ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳ ಆಯ್ಕೆ: ದೆಹಲಿಗೆ ಬರುವಂತೆ ಬಿಜೆಪಿ ಹೈಕಮಾಂಡ್ ಬುಲಾವ್- ಪಟ್ಟಿ ಬಿಡುಗಡೆ ಯಾವಾಗ?
ಬೆಂಗಳೂರು, ಫೆಬ್ರವರಿ 17: ಮುಂದಿನ ಲೋಕಸಭಾ ಚುಣಾವಣೆಯನ್ನ ಪರಿಷ್ಠೆಯಾಗಿ ತೆಗೆದುಕೊಂಡಿದರು ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಾಗಿದೆ. ಈಗಾಗಲೇ ಮೈತ್ರಿ ಕುರಿತು ಹಾಗೂ ಕ್ಷೇತ್ರ ಹಂಚಿಕೆ ಕುರಿತು ಬಿಜೆಪಿ ಹೈಕಮಾಂಡ್ ನಾಯಕರ ಜೊತೆಗೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಮಾತುಕತೆ ನಡೆಸಿದ್ದಾರೆ.
ಹೌದು, ಲೋಕಸಭಾ ಚುನಾವಣೆಗಾಗಿ ಕರ್ನಾಟಕದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಮೈತ್ರಿಗೆ ಭರ್ಜರಿ ಸಿದ್ದತೆ ನಡೆಯುತ್ತಿದ್ದು, ರಾಜ್ಯ ಬಿಜೆಪಿ ನಾಯಕರಾದ ಬಿ ವೈ ವಿಜಯೇಂದ್ರ ಹಾಗೂ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಮಾತುಕತೆ ನಡೆಸಿದ್ದಾರೆ. ಇನ್ನೂ ಅಂತಿಮ ಹಂತದ ಮೈತ್ರಿ ಕುರಿತು ಚರ್ಚೆ ನಡೆಸಲು ಬಿಜೆಪಿ ಹೈಕಮಾಂಡ್ ನಾಯಕರು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರನ್ನ ದೆಹಲಿಗೆ ಬರುವಂತೆ ಬುಲಾವ್ ನೀಡಿದ್ದಾರೆ.

ಈ ಕುರಿತು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮಾತನಾಡಿ, ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಜೆಡಿಎಸ್- ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಿ, ಬಿಡುಗಡೆ ಮಾಡುವ ಸಂಬಂಧ ಚರ್ಚಿಸಲು ಬಿಜೆಪಿ ವರಿಷ್ಠರು ದೆಹಲಿಗೆ ಬರುವಂತೆ ಕರೆದಿದ್ದಾರೆ ಎಂದು ಹೇಳಿದ್ದಾರೆ.
ಬಿಜೆಪಿ ವರಿಷ್ಠರ ಜೊತೆ ಚರ್ಚಿಸಿ ಎಲ್ಲಾ 28 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಶೀಘ್ರ ಬಿಡುಗಡೆ ಮಾಡಲಾಗುತ್ತದೆ. ನಾನು ಮಂಡ್ಯದಿಂದ ಸ್ಪರ್ಧೆ ಮಾಡಬೇಕು ಎಂದು ಅಲ್ಲಿನ ಮುಖಂಡರು ಮತ್ತು ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಕಳೆದ ಚುನಾವಣೆಯಲ್ಲಿ ಕ್ಷೇತ್ರದ ಮತದಾರರು 5 ಲಕ್ಷಕ್ಕಿಂತ ಅಧಿಕ ಮತ ಕೊಟ್ಟಿದ್ದಾರೆ. ಮತ್ತೆ ಸ್ಪರ್ಧಿಸುವ ಕುರಿತು ಮುಂದೆ ಚರ್ಚಿಸೋಣ ಎಂದ ಅವರು, ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗಳ ಗೆಲುವಿಗೆ ತಂತ್ರಗಾರಿಕೆ ರೂಪಿಸಲು ಹಳೆ ಮೈಸೂರು ಭಾಗದ ಪಕ್ಷದ ಮುಖಂಡರ ಜೊತೆ ಸಭೆ ನಡೆಸಲಾಗಿದೆ. ಶೀಘ್ರದಲ್ಲೇ ಆ ಭಾಗದ ಎಲ್ಲಾ ತಾಲ್ಲೂಕುಗಳಿಗೂ ಪ್ರವಾಸ ಮಾಡುವುದಾಗಿ ತಿಳಿಸಿದರು.
ಇನ್ನೂ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾತುಕತೆಯನ್ನ ಈ ವಾರ ಅಂತಿಮವಾಗಲಿದ್ದು, ಮಾರ್ಚ್ ಮೊದಲ ವಾರದಂದು ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಈಗಾಗಲೇ ಜೆಡಿಎಎಸ್ ನಾಯಕರು 28 ಕ್ಷೇತ್ರಗಳ ಪೈಕಿ 6 ಕ್ಷೇತ್ರಗಳನ್ನ ಜೆಡಿಎಸ್ ನಾಯಕರು ಕೇಳಿದ್ದು, ಹಳೇ ಮೈಸೂರು ಭಾಗದಲ್ಲಿ ತನ್ನ ವರ್ಚಸ್ಸನ್ನ ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ ಮಂಡ್ಯ, ಹಾಸನ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು ಲೋಕಸಭಾ ಕ್ಷೇತ್ರವನ್ನ ಬಿಜೆಪಿ ಹೈಕಮಾಂಡ್ ನಾಯಕರ ಮುಂದೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.












Click it and Unblock the Notifications