ಡಿ ಕೆ ಶಿವಕುಮಾರ್‌ಗೆ ಸಿಎಂ ಸ್ಥಾನ ಬಿಟ್ಟು ಕೊಡಿ ಎಂದ ಒಕ್ಕಲಿಗ ಸ್ವಾಮೀಜಿ: ಶಾಮನೂರು ಶಿವಶಂಕರಪ್ಪ ಹೇಳಿದ್ದೇನು?

ದಾವಣಗೆರೆ, ಜೂನ್‌ 27: ಒಕ್ಕಲಿಗ ಸಮಾಜದ ಚಂದ್ರಶೇಖರ್ ಸ್ವಾಮೀಜಿ ಹೇಳಿದಾಕ್ಷಣ ಮುಖ್ಯಮಂತ್ರಿ ಬದಲಾವಣೆ ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಹಿರಿಯ ಶಾಸಕ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರಾಧ್ಯಕ್ಷ ಶಾಮನೂರು ಶಿವಶಂಕರಪ್ಪ ಹೇಳಿದರು.

ದಾವಣಗೆರೆ ನಗರದ ಎಂಸಿಸಿ ಬಿ ಬ್ಲಾಕ್ ನಲ್ಲಿರುವ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರ ನಿವಾಸದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದ ಅವರು, ಸಿಎಂ ಬದಲಾವಣೆ ನಾನು ಹೇಳಿದಾಕ್ಷಣ ಮಾಡಲು ಆಗುವುದಿಲ್ಲ. ಕಾಂಗ್ರೆಸ್ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ ಎಂದು ಶಾಮನೂರು ಶಿವಶಂಕರಪ್ಪ ಅವರು ತಿಳಿಸಿದರು.

The Congress high command is bound to take a decision about the CM Shamanur Shivashankarappa

ಸ್ವಾಮೀಜಿ ಹೇಳಿದ್ದಾರೆ ಎಂಬ ಕಾರಣಕ್ಕೆ ಮುಖ್ಯಮಂತ್ರಿ ಬದಲಾವಣೆ ಆಗದು. ಅದು ಅವರ ಅಭಿಪ್ರಾಯ. ಹೈಕಮಾಂಡ್ ಹೇಳಿದ್ರೆ ಮಾತ್ರ ಬದಲಾವಣೆ ಸಾಧ್ಯ ಎಂದು ಶಾಮನೂರು ಶಿವಶಂಕರಪ್ಪ ಹೇಳಿದರು.

ಎಲ್ಲಾ ಪ್ರಶ್ನೆಗಳಿಗೂ ಹೈಕಮಾಂಡ್ ಉತ್ತರ ನೀಡುತ್ತದೆ. ಸಿಎಂ ಆಗಿ ಸಿದ್ದರಾಮಯ್ಯ ಅವರು ಒಳ್ಳೆಯ ಕೆಲಸ ಮಾಡಿದ್ದಾರೆ. ಕಳೆದ ಒಂದು ವರ್ಷದಿಂದ ರಾಜ್ಯದಲ್ಲಿ ಉತ್ತಮ ಕೆಲಸಗಳಾಗಿವೆ. ಗ್ಯಾರಂಟಿ ಯೋಜನೆಗಳ ಮೂಲಕ ಜನಪ್ರಿಯ ಮುಖ್ಯಮಂತ್ರಿ ಎನಿಸಿಕೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಉತ್ತಮವಾಗಿ ಕೆಲಸ ಮಾಡಿಲ್ಲ ಎಂದು ಹೇಳಿದವರ್ಯಾರು ಎಂದು ಪ್ರಶ್ನಿಸಿದರು. ಸಿದ್ದರಾಮಯ್ಯ ಅವರು ಏನೇ ಸಮಸ್ಯೆ ಆದರೂ ಸರಿಯಾಗಿ ಉತ್ತರ ನೀಡುತ್ತಾರೆ. ಹೈಕಮಾಂಡ್ ಪ್ರಕಾರ ನಡೆದುಕೊಳ್ಳುತ್ತಾರೆ. ಯಾರು ಏನು ಹೇಳಿದ್ರೂ ನಡೆಯಲ್ಲ. ಅದು ಪಕ್ಷದ ವರಿಷ್ಠರಿಗೆ ಬಿಟ್ಟ ವಿಚಾರ ಎಂದು ಹೇಳಿದರು.

ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್ ಅವರು ಡಿ. ಕೆ. ಶಿವಕುಮಾರ್ ಅವರು ಸಿಎಂ ಆಗಲಿ, ಅರ್ಧ ಡಜನ್ ಡಿಸಿಎಂ ಮಾಡಲಿ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಹೊಸ ಶಾಸಕರು. ಅವರಿಗೆ ಯಾರು ಬೇಕೋ ಅವರ ಪರ ಮಾತನಾಡುತ್ತಾರೆ ಎಂದಷ್ಟೇ ಹೇಳಿದರು.

ಸಮುದಾಯಕ್ಕೆ ಒಂದರಂತೆ ಡಿಸಿಎಂ ಮಾಡಬೇಕೆಂಬ ಬೇಡಿಕೆ ಕುರಿತಂತೆ ಪ್ರತಿಕ್ರಿಯಿಸಿದ ಅವರು, ಐವರು ಡಿಸಿಎಂ ಆಗಬೇಕೆಂಬುದು ಆಗುವುದಿಲ್ಲ. ಇದೆಲ್ಲಾ ಆಗದು, ಹೋಗುವುದಲ್ಲ. ನಾನು ಹೇಳಿದ ಹಾಗೆ ಮಾಡುತ್ತಾರಾ? ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನವೇ ಅಂತಿಮ. ನಾವೆಲ್ಲರೂ ಬದ್ದರಾಗಿರುತ್ತೇವೆ ಎಂದು ಶಾಮನೂರು ಶಿವಶಂಕರಪ್ಪ ಹೇಳಿದರು.

ಚಂದ್ರಶೇಖರ ಸ್ವಾಮೀಜಿ ಹೇಳಿದ್ದೇನು?

ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿಯೊಬ್ಬರು ವೇದಿಕೆ ಮೇಲೆಯೇ ನೇರವಾಗಿ ಸಿಎಂ ಸಿದ್ದರಾಮಯ್ಯನವರಿಗೆ ನಿಮ್ಮ ಸ್ನಾನವನ್ನು ಡಿ.ಕೆ.ಶಿವಕುಮಾರ್ ಅವರಿಗೆ ಬಿಟ್ಟುಕೊಡಿ ಎಂದು ಮನವಿ ಮಾಡಿದ್ದಾರೆ. ರಾಜ್ಯದಲ್ಲಿ ಹಲವರು ಮುಖ್ಯಮಂತ್ರಿಗಳಾಗಿದ್ದಾರೆ. ಆದರೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಮಾತ್ರ ಇನ್ನೂ ಆ ಭಾಗ್ಯ ಸಿಕ್ಕಿಲ್ಲ. ಹಾಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂದು ಮನವಿ ಮಾಡಿದ್ದಾರೆ.

ನಿಮಗೆ ಅನುಭವವಿದೆ, ಈಗ ಡಿ.ಕೆ.ಶಿವಕುಮಾರ್ ಅವರಿಗೆ ಅವಕಾಶ ಕೊಡಿ. ಸಿದ್ದರಾಮಯ್ಯ ಮನಸ್ಸು ಮಾಡಿದರೆ ಮಾತ್ರ ಇದು ಸಾಧ್ಯ. ಹಾಗಾಗಿ ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂದು ಮನವಿ ಮಾಡಿದ್ದಾರೆ. ಇನ್ನೂ ವೇದಿಕೆ ಮೇಲೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರಿದ್ದು, ವೇದಿಕೆ ಮೇಲೆಯೇ ಸ್ವಾಮೀಜಿಯೊಬ್ಬರ ಈ ಬೇಡಿಕೆ ಸರ್ಕಾರದಲ್ಲಿ ಸಂಚಲನ ಸೃಷ್ಟಿಯಾಗುವಂತೆ ಮಾಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+