DCM DK Shivakumar: ಮಂಗಳಸೂತ್ರ, ಜನಿವಾರ ನಿಷೇಧ ಕೇಂದ್ರ ಹಿಂಪಡೆಯಲಿ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು, ಏಪ್ರಿಲ್‌ 28: ಈ ಬಿಜೆಪಿಯವರು ಹೇಳುವುದು ಒಂದು ಮಾಡುವುದು ಇನ್ನೊಂದು. ಇದೇ ಅವರ ಮುಖವಾಡ. ರೈಲ್ವೆ ಪರೀಕ್ಷೆಯಲ್ಲಿ ಮಂಗಳಸೂತ್ರ, ಜನಿವಾರ ತೆಗೆಯಬೇಕು ಎಂದು ಹೇಳಿರುವುದು ಸರಿಯಲ್ಲ. ಇದನ್ನು ಹಿಂಪಡೆಯಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಆಗ್ರಹಿಸಿದರು.
ರೈಲ್ವೆ ಪರೀಕ್ಷೆಯಲ್ಲಿ ಜನಿವಾರ, ತಾಳಿ ಧರಿಸುವುದನ್ನು ನಿಷೇಧ ಮಾಡಿರುವ ಕುರಿತು ಸದಾಶಿವನಗರದ ನಿವಾಸದ ಬಳಿ ಸೋಮವಾರ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಮಾತನಾಡಿ, ಧಾರ್ಮಿಕ ಸಂಕೇತಗಳಾಗಿ ಕಿವಿಯಲ್ಲಿ ಓಲೆ, ಮೂಗೂತಿ, ಮಂಗಳಸೂತ್ರ, ಜನಿವಾರ, ಉಡುದಾರ, ಹಣೆಬೊಟ್ಟು ಇರುತ್ತದೆ. ಇವುಗಳನ್ನು ಪರಿಶೀಲನೆ ಮಾಡಲಿ. ಆದರೆ ಅದನ್ನು ತೆಗೆಸುವುದು ಸರಿಯಲ್ಲ. ಈ ಹಿಂದೆ ಸಣ್ಣ, ಸಣ್ಣ ಉಪಕರಣಗಳನ್ನು ಬಳಸಿ ಪರೀಕ್ಷಾ ಅಕ್ರಮ ಎಸೆದ ಉದಾಹರಣೆಗಳನ್ನು ನೋಡಿದ್ದೇವೆ. ಇದರ ವಿರುದ್ಧ ಜನರೇ ಆಕ್ರೋಶ ವ್ಯಕ್ತಪಡಿಸಬೇಕು ಎಂದು ಹೇಳಿದರು.

ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿಯಿಂದ ಜನರಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಜನಜಾಗೃತಿ ಮೂಡಿಸಿ ಹಾಗೂ ಸಂವಿಧಾನ ರಕ್ಷಣೆಗೆ ಬೆಳಗಾವಿಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ ಪ್ರತಿಭಟನೆಯಲ್ಲಿ ನಾನು, ಸಿಎಂ ಸಿದ್ದರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರು ಭಾಗವಹಿಸುತ್ತಿದ್ದೇವೆ. ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಈ ಹೋರಾಟ ಮಾಡಲಿದ್ದೇವೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಅವರು ತಿಳಿಸಿದರು.

The Centre Should Withdraw The Ban On Mangalasutra And Janivar Says DK Shivakumar

ಬಿಜೆಪಿಯವರು ಕೇಂದ್ರದಲ್ಲಿ ಇರುವ ಅವರದೇ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಬೇಕು. ಏಕೆಂದರೆ ಅವರಿಂದಲೇ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿರುವುದು. ನಾವು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ವಿರುದ್ಧ ಪ್ರತಿಭಟನೆ ನಡೆಸುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು ಹೇಳಿದರು.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+