Bengaluru 2nd Airport: 2ನೇ ಏರ್‌ಪೋರ್ಟ್‌ ಜಾಗದ ಕುರಿತು ಮಹತ್ವದ ಮಾಹಿತಿ ನೀಡಿದ ಡಿ ಕೆ ಶಿವಕುಮಾರ್‌

ಬೆಂಗಳೂರು, ಫೆಬ್ರವರಿ 07: ಎರಡನೇ ವಿಮಾನ ನಿಲ್ದಾಣ ನಿರ್ಮಾಣದ ಜಾಗ ನಿಗದಿ ಮಾಡುವುದು ನಮ್ಮ ಕೈಯಲ್ಲಿ ಇಲ್ಲ. ನಾವು ಸಲಹೆ ನೀಡಬಹುದು, ಅಂತಿಮವಾಗಿ ವಿಮಾನಯಾನ ಪ್ರಾಧಿಕಾರ ತೀರ್ಮಾನ ಮಾಡುತ್ತದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಾಡುವಾಗ ಮಾಡಿಕೊಂಡಿರುವ ಒಪ್ಪಂದದ ಪ್ರಕಾರ 2034ರವರೆಗೂ ನಾವು ಮತ್ತೊಂದು ವಿಮಾನ ನಿಲ್ದಾಣ ಕಾರ್ಯಾರಂಭ ಮಾಡಲು ಸಾಧ್ಯವಿಲ್ಲ. ಆದರೆ ನಾವು ಸಿದ್ಧತೆ ಮಾಡಿಕೊಳ್ಳಬಹುದು. ಈ ಸಿದ್ಧತೆಗಾಗಿ 3-4 ಜಾಗಗಳ ಪ್ರಸ್ತಾವನೆ ನೀಡಿದ್ದೇವೆ. ದಕ್ಷಿಣ, ಉತ್ತರ ಪೂರ್ವ ಭಾಗದಲ್ಲಿ ಸಲಹೆ ನೀಡಿದ್ದೇವೆ. ವಿಮಾನ ನಿಲ್ದಾಣ ತಾಂತ್ರಿಕ ವಿಚಾರವಾಗಿದ್ದು, ಸಮೀಕ್ಷೆ ಮಾಡಿ ತೀರ್ಮಾನ ಮಾಡಲಾಗುವುದು ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಹೇಳಿದರು.

ಡಿ.ಕೆ. ಸುರೇಶ್ ಅವರು ಬಮೂಲ್ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರಾ ಎಂಬ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ಅವೆಲ್ಲಾ ಸುದ್ದಿ. ನಾನು ಮುಂಚೆಯಿಂದಲೂ ಹಸು ಕಟ್ಟಿದ್ದೆ, ನಮ್ಮ ತಾಯಿ ಹಾಲು ಹಾಕುತ್ತಿದ್ದರು. ಹಾಲು ಹಾಕಿದಾಕ್ಷಣ ಚುನಾವಣೆಯಲ್ಲಿ ಸ್ಪರ್ಧಿಸಬೇಕಾ? ಅದರ ಜತೆಗೆ ಹತ್ತಾರು ಎಕರೆ ರೇಷ್ಮೆ, ನೂರಾರು ಎಕರೆ ವ್ಯವಸಾಯ ಮಾಡುತ್ತಿದ್ದೇವೆ. ಕನಕಪುರದ ರೇಷ್ಮೆ ಬೆಳೆಗಾರರಿಗೆ ಅನುಕೂಲ ಮಾಡಿಕೊಡಲು, ಇಲ್ಲಿನ ರೇಷ್ಮೆಯನ್ನು ಬಳಸಲು ನಮ್ಮ ಮಾವ ಅವರ ರೀಲಿಂಗ್ ಕಾರ್ಖಾನೆಯನ್ನು ಮಾಡಲು ಮುಂದಾಗಿದ್ದೇವೆ. ಯಾರ ಹಣೆಯಲ್ಲಿ ಏನು ಬರೆದಿದೆಯೋ ಯಾರಿಗೆ ಗೊತ್ತು? ಈ ಬಗ್ಗೆ ಚರ್ಚೆ ಮಾಡಿದರೆ ಮಾಡಿಕೊಳ್ಳಲಿ, ನೆಮ್ಮದಿ ಕೆಡಿಸಿಕೊಳ್ಳಲಿ ಎಂದು ಹೇಳಿದರು.

The Airport Site Will Be Decided After Conducting A Survey Says DK Shivakumar

ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುವ ಬಗ್ಗೆ ಹೈಕೋರ್ಟ್ ಇಂದು ತೀರ್ಪು ನೀಡಲಿರುವ ಬಗ್ಗೆ ಕೇಳಿದಾಗ, "ಯಾವ ಕಾರಣಕ್ಕೆ ಸಿಬಿಐ ತನಿಖೆಗೆ ನೀಡಬೇಕು? ಲೋಕಾಯುಕ್ತ ತನಿಖೆ ನಡೆಯುತ್ತಿರುವಾಗ, ಇಡಿ ಕೂಡ ತನಿಖೆ ಮಾಡುತ್ತಿದೆ. ಈ ಪರಿಸ್ಥಿತಿಯಲ್ಲಿ ಮೂರನೇ ಸಂಸ್ಥೆ ತನಿಖೆ ಮಾಡಲು ಯಾಕೆ ನೀಡುತ್ತಾರೆ? ಈ ರೀತಿ ನೀಡಲು ಅವಕಾಶ ಇಲ್ಲ. ಈ ಬಗ್ಗೆ ಅನೇಕ ನ್ಯಾಯಾಲಯದ ತೀರ್ಪುಗಳಿವೆ. ನನ್ನ ವಿರುದ್ಧವೂ ಇದೇ ರೀತಿ ಕೇಸ್ ದಾಖಲಿಸಿರುವುದರ ವಿರುದ್ಧ ನಾನು ಬಡಿದಾಡುತ್ತಿದ್ದೇನೆ. ಇದರ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದೇನೆ" ಎಂದು ತಿಳಿಸಿದರು.

ಅಕ್ರಮವಾಗಿ ನೆಲೆಸಿದ್ದಾರೆ ಎಂದು ಕೆಲವು ಭಾರತೀಯರನ್ನು ಅಮೆರಿಕ ಸರ್ಕಾರ ಕೈ ಕಾಲಿಗೆ ಕಬ್ಬಿಣದ ಸರಪಳಿ ಕಟ್ಟಿ ಭಾರತಕ್ಕೆ ವಾಪಸ್ ಕಳಿಸಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ಈ ಹಿಂದೆ ಕೂಲಿ ಕಾರ್ಮಿಕರಿಗೆ ಸರಪಳಿ ಹಾಕಿ ಕಟ್ಟುತ್ತಿದ್ದದ್ದನ್ನು ನಾವು ನೋಡಿದ್ದೇವೆ. ಅದನ್ನು ತಪ್ಪಿಸಲು ಸರ್ಕಾರ ಕಾನೂನು ತಂದು ಶಿಕ್ಷೆ ನೀಡಿದೆ. ಆದರೆ ಮುಂದುವರಿದ, ಜಾಗೃತಿ ಇರುವ ದೇಶಗಳಲ್ಲಿ ಈ ರೀತಿ ನಡೆದಿರುವುದು ಖಂಡನೀಯ ಎಂದರು.

ಅಕ್ರಮವಾಗಿ ಅವರ ದೇಶದಲ್ಲಿ ನೆಲೆಸಿದ್ದರೆ, ಅದಕ್ಕೆ ಯಾವ ಶಿಕ್ಷೆ ನೀಡಬೇಕೋ ನೀಡಲಿ. ಅದನ್ನು ಬಿಟ್ಟು, ಈ ರೀತಿ ಖೈದಿಗಳಿಗೆ ಹಾಕಿದಂತೆ ಸರಪಳಿ ಹಾಕಿರುವುದನ್ನು ಯಾರಿಂದಲೂ ಒಪ್ಪಲು ಸಾಧ್ಯವಿಲ್ಲ. ಇದು ಮಾನವ ಕುಲಕ್ಕೆ ಅಗೌರವ. ದೇಶ, ಧರ್ಮ ಯಾವುದೇ ಆಗಿರಲಿ ಮಾನವೀಯತೆ ಮುಖ್ಯ. ಸರಪಳಿ ಕಟ್ಟಿ ನಡೆಸಿಕೊಳ್ಳುವುದು ಸರಿಯಲ್ಲ. ಇದು ಖಂಡನೀಯ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು ಕಿಡಿಕಾರಿದರು.

ನವೆಂಬರ್ ನಲ್ಲಿ ಸಿಎಂ ಬದಲಾವಣೆ ಖಚಿತ ಎಂಬ ಅಶೋಕ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, ಅಶೋಕ್ ಅವರು ಜ್ಯೋತಿಷ್ಯ ಕಲಿಯುತ್ತಿರುವ ಬಗ್ಗೆ ಕೇಳಿ ಬಹಳ ಸಂತೋಷವಾಯಿತು. ನನಗೂ ಜ್ಯೋತಿಷ್ಯ ಕೇಳುವ ಚಟ ಇದೆ. ಅವರು ಬಿಡುವಿನ ಸಮಯ ನೀಡಿದಾಗ ನಾನು ಹೋಗಿ ಶಾಸ್ತ್ರ ಕೇಳುತ್ತೇನೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+