ಜಾತಿ ಗಣತಿ ವರದಿ ಹೇಳಿ ಬರೆಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಅನುಮಾನ ನಿಜವೇ!
ಬೆಂಗಳೂರು, ಅಕ್ಟೋಬರ್ 09: ರಾಜ್ಯದಲ್ಲಿ ಸದ್ಯ ಜಾತಿ ಗಣತಿ ವರದಿ ಜಾರಿ ಪ್ರಸ್ತಾಪ ಜೋರಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಡಾ ಹಗರಣದಿಂದ ಜನರ ಗಮನ ಬೇರೆಡೆ ಸೆಳೆಯಲು ವರದಿ ಬಿಡುಗಡೆ ಬಗ್ಗೆ ಮಾತನಾಡಿದ್ದ ಎಂಬ ಮಾತು ಕೇಳಿ ಬಂದಿವೆ. ಇದರ ಬೆನ್ನಲ್ಲೆ ವಿಪಕ್ಷ ನಾಯಕ ಆರ್.ಅಶೋಕ್ ಅವರು ಸಿಎಂ ಸಿದ್ದರಾಮಯ್ಯ ಅವರ ಮೇಲೆ ಗಂಭೀರ ಆರೋಪ ಮಾಡಿದ್ದಾರೆ.
ಜಾತಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಆರ್.ಅಶೋಕ್ ಅವರು, ಗಣತಿ ಮಾಡಲು ಯಾರೂ ಮನೆಗೆ ಬಂದೇ ಇಲ್ಲ ಎಂದು ಲಿಂಗಾಯತ, ಒಕ್ಕಲಿಗ ಮೊದಲಾದ ಸಮುದಾಯದವರು ಹೇಳಿದ್ದಾರೆ. ಕೆಲವೇ ಜಾತಿಗಳ ವೈಭವೀಕರಣ, ಇನ್ನೂ ಕೆಲವು ಜಾತಿಗಳ ಮೇಲೆ ದ್ವೇಷ ಹಾಗೂ ಅವೈಜ್ಞಾನಿಕತೆ ಇದರಲ್ಲಿ ಕಂಡುಬಂದಿದೆ ಎಂದು ಅವರು ದೂರಿದ್ದಾರೆ.

ಕರ್ನಾಟಕ ಜಾತಿ ಗಣತಿ ವರದಿ ಅನುಷ್ಠಾಣ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ಬಿಜೆಪಿಯ ಮೇಲೆ ಆರೋಪ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ವರದಿಯಲ್ಲಿ ಏನಿರಬೇಕೆಂದು ಹೇಳಿ ಬರೆಸಿದ್ದಾರೆ ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ. ಏಕೆಂದರೆ ಈ ಹಿಂದೆ ಎಚ್ ಡಿ ಕುಮಾರಸ್ವಾಮಿ ಅವರಿದ್ದಾಗ ಸಿಎಂ ಆಗಿದ್ದಾಗ ಮಾತನಾಡದ ಸಿದ್ದರಾಮಯ್ಯ ಅವರು ಈಗ ಮಾತನಾಡುತ್ತಿದ್ದು, ಈ ಬಗ್ಗೆ ಆರ್.ಅಶೋಕ್ ಅವರು ಅನುಮಾನ ವ್ಯಕ್ತಪಡಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಹಿಂದೆ ಜಾತಿ ಗಣತಿ ಬಗ್ಗೆ ತುಟಿ ಬಿಚ್ಚಿರಲಿಲ್ಲ. ಇಂದು ಮುಡಾ ಪ್ರಕರಣ, ಮತ್ತೊಂದೆ ಕಡೆ ಜಾರಿ ನಿರ್ದೇಶನಾಲಯದ ತನಿಖೆ ಆರಂಭವಾಗಿದೆ. ಜೊತೆಗೆ ಲೋಕಾಯುಕ್ತ ತನಿಖೆ ನಡೆಯುತ್ತಿದೆ. ಇವೆಲ್ಲವನ್ನೂ ಮುಚ್ಚಿಹಾಕಲು ಈಗ ವರದಿಯನ್ನು ಹೊರ ತೆಗೆಯಲಾಗಿದೆ ಎಂದು ತಿಳಿಸಿದರು.
ಜನಸಂಖ್ಯಾ ಗಣತಿ ಜೊತೆಗೆ ಜಾತಿ ಗಣತಿ ಮಾಡಬೇಕೆಂದು ಕಾಂಗ್ರೆಸ್ ಸಲಹೆ ನೀಡಿದೆ. 10 ವರ್ಷವಾಗುತ್ತಾ ಬಂದರೂ ಜಾತಿ ಗಣತಿ ವರದಿ ಬಿಡುಗಡೆ ಮಾಡದ ಇವರು ಪ್ರಧಾನಿಗೆ ಪ್ರಧಾನಿಗೆ ಸಲಹೆ ನೀಡಲು ಬರುತ್ತಾರೆ. ಕಾಂಗ್ರೆಸ್‌ನ ಶಾಮನೂರು ಶಿವಶಂಕರಪ್ಪ, ಡಾ.ಸುಧಾಕರ್, ಡಿ.ಕೆ.ಶಿವಕುಮಾರ್ ಮತ್ತಿತರರೇ ವರದಿ ಬಿಡುಗಡೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹೀಗಿದ್ದರೂ ಬಿಜೆಪಿ ಮೇಲೆ ಗೂಬೆ ಕೂರಿಸುವ ಕೆಲಸವಾಗುತ್ತಿದೆ ಎಂದು ದೂರಿದರು.
ಸಿಎಂ ಬದಲಾವಣೆ ಬಗ್ಗೆ ರಾಜಾರೋಷವಾಗಿ ಮಾತನಾಡುತ್ತಾರೆ
ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಚರ್ಚೆ ನಿರಂತರವಾಗಿ ನೆಡಯುತ್ತಿದೆ. ಬೆಳಗಾವಿಯ ಸಚಿವರು ಪ್ರತಿ ಜಿಲ್ಲೆಗೂ ಭೇಟಿ ನೀಡಿ ರೋಡ್ ಶೋ ನಡೆಸುತ್ತಿದ್ದಾರೆ. ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಸಹ ಸಿಎಂ ರೇಸಿನಲ್ಲಿದ್ದಾರೆ. ಪಕ್ಷದ ವಿರುದ್ಧ ಮಾತಾಡಿದರೆ ನೋಟಿಸ್ ನೀಡುತ್ತೇನೆ ಎಂದು ಡಿ.ಕೆ.ಶಿವಕುಮಾರ್ ಎಚ್ಚರಿಕೆ ಕೊಟ್ಟಿದ್ದರೂ ಸಹ ಯಾರು ಈ ಬಗ್ಗೆ ಕ್ಯಾರೆ ಎನ್ನದೇ ಮಾತನಾಡುತ್ತಿದ್ದರೆ. ಇತ್ತ ಸಿಎಂ ಜಾತಿ ಗಣತಿ ವರದಿ ಜಾರಿಯನ್ನು ಮುನ್ನೆಲೆಗೆ ತಂದರು.
ಸುಪ್ರೀಂ ಕೋರ್ಟ್ ಇತ್ತೀಚೆಗೆ ಒಳ ಮೀಸಲಾತಿ ಬಗ್ಗೆ ಆದೇಶಿಸಿದೆ. ಹಿಂದಿನ ಬಿಜೆಪಿ ಸರ್ಕಾರ ಈ ಕುರಿತು ಪ್ರಯತ್ನ ಮಾಡಿತ್ತು. ಮೀಸಲು ಪ್ರಮಾಣವನ್ನು ಪರಿಶಿಷ್ಟ ಜಾತಿಗೆ 3% ರಿಂದ 7% ಕ್ಕೆ ಏರಿಸಲಾಗಿತ್ತು. ಮೀಸಲಾತಿ ಹೆಚ್ಚಿಸಿ ಸಾಮಾಜಿಕ ನ್ಯಾಯ ನೀಡಿದ್ದೇ ಬಿಜೆಪಿ. ದಲಿತರು, ಹಿಂದುಳಿದವರ ಚಾಂಪಿಯನ್ ಎಂದು ಹೇಳಿಕೊಳ್ಳುವ ಕಾಂಗ್ರೆಸ್ ಹರ್ಯಾಣ ಚುನಾವಣೆಯಲ್ಲಿ ಸೋತಿದೆ.
ಆದರೆ ಬಿಜೆಪಿ ಎಂದಿಗೂ ಮೀಸಲು ವಿಚಾರದಲ್ಲಿ ಹಿಂದುಳಿದಿಲ್ಲ. ದಲಿತರ ಅಭಿವೃದ್ಧಿಗೆ ಬಿಜೆಪಿ ಸದಾ ಶ್ರಮಿಸಿದೆ. ದಲಿತರ ಪರವಾಗಿ ಕಾಂಗ್ರೆಸ್ ಕೆಲಸ ಮಾಡುತ್ತಿದೆ ಎನ್ನುವುದಾದರೆ ಒಳ ಮೀಸಲಾತಿ ತರಲಿ ಎಂದು ಅವರು ತಿಳಿಸಿದರು.












Click it and Unblock the Notifications