ಯಾದಗಿರಿ: ಸಮರ್ಪಕ ವಿದ್ಯುತ್​ ಪೂರೈಕೆಗೆ ಬಿಜೆಪಿ ಬೃಹತ್​ ಪ್ರತಿಭಟನೆ

By: ಯಾದಗಿರಿ ಪ್ರತಿನಿಧಿ
Subscribe to Oneindia Kannada

ಯಾದಗಿರಿ, ಅಕ್ಟೋಬರ್ 12 : ಸಮರ್ಪಕವಾಗಿ ವಿದ್ಯುತ್​​ ನೀಡಲು ಒತ್ತಾಯಿಸಿ ಬಿಜೆಪಿ ಮುಖಂಡ ವೆಂಕಟರೆಡ್ಡಿ ಮುದ್ನಾಳ್​​ ನೇತೃತ್ವದಲ್ಲಿ ಯಾದಗಿರಿಯಲ್ಲಿ ಅಕ್ಟೋಬರ್ 12ರಂದು ಬೃಹತ್​​ ಪ್ರತಿಭಟನೆ ಮಾಡಲಾಯಿತು.

ನಗರದ ಸುಭಾಷ್​ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ನುಗ್ಗಿ ಧರಣಿ ಕುಳಿತರು. ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ರೈತರ ಜೊತೆ ರಾಜ್ಯ ಸರ್ಕಾರ ಚೆಲ್ಲಾಟ ಆಡುತ್ತಿದೆ. ನೀರಾವರಿ ಅನುಕೂಲಕ್ಕಾಗಿ ಅಗತ್ಯಕ್ಕನುಗುಣವಾಗಿ ವಿದ್ಯುತ್​​ ನೀಡುತ್ತಿಲ್ಲ ಆಕ್ರೋಶ ವ್ಯಕ್ತಪಡಿಸಿದರು.

The BJP activists protest over electricity cuts in Yadagiri

ರಾಜ್ಯ ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ನಿರಂತರ ಹತ್ತು ತಾಸು ತ್ರೀಫೇಸ್​​ ವಿದ್ಯುತ್​​ ನೀಡಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಜೆ.ಮಂಜುನಾಥ್​ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.

ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಚಂದ್ರಶೇಖರ್​ ಗೌಡ ಮಾಗನೂರು, ಮಾಜಿ ಶಾಸಕ ವೀರಬಸವಂತರೆಡ್ಡಿ ಮುದ್ನಾಳ್​​ ಸೇರಿದಂತೆ ಹಲವು ಮುಖಂಡರು, ಸಾವಿರಾರು ಕಾರ್ಯಕರ್ತರು ಭಾಗವಹಿಸಿದ್ದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
The BJP activists protest on Thursday, against Karnataka government over electricity cuts in Yadagiri.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ