ಸಿದ್ದರಾಮಯ್ಯ ರಾಜೀನಾಮೆಗೆ ಕ್ಷಣಗಣನೆ ಶುರುವಾಗಿದೆ- ಬಿ.ವೈ ವಿಜಯೇಂದ್ರ

ಬೆಂಗಳೂರು, ಆಗಸ್ಟ್‌ 27: ಈ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಅಭಿವೃದ್ಧಿ ಆಗಿಲ್ಲ ಎನ್ನುವುದಕ್ಕಿಂತ ಶುರುವೇ ಆಗಿಲ್ಲ. ಕೆ‌ಎಸ್‌ಆರ್‌ಟಿಸಿಗೆ ಹಣವನ್ನು ಬಾಕಿ ಉಳಿಸಿಕೊಂಡಿದೆ. ಸಂಬಳ ಕೊಡಲು ದುಡ್ಡಿಲ್ಲ. ಅಂಗನವಾಡಿ ಕಾರ್ಯಕರ್ತರಿಗೆ ಗೌರವ ಧನ ಹೆಚ್ಚಿಸುವ ಭರವಸೆ ನೀಡಿದ್ದರು. ಹೆಚ್ಚಿಸುವುದು ಇರಲಿ ಇರುವ ಗೌರವ ಧನ ನೀಡಲು ಸಾಧ್ಯವಾಗುತ್ತಿಲ್ಲ. ಮಹಿಳೆಯರ ಮೇಲೆ ಅತ್ಯಚಾರ ಪ್ರಕರಣ ಹೆಚ್ಚಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಕಾಂಗ್ರೆಸ್‌ ಸರ್ಕಾರ ವಿರುದ್ಧ ಕಿಡಿಕಾರಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವಾಗ ಬೇಕಾದರೂ ರಾಜೀನಾಮೆ ನೀಡಬಹುದು. ಮಂತ್ರಿಗಳು ವಿಧಾನಸೌಧಕ್ಕೆ ಬರುತ್ತಿಲ್ಲ. ಡಿ.ಕೆ ಶಿವಕುಮಾರ್ ವೈಷ್ಣೊದೇವಿಗೆ ಹೋಗಿ ಆರ್ಶಿವಾದ ಪಡೆದುಕೊಂಡು ಬಂದಿದ್ದಾರೆ. ಕ್ಷಣಗಣನೆ ಶುರುವಾಗಿದೆ, ಸಿದ್ದರಾಮಯ್ಯ ಯಾವಾಗ ಬೇಕಾದರೂ ರಾಜೀನಾಮೆ ನೀಡಬಹುದು ಎಂದರು.

The Countdown To Siddaramaiah s Resignation Has Begun Says BJP State President BY Vijayendra

ಬಿಜೆಪಿ ಮತ್ತು ಜೆಡಿಎಸ್ ಭ್ರಷ್ಟ ಕಾಂಗ್ರೆಸ್ ವಿರುದ್ಧ ಸದನದ ಹೊರಗೆ ಮತ್ತು ಒಳಗೆ ಹೋರಾಟ ಮಾಡುತ್ತಾ ಬಂದಿದೆ. ಈ ಹೋರಾಟ ಪರಿಣಾಮ ಸಚಿವ ಸ್ಥಾನದಿಂದ ಬಿ.ನಾಗೇಂದ್ರ ಅವರು ರಾಜೀನಾಮೆ ಕೊಡಬೇಕಾಯಿತು. ಸಿಎಂ ಸಿದ್ದರಾಮಯ್ಯ ಅವರು ವಾಲ್ಮೀಕಿ ನಿಗಮದಲ್ಲಿ ಹಗರಣ ಆಗಿದೆ ಎಂದು ಒಪ್ಪಿಕೊಂಡಿದ್ದಾರೆ. ಈ ಹಣ ದುರ್ಬಳಕೆ ಮಾಡಿಕೊಂಡಿದೆ, ಲೋಕಸಭೆ ಚುನಾವಣೆಗೆ ಬಳಕೆಯಾಗಿದೆ, ಹೆಂಡ ಖರೀದಿ ಮಾಡಿದೆ ಎಂದು ED ಹೇಳಿದೆ ಎಂದರು.

ರಾಜ್ಯ ಸರ್ಕಾರ ರಚಿಸಿದ ಎಸ್‌ಐಟಿ ತರಾತುರಿಯಲ್ಲಿ ತನಿಖೆ ಮಾಡಿ ನಾಗೇಂದ್ರ ಮತ್ತು ದದ್ಧಲ್‌ಗೆ ಕ್ಲೀನ್‌ ಚಿಟ್ ಕೊಟ್ಟಿದ್ದಾರೆ. ಇದು ನಿರೀಕ್ಷಿತ ಎನ್ನುವುದು ನಮ್ಮಗೂ ಗೊತ್ತಿತ್ತು. ಎಸ್‌ಐಟಿ ನಾಗೇಂದ್ರ ಮತ್ತು ದದ್ಧಲ್ ತಪ್ಪಿಸ್ಥರು ಎಂದಿದ್ದರೆ ಸಿಎಂಗೆ ಸಮಸ್ಯೆಯಾಗುತ್ತಿತ್ತು. ಸಿಎಂ ಬುಡಕ್ಕೆ ಬರುತ್ತಿತ್ತು ಎನ್ನುವ ಕಾರಣಕ್ಕೆ ಕ್ಲೀನ್‌ ಚಿಟ್ ಕೊಟ್ಟಿದೆ ಎಂದು ಹೇಳಿದರು.

The Countdown To Siddaramaiah s Resignation Has Begun Says BJP State President BY Vijayendra

ಮೂಡಾ ಹಗರಣದಲ್ಲಿ 14 ಅಕ್ರಮ ನಿವೇಶನ ಪಡೆದಿದೆ. ಸಿದ್ದರಾಮಯ್ಯ ಸಿಎಂ ಆದ ಮೇಲೆ 5,000 ಕೋಟಿ ಹಗರಣವಾಗಿದೆ. ಅಭಿವೃದ್ಧಿ ಮಾಡುತ್ತೇವೆ ಎಂದು ಅಹಿಂದಾ ಸಮಾವೇಶ ಮಾಡಿಕೊಂಡು. ಈಗ ಅಹಿಂದಾ ವರ್ಗಕ್ಕೆ ಅನ್ಯಾಯ ಮಾಡುತ್ತಿದೆ. ರಾಜ್ಯದಲ್ಲಿ ಎಸ್‌ ಎಸ್ಟಿಗೆ ಮೀಸಲಾದ ಹಣವನ್ನು ಲೂಟಿ ಹೊಡೆದಿದೆ ಎಂದು ಆರೋಪಿಸಿದರು.

ಮೈಸೂರಿನ ಮೂಡಾದಲ್ಲೂ ಬಡವರಿಗೆ ವಂಚನೆ ಮಾಡಿ, ರಿಯಲ್ ಎಸ್ಟೇಟ್ ನಡೆಸುವ ಪುಡಾರಿಗಳಿಗೆ ಅವಕಾಶ ಮಾಡಿಕೊಟ್ಟಿದೆ. ಬಿಜೆಪಿ ಜೆಡಿಎಸ್ ಎತ್ತಿರುವ ಪ್ರಶ್ನೆಗಳಿಗೆ ಸಿಎಂ ಬಳಿ ಉತ್ತರ ಇಲ್ಲ. ಬಿಜೆಪಿ ಸರ್ಕಾರ ಇದ್ದಾಗಲೇ ನಿವೇಶನ ನೀಡಿದೆ ಎಂದು ಸಿಎಂ ಹೇಳಿದ್ದರು. ಬಿಜೆಪಿ ಅವಧಿಯಲ್ಲಿ 14 ನಿವೇಶನ ನೀಡಿದೆ ಎಂದು ಆರೋಪ ಮಾಡಿದೆ. ಆದರೆ ಇದು ಮೂಡಾದ ಯಾವ ಸಭೆಯಲ್ಲಿ ಅನುಮತಿ ನೀಡಿಲ್ಲ. ರಾಜ್ಯ ಸರ್ಕಾರವೂ ಇದಕ್ಕೆ ಅನುಮತಿ ಪಡೆದುಕೊಂಡಿಲ್ಲ. ಅಕ್ರಮವಾಗಿ 14 ನಿವೇಶನ ಪಡೆದುಕೊಂಡಿದೆ ಎಂದು ಗೊತ್ತಿದ್ದರು. ವಿರೋಧ ಪಕ್ಷದ ನಾಯಕರಾಗಿ ಅನಾಯಸವಾಗಿ ಬರುತ್ತಿದೆ ಎಂದು ಸುಮ್ಮನೆ ಕೂತಿದ್ದರು ಎಂದು ವ್ಯಂಗ್ಯವಾಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+