ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

BREAKING: ಜುಲೈ 11ರಂದು ನೂತನ ರಾಜ್ಯಪಾಲರ ಪ್ರಮಾಣ ವಚನ ಕಾರ್ಯಕ್ರಮ!

|
Google Oneindia Kannada News

ಬೆಂಗಳೂರು, ಜು. 09: ರಾಜ್ಯದ ನೂತನ ರಾಜ್ಯಪಾಲರಾಗಿ ನೇಮಕವಾಗಿರುವ ಥಾವರ್ ಚಂದ್ ಗೆಹ್ಲೋಟ್ ಅವರು ಜುಲೈ 11 ರಂದು ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಥಾವರ್ ಚಂದ್ ಗೆಹ್ಲೋಟ್ ಅವರು ರಾಜ್ಯದ 19 ನೇ ರಾಜ್ಯಪಾಲರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಜಭವನದ ಗಾಜಿನ ಮನೆಯಲ್ಲಿ ಜುಲೈ 11 ರಂದು ಬೆಳಗ್ಗೆ 10.30ಕ್ಕೆ ನೂತನ ರಾಜ್ಯಪಾಲರ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ. ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಅವರು ನೂತನ ರಾಜ್ಯಪಾಲರಿಗೆ ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣವಚನ ಬೋಧಿಸಲಿದ್ದಾರೆ.

ರಾಜ್ಯಪಾಲ ವಜುಭಾಯಿ ವಾಲಾ ಅವರು ಸುಮಾರು 6 ವರ್ಷ 10 ತಿಂಗಳು ಕರ್ನಾಟಕ ರಾಜ್ಯದ ರಾಜ್ಯಪಾಲರಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಇದೀಗ ಅವರ ಸ್ಥಾನಕ್ಕೆ ಥಾವರ್ ಚಂದ್ ಗೆಹ್ಲೋಟ್ ಅವರನ್ನು ನೇಮಕ ಮಾಡಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಆದೇಶ ಮಾಡಿದ್ದಾರೆ. ರಾಜ್ಯಪಾಲ ವಜುಭಾಯಿ ವಾಲಾ ಅವರ ಅವಧಿ ಮುಗಿದು 2 ವರ್ಷಗಳಾಗಿದ್ದವು.

Thawar Chand Gehlot will be sworn in as the new governor of the state on July 11

Recommended Video

JDS President Kumaraswaamy : ರಾಮನಗರದಲ್ಲಿ ಮೊದಲ ಚುನಾವಣೆಗೆ ಅವಕಾಶ ಕೊಟ್ಟಿದೆ ನಾವು! | Oneindia Kannada

ರಾಜ್ಯಸಭೆಯ ಸದಸ್ಯರಾಗಿದ್ದ ಥಾವರ್ ಚಂದ್ ಗೆಹ್ಲೋಟ್ ಅವರು ಕೇಂದ್ರ ಎನ್‌ಡಿಎ ಸರ್ಕಾರದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ಸಂಪುಟ ಸಚಿವರಾಗಿದ್ದರು. ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ನಗ್ಡಾದಲ್ಲಿ 1948ರ ಮೇ 18ರಂದು ಪರಿಶಿಷ್ಟ ಕುಟುಂಬದಲ್ಲಿ ಜನಿಸಿರುವ 73 ವರ್ಷದ ಗೆಹ್ಲೋಟ್ ಅವರು, ಉಜ್ಜಯಿನಿಯ ವಿಕ್ರಮ್ ವಿಶ್ವವಿದ್ಯಾಲಯದಿಂದ ಕಲಾ ವಿಭಾಗದಲ್ಲಿ ಪದವಿ ಪಡೆದಿದ್ದಾರೆ. ಅವರಿಗೆ ಡಾ. ಬಿ.ಆರ್. ಅಂಬೇಡ್ಕರ್ ಸಾಮಾಜಿಕ ವಿಜ್ಞಾನಗಳ ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.

English summary
Thawarchand Gehlot will be sworn in as the Governor of Karnataka on July 11 at 10.30 a.m. at the Glass House of Raj Bhavan. High Court of Karnataka Chief Justice Abhay Srinivas Oka will administer the oath of office and secrecy to the new Governor.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X