷಾ ಪಠ್ಯ ಪುಸ್ತಕ, ಸಮಾಜ ವಿಜ್ಞಾನ ಪಠ್ಯ ಪುಸ್ತಕ ಹಾಗೂ ಸೀಮಿತ ತರಗತಿಗಳ ಪರಿಸರ ವಿಜ್ಞಾನ ವಿಷಯಗಳಿಗೆ ಸಂಬಂಧಿಸಿದಂತೆ ಒಟ್ಟು 83 ಕಡೆ ತಿದ್ದುಪಡಿಗಳನ್ನು ಮಾಡಲಾಗಿದೆ ಎಂಬ ಮಾಹಿತಿ ಇದೆ ಎಂದರು.
ಈಗಾಗಲೇ ಆಗಿರುವ ಪರಿಷ್ಕರಣೆಯಲ್ಲಿನ ತಪ್ಪುಗಳನ್ನು ತಿದ್ದುಪಡಿ ಮಾಡಲಾಗಿದೆ. ಆದರೆ ಅಷ್ಟು ತಿದ್ದುಪಡಿಗಳಲ್ಲಿ ಬಹುತೇಕ ವಿವರಗಳು ಸಂವಿಧಾನ ವಿರೋಧಿ ಆಗಿವೆ. ದುರುದ್ದೇಶ ನಿಲುವಿನಿಂದ ಕೂಡಿವೆ ಎಂಬುದು ನಾಡಿನ ಶಿಕ್ಷಣ ತಜ್ಞರುಗಳು ಅಭಿಪ್ರಾಯಪಟ್ಟಿದ್ದಾರೆ ಎಂದು ವಿವರಿಸಿದರು.

ತಿಪ್ಪೆ ಸಾರಿಸುವ ಕೆಲಸ
ರಾಜ್ಯ ಸರ್ಕಾರ ತನ್ನ ಆದೇಶದಲ್ಲಿ ಪರಿಷ್ಕೃತ ಪಠ್ಯ ಪುಸ್ತಕದಲ್ಲಿನ 7-8 ಕಡೆಗಳಲ್ಲಿ ತಿದ್ದುಪಡಿಗಳನ್ನಷ್ಟೇ ಮಾಡಿದೆ ಎನ್ನುವ ಮೂಲಕ ತಿಪ್ಪೆ ಸಾರಿಸುವ ಕೆಲಸ ಮಾಡುತ್ತಿದೆ. ಶರಣರು, ದಾರ್ಶನಿಕರು ಸೇರಿದಂತೆ ಸಮಾಜ ಸುಧಾರಕರ ಅಪಮಾನ ಮಾಡಿದ್ದಲ್ಲದೇ, ಆಗಿರುವ ತಪ್ಪುಗಳನ್ನು ಸಮರ್ಥಿಕೊಂಡ ರೀತಿಯಲ್ಲಿನ ನಡೆದುಕೊಳ್ಳುತ್ತಿರುವ ಕ್ರಮ ಸರಿಯಲ್ಲ ಎಂದು ಕಿಡಿ ಕಾರಿದ್ದಾರೆ.

ಶೀಫಾರಸಿನ ಅಂಶಗಳನ್ನು ಪರಿಶೀಲಿಸಬೇಕು:
ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ಮಾಡಿರುವ ಶಿಫಾರಸ್ಸುಗಳನ್ನು ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ತಜ್ಞರುಗಳು ಪರಿಶೀಲನೆಗೆ ಒಳಪಡಿಸಿ. ಶೀಫಾರಸಿನ ವಿವರಗಳು ನಾಡಿನ ಜ್ಞಾನ ಪರಂಪರೆಗೆ ಅನುಗುಣವಾಗಿ ಇವೆಯೆ?. ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುತ್ತವೆಯೆ? ಎಂಬುದನ್ನು ನೋಡಬೇಕು.
ಆ ಸಮಿತಿ ಶಿಫಾರಸುಗಳು ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಾನದಂಡಗಳಿಗೆ ಅನುಗುಣವಾಗಿ ಇವೆಯೇ?. ಮಕ್ಕಳಿಗೆ ಕಲಿಸುವ ಸಂಗತಿಗಳು ದೇಶದ ಹಾಗೂ ಜಗತ್ತಿನ ವಿವಿಧ ಜ್ಞಾನ ಶಾಖೆಗಳ ವಿದ್ವಾಂಸರುಗಳು ಒರೆಗೆ ಹಚ್ಚಿ, ಪರಿಶೀಲಿಸಿ ಸರ್ವ ಸಮ್ಮತಿಯ ಅಭಿಪ್ರಾಯಕ್ಕೆ ಬರಲಾಗಿದೆಯೇ? ಎಂಬ ಅಂಶಗಳೆಲ್ಲ ಮೊದಲು ಇತ್ಯರ್ಥ ಆಗಬೇಕಿದೆ ಎಂದು ಅವರು ತಿಳಿಸಿದ್ದಾರೆ.

ಪರಿಶೀಲನೆ ಬಳಿಕೆ ವಿತರಿಸಿ
ಪರಿಷ್ಕೃತ ಪಠ್ಯಪುಸ್ತಕದಲ್ಲಿನ ಅಂಶಗಳು ಈ ರೀತಿ ಪರಿಶೀಲನೆಗೆ ಒಳಪಡದಿದ್ದರೆ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತದೆ. ಯುಪಿಎಸ್‍ಸಿ, ಕೆಪಿಎಸ್‍ಸಿ ಮುಂತಾದ ಪರೀಕ್ಷಾ ಪ್ರಾಧಿಕಾರಗಳು ನಡೆಸುವ ಪರೀಕ್ಷೆಗಳಲ್ಲಿ ಹಾಗೂ ಜಗತ್ತಿನ ಬೇರೆ ಬೇರೆ ಕಾಲೇಜು, ವಿಶ್ವ ವಿದ್ಯಾಲಯಗಳಲ್ಲಿ ಕಲಿಯಲು ಇಚ್ಛಿಸುವವರು ಸತ್ಯ ಸಂಗತಿಗಳಿಗೆ ವಿರುದ್ಧವಾದ ಅಂಶಗಳನ್ನು ಬರೆಯಬೇಕಾಗುತ್ತದೆ. ಇದು ವಿದ್ಯಾರ್ಥಿಗಳ ಫಲಿತಾಂಶದ ಮೇಲೆ ದುಷ್ಪರಿಣಾಮ ಬೀರುತ್ತದೆ. ಆದ್ದರಿಂದ ಸಮಗ್ರ ತಿದ್ದುಪಡಿಗಳನ್ನು ಪರಿಶೀಲನೆ ಮಾಡಿದ ನಂತರವೆ ಮಕ್ಕಳಿಗೆ ಪಠ್ಯ ಪುಸ್ತಕ ವಿತರಿಸಬೇಕು ಎಂದು ಆಗ್ರಹಿಸಿದರು.

ಪಠ್ಯ ವಿವಾದ ಮಾಡಿದವ ವಿರುದ್ಧ ಸೂಕ್ತ ಕ್ರಮ:
ಪ್ರಸ್ತುತ ಸರ್ಕಾರ ಮಾಡಿರುವ ದುರುದ್ದೇಶದ ಆವಾಂತರಗಳನ್ನು ಪುಸ್ತಕಗಳಲ್ಲಿ ಸರಿಪಡಿಸದೆ ಎಸ್ ಡಿಎಂಸಿಗಳು ಸ್ವತಃ ಝೆರಾಕ್ಸ್ ಮಾಡಿ ಮಕ್ಕಳಿಗೆ ವಿತರಿಸಲು ಹೇಳುತ್ತಿರುವುದು ಅರಾಜಕವಾದ ನಡೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರ ಕೂಡಲೇ ಅವಾಂತರಕಾರಿ ಆದ ಪರಿಷ್ಕೃತ ಪಠ್ಯ ಪುಸ್ತಕಗಳನ್ನು ವಾಪಸ್ಸು ಪಡೆಯಬೇಕು. ಪರಿಷ್ಕರಣೆ ಕುರಿತ ಎಲ್ಲ ಆವಾಂತರಗಳು ಸರಿಯಾಗುವವರೆಗೆ ಬರಗೂರು ಸಮಿತಿಯು ಸಿದ್ಧಪಡಿಸಿದ್ದ ಪಠ್ಯ ಪುಸ್ತಕಗಳನ್ನೆ ಮುಂದುವರೆಸಬೇಕು. ಅಲ್ಲದೇ ಪಠ್ಯಪುಸ್ತಕಗಳ ವಿವಾದಕ್ಕೆ ಕಾರಣರಾದ ಎಲ್ಲರ ಬಳಿ ಆದ ನಷ್ಟ ವಸೂಲಿ ಮಾಡಿ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
-
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
ಮಾರ್ಚ್ 29ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್












Click it and Unblock the Notifications