ದರ್ಶನ್ ತಂಗಿ ಸೋನಲ್ ಮದುವೆ ಫಿಕ್ಸ್? ಲವ್ ಸ್ಟೋರಿ ಶುರುವಾಗಿದ್ದು ಹೇಗೆ ?
ಬೆಂಗಳೂರು, ಜೂನ್ 26: ಸ್ಯಾಂಡಲ್ ವುಡ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ರಕ್ಷಾ ಬಂಧನದ ದಿನದಂದು ನಟಿ ಸೋನಲ್ ಮೊಂಥೆರೋ ರಾಖಿ ಕಟ್ಟುವ ಮೂಲಕ ರಕ್ಷಾ ಬಂಧನ ಹಬ್ಬ ಆಚರಿಸಿಕೊಂಡಿದ್ದು, ಇದೀಗ ದರ್ಶನ್ ಅವರ ಸಹೋದರಿಯಂತಿದ್ದ ಸೋನಲ್ ಹಸೆಮಣೆ ಏರುತ್ತಾರೆ ಎನ್ನುವ ಸುದ್ದಿ ಜೋರಾಗಿ ಸದ್ದು ಮಾಡುತ್ತಿದೆ.
ರಾಖಿ ಹಬ್ಬದಂದು ಪ್ರೀತಿಯಿಂದ ಬಂದು ಹರಸಿದ ಹಾಗೂ ಎಲ್ಲಾ ನನ್ನ ಅಕ್ಕತಂಗಿಯರಿಗೆ ರಕ್ಷಾ ಬಂಧನ ಶುಭಾಶಯಗಳು ಎಂದು ದರ್ಶನ್ ಟ್ವೀಟ್ ಮಾಡಿದ್ದಾರೆ. ಇತ್ತ ಸೋನಲ್ ಮೊಂಥೆರೋ ತಮ್ಮ ಇನ್‌ಸ್ಟಾದಲ್ಲಿ ʻʻಮಮತೆಯ ಸೌಗಂಧವಿದು, ಸವಿ ಮನಸುಗಳ ಸಂಭ್ರಮವಿದು. ಅಣ್ಣ ತಂಗಿಯರ ಹಬ್ಬ ಇದು. ಬಿಡಿಸಲಾಗದ ಸಂಬಂಧವಿದು. ನಿಮ್ಮ ಸಂತೋಷವೇ ನನ್ನ ಪ್ರಪಂಚ, ನಿಮ್ಮಿಂದಲೇ ನನ್ನ ಬದುಕು ಇಷ್ಟೊಂದು ಸುಂದರ. ಸದಾ ನಿಮ್ಮ ಖುಷಿಯನ್ನೆ ಬಯಸುತ್ತ... ಪ್ರೀತಿಯ ಅಣ್ಣನಿಗೆ ರಕ್ಷಾ ಬಂಧನದ ಹಾರ್ದಿಕ ಶುಭಾಶಯಗಳುʼʼ ಎಂದು ಬರೆದುಕೊಂಡಿದ್ದಾರೆ.

ಇದೀಗ ತರುಣ್ ಸುಧೀರ್ ಹಾಗೂ ನಟಿ ಸೋನಾಲ್ ಮಂಥೆರೊ ಕೈ ಹಿಡಿಯುತ್ತಾರೆ ಎನ್ನುವ ಗುಸುಗುಸು ಈಗ ಕೇಳಿ ಬರ್ತಿದೆ. ತರುಣ್ ನಿರ್ದೇಶನದ 'ರಾಬರ್ಟ್' ಚಿತ್ರದಲ್ಲಿ ವಿನೋದ್ ಪ್ರಭಾಕರ್ ಜೋಡಿಯಾಗಿ ಸೋನಲ್ ಮಿಂಚಿದ್ದರು. ಮಂಗಳೂರಿನಲ್ಲಿ ಹುಟ್ಟಿ ಬೆಳೆದ ಸೋನಲ್ ಮೊದಲಿಗೆ ತುಳು ಸಿನಿಮಾಗಳಲ್ಲಿ ನಟಿಸಿದ್ದು, ಕನ್ನಡದ ಹಲವು ಸಿನಿಮಾಗಳನ್ನ ನಟಿಸಿದ್ದಾರೆ. ರಾಬರ್ಟ್ ಸಿನಿಮಾದ ನಿರ್ದೇಶಕ ತರುಣ್ ಸುಧೀರ್ ಹಾಗೂ ನಟಿ ಸೋನಲ್ ಮಂಥೆರೋ ಹಸೆಮಣೆ ಏರುತ್ತಾರೆ ಎನ್ನುವ ಸುದ್ದಿ ಗುಲ್ಲಾಗಿದ್ದು, ಈ ಬಗ್ಗೆ ಅಧಿಕೃತ ಮಾಹಿತಿ ಸಿಕ್ಕಿಲ್ಲ. ಶೀಘ್ರದಲ್ಲೇ ಜೋಡಿ ಈ ವಿಚಾರವನ್ನು ಮಾಧ್ಯಮಗಳ ಮುಂದೆ ಹೇಳಿಕೊಳ್ಳಲಿದೆ ಎಂದು ಹೇಳಲಾಗುತ್ತಿದೆ.
ತರುಣ್ ಸುಧೀರ್ ಮದುವೆ ಯಾವಾಗ ಎನ್ನುವ ಪ್ರಶ್ನೆಗೆ ಸದ್ಯ ಉತ್ತರ ಸಿಕ್ಕಿದ್ದು, ತರುಣ್ ಸುಧೀರ್ ತಾಯಿ ಮಾಲತಿ ಸುಧೀರ್ ಈ ಮದುವೆ ವಿಚಾರವನ್ನು ಖಚಿತಪಡಿಸಿದ್ದಾರೆ ಎಂದು ವರದಿಯಾಗಿದೆ. ಶೀಘ್ರದಲ್ಲೇ ಸುದ್ದಿಗೋಷ್ಠಿ ನಡೆಸಿ ಇಬ್ಬರೂ ಈ ವಿಚಾರ ಹಂಚಿಕೊಳ್ಳುತ್ತಾರೆ ಎನ್ನಲಾಗ್ತಿದೆ.
ತರುಣ್- ಸೋನಲ್ ಇಬ್ಬರ ಲವ್ ಸ್ಟೋರಿ ಆರಂಭವಾಗಿದ್ದು ಹೇಗೆ?
ತರುಣ್- ಸೋನಲ್ ಇಬ್ಬರ ಲವ್ ಸ್ಟೋರಿ ಆರಂಭವಾಗಿದ್ದು ಹೇಗೆ? ಎನ್ನುವ ಚರ್ಚೆ ಸೋಶಿಯಲ್ ಮೀಡಿಯಾದಲ್ಲಿ ಶುರುವಾಗಿದೆ. ತರುಣ್ ನಿರ್ದೇಶನದ 'ರಾಬರ್ಟ್' ಚಿತ್ರದಲ್ಲಿ ಸೋನಲ್ ನಟಿಸಿದ್ದರು. 'ರಾಬರ್ಟ್' ಚಿತ್ರದಲ್ಲಿ ವಿನೋದ್ ಪ್ರಭಾಕರ್(ರಾಘವ) ಜೋಡಿ ತನು ಆಗಿ ಸೋನಲ್ ಕಾಣಿಸಿಕೊಂಡಿದ್ದರು. ಈ ಸಿನಿಮಾ ಶೂಟಿಂಗ್ ಸಮಯದಲ್ಲೇ ತರುಣ್- ಸೋನಲ್ ನಡುವೆ ಪ್ರೀತಿ ಹುಟ್ಟಿತ್ತು ಎಂದು ಆಪ್ತರು ಹೇಳುತ್ತಿದ್ದಾರೆ.
ನಟ ದರ್ಶನ್ ತರುಣ್ ಸುಧೀರ್‌ಗೆ ಮದುವೆ ಮಾಡಿಸಬೇಕು ಎಂದು ಹೇಳುತ್ತಿದ್ದರು. ಹಾಗಾಗಿ ಶೂಟಿಂಗ್ ಸೆಟ್‌ನಲ್ಲಿ ತರುಣ್- ಸೋನಲ್ ಇಬ್ಬರನ್ನು ತಮಾಷೆಯಾಗಿ ರೇಗಿಸುತ್ತಿದ್ದರು, ಇದೇ ಸಮಯದಲ್ಲಿ ಇಬ್ಬರ ನಡುವೆ ಪ್ರೀತಿ ಮೂಡಿರಬಹುದು ಎನ್ನಲಾಗ್ತಿದೆ. ಇದೀಗ ಇಬ್ಬರೂ ಪೋಷಕರ ಒಪ್ಪಿಗೆ ಪಡೆದು ಮದುವೆಗೆ ಮುಂದಾಗಿದ್ದಾರೆ ಎಂದು ಹೇಳಲಾಗಿದೆ.












Click it and Unblock the Notifications