ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡಿಪ್ಲೊಮಾ ಇಂಜಿನಿಯರಿಂಗ್ ಕಲಿಯುವ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ!

|
Google Oneindia Kannada News

ಬೆಂಗಳೂರು, ಆ. 12: ಶಿಕ್ಷಣ ಪಡೆದ ತಕ್ಷಣ ಉದ್ಯೋಗ ಸಿಗಬೇಕು. ಅಂತಹ ಶಿಕ್ಷಣವನ್ನು ನಾವು ಪಡೆಯುತ್ತೇವೆ ಎಂದು ಆಶಿಸುವ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಇಲಾಖೆ ಸಿಹಿ ಸುದ್ದಿ ಕೊಟ್ಟಿದೆ. ಉದ್ಯೋಗ ಮಾರುಕಟ್ಟೆ ಹಾಗೂ ಕೈಗಾರಿಕೆಗಳ ಬೇಡಿಕೆಗಳಿಗೆ ತಕ್ಕಂತೆ ಮಾನವ ಸಂಪನ್ಮೂಲವನ್ನು ಒದಗಿಸುವ ಉದ್ದೇಶದಿಂದ ಬಹುದೊಡ್ಡ ತೀರ್ಮಾನವನ್ನು ರಾಜ್ಯ ಸರ್ಕಾರ ತೆಗೆದುಕೊಂಡಿದೆ. ಎಂಟು ಹೊಸ ಡಿಪ್ಲೊಮಾ ಕೋರ್ಸ್‌ಗಳನ್ನು ಡಿಪ್ಲೊಮಾ ಇಂಜಿನಿಯರಿಂಗ್‌ನಲ್ಲಿ ಸೇರಿಸುವ ಮೂಲಕ ಡಿಪ್ಲೊಮಾ ಕಲಿಯುವ ಬಯಸುವ ವಿದ್ಯಾರ್ಥಿಗಳಿಗೆ ಸಂತಸ ಕೊಟ್ಟಿದೆ.

ವಿಧಾನಸೌಧದಲ್ಲಿ ಈ ಸಂಗತಿ ಪ್ರಕಟಿಸಿರುವ ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ಡಿಪ್ಲೊಮಾದಲ್ಲಿ ನೂತನ ಕೋರ್ಸ್‌ಗಳನ್ನು ಸೇರಿಸಿರುವುದನ್ನು ತಿಳಿಸಿದ್ದಾರೆ. ಈಗಾಗಲೇ ಡಿಪ್ಲೊಮಾ ಇಂಜಿನಿಯರಿಂಗ್‌ನಲ್ಲಿ ಇರುವ ಕೋರ್ಸ್‌ಗಳೊಂದಿಗೆ ಇವು ಹೊಸದಾಗಿ ಸೇರಲಿವೆ. ರಾಜ್ಯದಲ್ಲಿ ಹೆಚ್ಚೆಚ್ಚು ಉದ್ಯೋಗಾವಕಾಶ ಸೃಷ್ಟಿಸುವುದು, ಕೈಗಾರಿಕೆಗಳಿಗೆ ಉತ್ಕೃಷ್ಟ ಮಾನವ ಸಂಪನ್ಮೂಲ ಒದಗಿಸುವುದೇ ಹೊಸ ಕೋರ್ಸುಗಳ ಗುರಿ ಎಂದು ವಿವರಿಸಿದ್ದಾರೆ. ಹೊಸದಾಗಿ ಸೇರಿಸಿರುವ ಡಿಪ್ಲೊಮಾ ಕೋರ್ಸ್‌ಗಳು ಯಾವವು? ಯಾವ ಕಾಲೇಜಿನಲ್ಲಿ ಮೊದಲಿಗೆ ಈ ಕೋರ್ಸ್‌ಗಳು ಲಭ್ಯವಾಗಲಿವೆ ಎಂಬ ಮಾಹಿತಿ ಮುಂದಿದೆ!

ಡಿಪ್ಲೊಮಾದಲ್ಲಿ ಈಗಿರುವ ಕೋರ್ಸ್‌ಗಳು

ಡಿಪ್ಲೊಮಾದಲ್ಲಿ ಈಗಿರುವ ಕೋರ್ಸ್‌ಗಳು

ಸಾಮಾನ್ಯವಾಗಿ ದ್ವಿತೀಯ ಪಿಯುಸಿ ಮುಗಿದ ಬಳಿಕ ವಿದ್ಯಾರ್ಥಿಗಳು ಡಿಪ್ಲೊಮಾ ಕೋರ್ಸ್‌ಗೆ ಸೇರಿಉಕೊಳ್ಳುತ್ತಾರೆ. ಪಿಯುಸಿಯಲ್ಲಿ ಅನುತ್ತೀರ್ಣರಾದವರೂ ಡಿಪ್ಲೊಮಾ ಸೇರುವ ಮೂಲಕ ಮತ್ತೆ ಇಂಜಿನಿಯರಿಂಗ್ ಪದವಿ ಪಡೆಯಲು ಅವಕಾಶವಾಗುತ್ತದೆ. ಆದರೆ ಬಿಇ ಇಂಜನೀಯರಿಂಗ್‌ನಲ್ಲಿ ಇರುವವಷ್ಟು ವಿಷಯಗಳು ಡಿಪ್ಲೊಮಾದಲ್ಲಿ ಇರಲಿಲ್ಲ. ಆ ಸಮಸ್ಯೆ ಪರಿಹರಿಸಲು ಸರ್ಕಾರ ಮುಂದಾಗಿದೆ

"ಸದ್ಯ ಡಿಪ್ಲೊಮಾದಲ್ಲಿ ಸದ್ಯ 33 ಕೋರ್ಸ್‌ಗಳು ಇವೆ. ಇವುಗಳಲ್ಲಿ ಹಳೆಯ, ಅಪ್ರಸ್ತುತ ಕೋರ್ಸುಗಳನ್ನು ಕೈಬಿಡಲಾಗಿದೆ. ಈಗಾಗಲೇ ಹೊಸ ಪಠ್ಯವನ್ನು ಅಳವಡಿಸಲಾಗಿದೆ. ಈಗ 21ನೇ ಶತಮಾನದ ಬೇಡಿಕೆ ಪೂರೈಸುವ ನಿಟ್ಟಿನಲ್ಲಿ ಎಂಟು ಹೊಸ ಕೋರ್ಸ್‌ಗಳನ್ನು ಈ ಶೈಕ್ಷಣಿಕ ವರ್ಷದಿಂದಲೇ ಆರಂಭಿಸಲಾಗುತ್ತಿದೆ" ಎಂದು ಡಾ. ಅಶ್ವಥ್ ನಾರಾಯಣ ತಿಳಿಸಿದ್ದಾರೆ.

ಡಿಪ್ಲೊಮಾ ಹೊಸ ಕೊರ್ಸ್‌ಗಳು ಯಾವುವು?

ಡಿಪ್ಲೊಮಾ ಹೊಸ ಕೊರ್ಸ್‌ಗಳು ಯಾವುವು?

1. ಆಲ್ಟರ್ನೇಟಿವ್ ಎನರ್ಜಿ ಟೆಕ್ನಾಲಜೀಸ್‌ (Alternative Energy Technologies)

2. ಸೈಬರ್ ಭದ್ರತೆ (Cyber security)

3. ಆಹಾರ ಸಂಸ್ಕರಣೆ ಮತ್ತು ಸಂರಕ್ಷಣೆ (Food Processing and Preservation)

4. ಪ್ರವಾಸೋದ್ಯಮ (Travel & Tourism )

5. ಕ್ಲೌಡ್ ಕಂಪ್ಯೂಟಿಂಗ್ (Cloud Computing)

6. ಆಟೋಮೇಷನ್ ಮತ್ತು ರೋಬೋಟಿಕ್ಸ್ (Automation and Robotics)

7. ನಿರ್ದೇಶನ ಮತ್ತು ಚಿತ್ರಕಥೆ ರಚನೆ, ಟೀವಿ ಕಾರ್ಯಕ್ರಮಗಳ ನಿರ್ಮಾಣ (Direction screen play writing and TV production)

8. ಸೈಬರ್ ಭೌತಿಕ ವ್ಯವಸ್ಥೆ ಮತ್ತು ಭದ್ರತೆ (Cyber physical system and security) ಈ ಕೋರ್ಸುಗಳನ್ನು ಹೊಸದಾಗಿ ಆರಂಭ ಮಾಡಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚೊವ ಡಾ. ಅಶ್ವಥ್ ನಾರಾಯಣ ತಿಳಿಸಿದ್ದಾರೆ.

ನೂತನ ಕೋರ್ಸ್‌ಗಳು ಯಾವ ಕಾಲೇಜ್‌ನಲ್ಲಿ ಲಭ್ಯ?

ನೂತನ ಕೋರ್ಸ್‌ಗಳು ಯಾವ ಕಾಲೇಜ್‌ನಲ್ಲಿ ಲಭ್ಯ?

"ನೂತನ ಕೋರ್ಸ್‌ಗಳನ್ನು ತಾಂತ್ರಿಕ ಶಿಕ್ಷಣ ಇಲಾಖೆಯ ಹೊಸ ಪಠ್ಯಕ್ರಮದ ಪ್ರಕಾರ ಬೋಧನೆ ಮಾಡಲಾಗುವುದು ಹಾಗೂ ಈ ಪಠ್ಯಕ್ರಮವು ರಾಷ್ಟ್ರೀಯ ಕೌಶಲ್ಯ ಅರ್ಹತಾ ಚೌಕಟ್ಟು ಪ್ರಕಾರ ಸಿದ್ಧಪಡಿಸಲಾಗಿದೆ. ಜಾಗತಿಕ ಮಟ್ಟದಲ್ಲಿ ಉದ್ಯೋಗ ಪಡೆಯಲು ಅನುಕೂಲವಾಗಲಿದೆ. ಡಿಪ್ಲೋಮಾ ಪಠ್ಯಕ್ರಮಗಳನ್ನು ಉದ್ಯಮಿಗಳು, ಶಿಕ್ಷಣ ತಜ್ಞರು ಮತ್ತು ಹಳೆಯ ವಿದ್ಯಾರ್ಥಿಗಳೊಂದಿಗೆ ವ್ಯಾಪಕ ಸಮಾಲೋಚನೆಯ ನಂತರ ಅಭಿವೃದ್ಧಿಗೊಳಿಸಲಾಗಿದೆ" ಎಂದು ಡಾ. ಅಶ್ವಥ್ ನಾರಾಯಣ ತಿಳಿಸಿದ್ದಾರೆ.

"ಈ ನೂತನ ಕೋರ್ಸ್‌ಗಳನ್ನು ಮೊದಲಿಗೆ ಗೌರಿಬಿದನೂರು, ಶಿರಾಳ ಕೊಪ್ಪ, ಕೂಡ್ಲಿಗಿ, ರಬಕವಿ ಬನಹಟ್ಟಿ, ಔರಾದ್ ಹಾಗೂ ಬೆಂಗಳೂರಿನ ಎಸ್.ಜೆ.ಪಾಲಿಟೆಕ್ನಿಕ್, ಚನ್ನಗಿರಿ, ಕೊಪ್ಪ, ಹೊನ್ನಾಳಿ, ಕಾಪು ಕಾಲೇಜುಗಳಲ್ಲಿ ಆರಂಭಿಸಲಾಗುತ್ತಿದೆ" ಎಂದು ಡಾ. ಅಶ್ವಥ್ ನಾರಾಯಣ ಮಾಹಿತಿ ನೀಡಿದ್ದಾರೆ.

Recommended Video

BSY ರಿಂದ ಎಂಥಾ ಪರಿಸ್ಥಿತಿ ಬಂತು ನೋಡಿ CM ಬೊಮ್ಮಾಯಿಗೆ | Oneindia Kannada
ಈ ಹೊಸ ಕೋರ್ಸ್‌ಗಳಿಗೆ ಪ್ರವೇಶ ಪಡೆಯುವುದು ಹೇಗೆ?

ಈ ಹೊಸ ಕೋರ್ಸ್‌ಗಳಿಗೆ ಪ್ರವೇಶ ಪಡೆಯುವುದು ಹೇಗೆ?

ಡಿಪ್ಲೊಮಾ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ನೂತನ ಕೋರ್ಸ್‌ಗಳಿಗೆ ನೇರ ಪ್ರವೇಶಾತಿ ಸಿಗಲಿದೆ. ಮೂರನೇ ವರ್ಷದ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಇದೊಂದು ರೀತಿಯಲ್ಲಿ ವಿಶೇಷ ಕಲಿಕಾ ವಿಷಯವಾಗಿರುತ್ತದೆ. ಅಲ್ಲದೆ, ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಎರಡು ವರ್ಷದ ಡಿಪ್ಲೋಮಾ ನಂತರ ಮೂರನೇ ವರ್ಷದಲ್ಲಿ ಹೊಸ ರಾಷ್ಟೀಯ ಶಿಕ್ಷಣ ನೀತಿ ಅನುಸಾರ ತಮ್ಮ ಇಚ್ಛಗೆ ಅನುಗುಣವಾಗಿ ಓದಲು ಡಾಟಾ ಸೈನ್ಸ್, ಎಐ-ಎಂಎಲ್, ಪವರ್ ಎಂಜಿನಿಯರಿಂಗ್, ನವೀಕರಿಸಬಹುದಾದ ಇಂಧನ, ಇಂಡಸ್ಟ್ರಿಯಲ್ ಆಟೋಮ್ಯಾಷನ್ ಹಾಗೂ ಕೈಗಾರಿಕಾ ವಿದ್ಯುತ್ ಎಂಜಿನಿಯರಿಂಗ್, ಸುಸ್ಥಿರ ನಿರ್ಮಿತ ಪರಿಸರ, ಮೂಲಭೂತ ಎಂಜಿನಿಯರಿಂಗ್ ಸೇರಿ ಇನ್ನೂ ಹಲವಾರು ವಿಷಯಗಳನ್ನು ಆಯ್ಕೆಯ ಅನುಸಾರ ಅಧ್ಯಯನ ಮಾಡಬಹುದಾಗಿದೆ ಎಂದು ಉನ್ನತ ಶಿಕ್ಷಣ ಇಲಾಖೆ ಮಾಹಿತಿ ಕೊಟ್ಟಿದೆ.

ರಾಜ್ಯದಲ್ಲಿರುವ ಒಟ್ಟು 87 ಸರಕಾರಿ ಪಾಲಿಟೆಕ್ನಿಕ್ ಕಾಲೇಜ್‌ಗಳಲ್ಲಿ ಪ್ರವೇಶ ಪ್ರಕ್ರಿಯೆ ಶರುವಾಗಿದೆ. ಅವುಗಳ ಪೈಕಿ 26 ಸರಕಾರಿ ಕಾಲೇಜ್‌ಗಳಲ್ಲಿ ಮೆರಿಟ್ ಆಧಾರದ ಮೇಲೆ ಪ್ರವೇಶ ನೀಡಲಾಗುತ್ತಿದೆ. ಉಳಿದ ಕಾಲೇಜುಗಳಲ್ಲಿ ಮೊದಲು ಬಂದವರಿಗೆ ಮೊದಲ ಆದ್ಯತೆ ಕೊಡಲಾಗುವುದು ಎಂದು ಇಲಾಖೆ ಮಾಹಿತಿ ಕೊಟ್ಟಿದೆ. ಇದೇ ವೇಳೆ ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ಅವರು ಸರಕಾರಿ ಪಾಲಿಟೆಕ್ನಿಕ್‌ಗಳಿಗೆ ಹೊಸ ಲೊಗೊ ಬಿಡುಗಡೆ ಮಾಡಿದ್ದಾರೆ.

English summary
Includes 8 new courses in emerging areas, 12 specialization pathways & revamped C20 curriculum says Minister Dr.C.N.Ashwatha Narayana. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X