ಕಾಂಗ್ರೆಸ್‌ ನಲ್ಲಿ ಲಿಂಗಾಯತ ಕಡೆಗಣನೆ ಎಂದು ಶಾಮನೂರು ಆರೋಪ: ಪುತ್ರ ಎಸ್ ಎಸ್ ಮಲ್ಲಿಕಾರ್ಜುನ ಹೇಳಿದ್ದೇನು?

ಬೆಂಗಳೂರು, ಅಕ್ಟೋಬರ್‌ 05: ಲಿಂಗಾಯತ ಅಧಿಕಾರಿಗಳನ್ನು ಕಡೆಗಣಿಸಲಾಗಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ಹೇಳಿಕೆ ಕುರಿತು ಕಾಂಗ್ರೆಸ್‌ ಪಾಳಯದಲ್ಲಿ ಸಾಕಷ್ಟು ಚರ್ಚೆಗಳು ಶುರುವಾಗಿದ್ದು, ಈ ಬಗ್ಗೆ ಶಾಮನೂರು ಶಿವಶಂಕರಪ್ಪ ಅವರ ಪುತ್ರ ಹಾಗೂ ಸಚಿವ ಎಸ್ ಎಸ್ ಮಲ್ಲಿಕಾರ್ಜುನ ನಿರಾಕರಿಸಿದ್ದಾರೆ.

ಹೌದು, ಈ ಕುರಿತು ಗುರುವಾರ ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಲಿಂಗಾಯತ ಅಧಿಕಾರಿಗಳಿಗೆ ಯಾವುದೇ ಸಮಸ್ಯೆ ಇಲ್ಲ ಎನ್ನುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಶಾಮನೂರು ಶಿವಶಂಕರಪ್ಪ ಅವರು ನೀಡಿದ ಹೇಳಿಕೆ ಬಗ್ಗೆ ಅವರ ಬಳಿಯೇ ಕೇಳಿ. ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಮಾತಾನಾಡ್ತೀನಿ ಅಂದಿದ್ದಾರೆ, ಅವರವರೇ ಮಾತಾಡ್ತಾರೆ ಎಂದು ಹೇಳಿದರು.

That Lingayat officers are not a problem Minister SS Mallikarjuna said

ಇನ್ನೂ ಅವರ ವೈಯಕ್ತಿಕ ವಿಚಾರ ಏನೂ ಅಂತ ಗೊತ್ತಿಲ್ಲ. ಈ ವಿಚಾರವಾಗಿ ತಂದೆಯವರ ಜೊತೆಗೆ ನಾನು ಮಾತನಾಡಿಲ್ಲ. ದಾವಣಗೆರೆ ಡಿಸಿ ಎಲ್ಲರನ್ನೂ ಬದಲಾವಣೆ ಮಾಡಿದಂತೆ ವರ್ಗಾವಣೆ ಮಾಡಿದ್ದಾರೆ. ಇಬ್ರೂ ಕೂಡ ಸೀನಿಯರ್ ಮೋಸ್ಟ್ ಇದ್ದಾರೆ ಅವರೇ ಮಾತಾಡಿಕೊಳ್ಳುತ್ತಾರೆ. ಇದು ಮುಗಿದು ಹೋದ ಅಧ್ಯಾಯ, ಮುಗಿದು ಹೋದ ಕಥೆ.‌ ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಮತ್ತು ಶಾಮನೂರು ಮಾತಾಡಿಕೊಳ್ತಾರೆ. ಡಿಸಿ ವರ್ಗಾವಣೆ ಗೊಂದಲ ವಿಷಯ ನನಗಂತೂ ಗೊತ್ತಿಲ್ಲ ಎಂದು ಹೇಳಿದರು.

ಸಿದ್ದರಾಮಯ್ಯ ಸರ್ಕಾರದಲ್ಲಿ ಲಿಂಗಾಯತ ನಾಯಕರನ್ನು ಕಡೆಗಣಿಸಲಾಗುತ್ತಿದೆ ಎಂದು ಶಾಮನೂರು ಆರೋಪ ಮಾಡಿದ್ದರು. ಶಾಮನೂರು ಆರೋಪ ಅಲ್ಲೋಲ ಕಲ್ಲೋಲ ಸೃಷ್ಟಿ ಮಾಡಿತ್ತು. ಶಾಮನೂರು ಹೇಳಿಕೆಯನ್ನು ಕಾಂಗ್ರೆಸ್ ಶಾಸಕ ಬಸವರಾಜ ರಾಯರೆಡ್ಡಿ ನಿರಾಕರಿಸಿದ್ದರು. ಅಲ್ಲದೆ, ಜಾತಿವಾರು ಅಧಿಕಾರಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದರು.ಇನ್ನು ಹಿರಿಯ ನಾಯಕ ಶಾಮನೂರು ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಹಾಗೂ ಲಿಂಗಾಯತ ನಾಯಕ ಬಿಎಸ್ ಯಡಿಯೂರಪ್ಪ ಸಾಥ್ ನೀಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+