ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹಿಜಾಬ್ ಬಳಿಕ ರಾಜ್ಯವ್ಯಾಪಿ ಹರಡುತ್ತಿರುವ ಮುಸ್ಲಿಂ ವ್ಯಾಪಾರಿಗಳಿಗೆ ಆರ್ಥಿಕ ಬಹಿಷ್ಕಾರ

|
Google Oneindia Kannada News

ಬೆಂಗಳೂರು, ಮಾರ್ಚ್ 24: ಹಿಜಾಬ್ ಕಿಚ್ಚು ಕೊಂಚ ತಣ್ಣಗಾಗಿದೆ ಎನ್ನುವಷ್ಟರಲ್ಲಿ ಮತ್ತೊಂದು ವಿವಾದ ಭುಗಿಲೆದ್ದಿದೆ. ಧರ್ಮ ಧರ್ಮಗಳ ನಡುವೆ ಬಿರುಕು ಮೂಡಿಸುತ್ತಿದೆ. ಕರಾವಳಿಗೆ ಮಾತ್ರ ಸೀಮಿತವಾಗಿದ್ದ ಈ ಕಿಚ್ಚು ಸದ್ಯ ವ್ಯಾಪಾರಕ್ಕೂ ಅಂಟಿಕೊಂಡಿದೆ. ಇದು ಕೊರೊನಾ ಅದರ ರೂಪಾಂತರಿಗಳಿಗಿಂತಲೂ ವೇಗವಾಗಿ ಹರಡುತ್ತಿದೆ.

ಕರಾವಳಿಯ ದೇವಸ್ಥಾನಗಳ ಜಾತ್ರೋತ್ಸವದ ವೇಳೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಆರ್ಥಿಕ ಬಹಿಷ್ಕಾರ ಹಾಕಿರುವ ವಿಚಾರ ರಾಜ್ಯದಾದ್ಯಂತ ದೊಡ್ಡ ಚರ್ಚೆಯನ್ನು ಉಂಟು ಮಾಡಿದೆ. ಇದು ಸದ್ಯ ಸಿಲಿಕಾನ್ ಸಿಟಿಯತ್ತ ಕೂಡ ವಾಲಿದೆ. ಬೆಂಗಳೂರಿನಲ್ಲಿಯೂ ಹಿಂದೂ ಸಂಘಟನೆಗಳು ಬಹಿಷ್ಕಾರ ಚಳವಳಿ ಶುರು ಮಾಡಿದ್ದಾರೆ. ಕೆಲ ಹಿಂದೂ ದೇಗುಲಗಳಿಗೆ ಸೇರಿದ ಅಂಗಡಿಗಳಿಂದ ಮುಸ್ಲಿಮರನ್ನು ಹೊರಹಾಕುವಂತ ಕೆಲಸಗಳು ಆಗಿರುವುದು ಕಂಡುಬಂದಿದೆ. ಉಪ್ಪಾರಪೇಟೆಯಲ್ಲಿ 8 ಮುಸ್ಲಿಮರ ಅಂಗಡಿಗಳನ್ನು ಹಿಂದೂ ಕಾರ್ಯಕರ್ತರು ಬಂದ್ ಮಾಡಿಸಿದ್ದಾರೆ. ಉಪ್ಪಾರಪೇಟೆಯ ಆಂಜನೇಯಸ್ವಾಮಿ ದೇಗುಲದ ಮುಂದಿರುವ ಶಾಪಿಂಗ್ ಕಾಂಪ್ಲೆಕ್ಸ್‌ನಲ್ಲಿ ಮುಸ್ಲಿಮರ ಅಂಗಡಿಗಳನ್ನು ಕ್ಲೋಸ್ ಮಾಡಿಸಲಾಗಿದೆ.

ಬನಶಂಕರಿ ಸೇರಿ ಮುಜರಾಯಿ ವ್ಯಾಪ್ತಿಯ ಎಲ್ಲಾ ದೇಗುಲಗಳ ಜಾತ್ರೆಗಳಲ್ಲಿ, ದೇಗುಲಕ್ಕೆ ಸಂಬಂಧಿಸಿದ ಕಟ್ಟಡಗಳಲ್ಲಿ ವ್ಯಾಪಾರ ಮಾಡಲು ಮುಸ್ಲಿಮರಿಗೆ ಅವಕಾಶ ನೀಡಬಾರದು ಎಂದು ಹಿಂದೂಪರ ಮುಖಂಡರು ಒತ್ತಾಯಿಸಿದ್ದಾರೆ.ಈ ಬಗ್ಗೆ ಮಾಹಿತಿ ಪಡೆಯುತ್ತಿದ್ದಂತೆ ತಹಶೀಲ್ದಾರ್ ಸೂಕ್ತ ಕ್ರಮದ ಭರವಸೆ ನೀಡಿದ್ದಾರೆ. ನಂತ್ರವಷ್ಟೇ ಪ್ರತಿಭಟನೆ ಕೈಬಿಟ್ಟಿದ್ದಾರೆ.

The ban on Muslim traders spreading to Bengaluru

ಇತ್ತ ಕೊಲ್ಲೂರು ದೇವಳದ ಬಳಿಯೂ ಮುಸ್ಲಿಮ್ ವ್ಯಾಪಾರಸ್ಥರಿಗೆ ನಿಷೇಧ ಹೇರಬೇಕು ಎಂದು ಹಿಂದೂ ಮುಖಂಡರು ಪಂಚಾಯತ್ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ನಾಡಿದ್ದು ಕೊಲ್ಲೂರು ಮೂಕಾಂಬಿಕಾ ವಾರ್ಷಿಕ ಜಾತ್ರೆ ಇದ್ದು, ಪಂಚಾಯ್ತಿ ನಡೆ ಕುತೂಹಲ ಮೂಡಿಸಿದೆ. ಅತ್ತ ಚಿಕ್ಕಮಗಳೂರಿನ ಕಿಗ್ಗ ಋಷ್ಯಶೃಂಗ ಜಾತ್ರೆಯಲ್ಲಿ ಅನ್ಯಧರ್ಮೀಯರ ಅಂಗಡಿಗಳಿಗೆ ಅವಕಾಶ ನೀಡಬಾರದು ಎಂಬ ಒತ್ತಾಯ ಕೇಳಿಬಂದಿದೆ.

ಈ ಬೆಳವಣಿಗೆಯ ಬಗ್ಗೆ ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದ್ದಾರೆ. ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿ, ''ಕರ್ನಾಟಕ ಸರ್ವ ಜನಾಂಗದ ಶಾಂತಿಯ ತೋಟ ಎಂದು ರಾಷ್ಟ್ರಕವಿ ಕುವೆಂಪು ಬರೆದಿದ್ದಾರೆ. ಅವರು ಬರೆದ ಗೀತೆಯನ್ನು ನಾವು ನಾಡಗೀತೆಯಾಗಿ ಅಳವಡಿಸಿಕೊಂಡಿದ್ದೇವೆ. ಇಂಥ ಸರ್ವ ಜನಾಂಗದ ತೋಟಕ್ಕೆ ಕೊಳ್ಳಿ ಇಡುವ ಕೆಲಸ ಆರಂಭವಾಗಿದೆ. ಇವರು ಕುವೆಂಪು ಅವರ ಆಶಯದ ಸರ್ವ ಜನಾಂಗದ ಶಾಂತಿಯ ತೋಟವನ್ನು ಸರ್ವನಾಶ ಮಾಡಲು ಹೊರಟಿದ್ದಾರೆ. ಕೋಮು ಸಂಘರ್ಷ ಉಂಟು ಮಾಡಲು ಇದೆಲ್ಲ ಮಾಡುತ್ತಿದ್ದಾರೆ. ಕರಾವಳಿಯ ಸಂಘರ್ಷವನ್ನು ಇಡೀ ರಾಜ್ಯಕ್ಕೆ ಹಬ್ಬಿಸುವ ಕೆಲಸ ಮಾಡುತ್ತಿದ್ದಾರೆ. ಇದು ಪ್ರಾರಂಭದ ಹಂತ. ಬಹುಶ: ಇನ್ನೂ ಏಳು ಎಂಟು ತಿಂಗಳಲ್ಲಿ ಏನಾನು ಕಾದಿದಿಯೋ ನನಗೆ ಗೊತ್ತಿಲ್ಲ,'' ಎಂದರು.

Recommended Video

ಬೆಂಗಳೂರಿನಲ್ಲೂ ಮುಸ್ಲಿಂ ವ್ಯಾಪಾರಕ್ಕೆ ಬ್ರೇಕ್ ಬೀಳೋ ಆತಂಕ | Oneindia Kannada

ಪ್ರಧಾನಿ ಮೋದಿ ಆಡಳಿತದಲ್ಲಿ ಜನ ಸಂಪದ್ಭರಿತರಾಗಿದ್ದಾರೆ. ಹೀಗಾಗಿ ಜನ ಬೆಲೆ ಏರಿಕೆ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ ಎಂದು ಕುಮಾರಸ್ವಾಮಿ ಅವರು ವ್ಯಂಗ್ಯವಾಡಿದರು. ಬಹುಶಃ ಈ ಕಾರಣಕ್ಕೆ ಅವರು ಪ್ರತಿಭಟನೆ ಮಾಡುತ್ತಿಲ್ಲ. ಈಗಲಾದರೂ ಎಲ್ಲರೂ ಎಚ್ಚೆತ್ತು ಸಂಘಟನಾತ್ಮಕವಾಗಿ ಹೋರಾಟ ಮಾಡಬೇಕಿದೆ ಎಂದು ಕುಮಾರಸ್ವಾಮಿ ಅವರು ಉತ್ತರ ನೀಡಿದರು. ಜನರು ಈಗಲಾದರೂ ಎಚ್ಚೆತ್ತುಕೊಳ್ಳದಿದ್ದರೆ ಮುಂದೇನು ದುರಂತ ಕಾದಿದೆಯೊ ಗೊತ್ತಿಲ್ಲ. ದುರಂತ ಎಂದರೆ ಬೆಲೆ ಏರಿಕೆ ವಿಚಾರ ಜನರಿಗೆ ಬೇಡವಾಗಿದೆ. ನಮ್ಮದು ಕೀರಲು ದನಿಯಾಗಿದೆ ಎಂದು ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದರು.

English summary
Another controversy spread after the hijab controversy. This is a rift between religions. Confined to the coast, the controversy is currently in business. This is Corona is spreading faster than its mutants.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X