ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ITI ಕಲಿಯುವ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಕೊಟ್ಟ ಉನ್ನತ ಶಿಕ್ಷಣ ಇಲಾಖೆ!

|
Google Oneindia Kannada News

ಬೆಂಗಳೂರು, ಸೆ. 14: ಐಟಿಐ ಕಲಿಯುವ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಇಲಾಖೆ ಸಿಹಿ ಸುದ್ದಿ ಕೊಟ್ಟಿದೆ. ಐಟಿಐ ಕಲಿತರೆ ಉದ್ಯೋಗ ಖಾತರಿ ಎನ್ನುವಂತಹ ಪರಿಸ್ಥಿತಿಯಿದೆ. ಅದಕ್ಕೆ ತಕ್ಕೆಂತ ಐಟಿಐ ಮುಗಿಸಿದ ವಿದ್ಯಾರ್ಥಿಗಳಿಗೆ ಒಂದಿಲ್ಲೊಂದು ಕಡೆಗೆ ಉದ್ಯೋಗ ಖಾತ್ರಿಯಾಗಿ ಸಿಗುತ್ತಿದೆ. ಜೊತೆಗೆ ಐಟಿಐ ತರಬೇಟಿ ಸಂಸ್ಥೆಗಳನ್ನು ಉನ್ನತ ದರ್ಜೆಗೆ ಏರಿಸಲು ಸರ್ಕಾರ ಕೂಡ ಕ್ರಮ ಕೈಗೊಳ್ಳುತ್ತಿದೆ.

ಇದರೊಂದಿಗೆ ಟಾಟಾ ಕಂಪನಿಯ ಸಹಯೋಗದಲ್ಲಿ ರಾಜ್ಯದ 150 ಕೈಗಾರಿಕಾ ತರಬೇತಿ ಸಂಸ್ಥೆಗಳನ್ನು ಉನ್ನತೀಕರಿಸುವ ಕಾರ್ಯಕ್ರಮದಡಿ ಈಗಿನ ಬೇಡಿಕೆಗಳನ್ನು ಗಮನದಲ್ಲಿರಿಸಿಕೊಂಡು 6 ಹೊಸ ಕೋರ್ಸ್‌ಗಳಿಗೆ ರಾಜ್ಯ ವೃತ್ತಿಶಿಕ್ಷಣ ಪರಿಷತ್ (ಎಸ್.ವಿ.ಸಿ.ಟಿ.) ಮಂಗಳವಾರ ಅನುಮೋದನೆ ನೀಡಿದೆ.

ಉನ್ನತ ಶಿಕ್ಷಣ ಸಚಿವ ಹಾಗೂ ಕೌಶಾಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯಗಳ ಇಲಾಖೆ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಎಲ್ಲ ಐಟಿಐಗಳಿಗೆ ಈ ನಿರ್ಣಯ ಅನ್ವಯ!

ಎಲ್ಲ ಐಟಿಐಗಳಿಗೆ ಈ ನಿರ್ಣಯ ಅನ್ವಯ!

ಈ ನಿರ್ಣಯವು ಎಲ್ಲಾ 150 ಐ.ಟಿ.ಐ.ಗಳಿಗೆ ಅನ್ವಯವಾಗುತ್ತದೆ. ಈ ಸಾಲಿನಿಂದಲೇ ವಿದ್ಯಾರ್ಥಿಗಳ ಪ್ರವೇಶಾತಿಗೆ ಅನುಕೂಲ ಮಾಡಿಕೊಡುವುದಕ್ಕಾಗಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ತಿಳಿಸಿದ್ದಾರೆ.

ಐಟಿಐ ಕಲಿಯಲು ವಿದ್ಯಾರ್ಥಿಗಳು ಮುಂದೆ ಬರುತ್ತಿದ್ದಾರೆ. ಐಟಿಐನಿಂದ ಸ್ವದ್ಯೋಗವನ್ನೂ ಮಾಡಬಹುದು. ಜೊತೆಗೆ ಕೈಗಾರಿಕೆಗಳಲ್ಲಿಯೂ ಉದಗಯೋಗಕ್ಕೆ ಅವಕಾಶವಿದೆ. ಹೀಗಾಗಿ ಕೈಗಾರಿಕೆಯಲ್ಲಿ ಉಸ್ಯೋಗಕ್ಕೆ ಅನುಕೂಲವಾಗುವಂತೆ ಹೊಸದಾಗಿ ಆರು ಕೋರ್ಸ್‌ಗಳನ್ನು ಸೇರಿಸಲಾಗಿದೆ. ಆ ಮೂಲಕ ಐಟಿಐ ಕಲಿಯುವ ವಿದ್ಯಾರ್ಥಿಗಳಿಗೆ ಹೊಸ ಭರವಸೆಯನ್ನು ಉನ್ನತ ಶಿಕ್ಷಣ ಇಲಾಖೆ ಕೊಟ್ಟಿದೆ.

ಹೊಸ ITI ಕೋರ್ಸ್‌ಗಳ ವಿವರ ಹೀಗಿದೆ

ಹೊಸ ITI ಕೋರ್ಸ್‌ಗಳ ವಿವರ ಹೀಗಿದೆ

ಬ್ಯಾಟರಿ ಎಲೆಕ್ಟ್ರಿಕ್ ವೆಹಿಕಲ್ (2 ವರ್ಷ), ಬೇಸಿಕ್ಸ್ ಆಫ್ ಡಿಜೈನ್ ಅಂಡ್ ವರ್ಚ್ಯುಯಲ್ ವೆರಿಫಿಕೇಷನ್ (2 ವರ್ಷ), ಅಡ್ವಾನ್ಸ್ಡ್ ಮ್ಯಾನಫ್ಯಾಕ್ಚರಿಂಗ್ (1 ವರ್ಷ), ಆರ್ಟಿಸಾನ್ ಯೂಸಿಂಗ್ ಅಡ್ವಾನ್ಸ್ಡ್ ಟೂಲ್ಸ್ (1 ವರ್ಷ), ಇಂಡಸ್ಟ್ರಿಯಲ್ ರೊಬೊಟಿಕ್ಸ್ ಅಂಡ್ ಡಿಜಿಟಲ್ ಮ್ಯಾನಫ್ಯಾಕ್ಚರ್ (1 ವರ್ಷ), ಮ್ಯಾನಫ್ಯಾಕ್ಚರಿಂಗ್ ಪ್ರೊಸೆಸ್ ಕಂಟ್ರೋಲ್ ಆಟೊಮೇಷನ್ (1 ವರ್ಷ), ಈ 6 ಸಂಯೋಜನೆಗಳು ಐ.ಟಿ.ಐ.ಗೆ ಸೇರ್ಪಡೆಯಾಗುತ್ತವೆ ಎಂದು ಅಶ್ವಥ್ ನಾರಾಯಣ ವಿವರಿಸಿದ್ದಾರೆ.

ರಾಷ್ಟ್ರೀಯ ವೃತ್ತಿಶಿಕ್ಷಣ ತರಬೇತಿ ಪರಿಷತ್ ಮಾನ್ಯತೆ

ರಾಷ್ಟ್ರೀಯ ವೃತ್ತಿಶಿಕ್ಷಣ ತರಬೇತಿ ಪರಿಷತ್ ಮಾನ್ಯತೆ

ಅಂತಿಮವಾಗಿ ಈ ಸಂಯೋಜನೆಗಳಿಗೆ ರಾಷ್ಟ್ರೀಯ ವೃತ್ತಿಶಿಕ್ಷಣ ತರಬೇತಿ ಪರಿಷತ್ (ಎನ್.ಸಿ.ವಿ.ಇ.ಟಿ.) ಮಾನ್ಯತೆ ಕೊಡಬೇಕು. ಅದಕ್ಕೆ ಪೂರಕವಾಗಿ ಈ 6 ಸಂಯೋಜನೆಗಳಿಗಾಗಿ ಸಿದ್ಧಪಡಿಸಲಾಗಿರುವ ಪಠ್ಯಕ್ರಮಕ್ಕೆ ನವದೆಹಲಿಯ ತರಬೇತಿ ಮಹಾನಿರ್ದೇಶನಾಲಯದಿಂದ (ಡಿ.ಜಿ.ಟಿ.) ಅನುಮೋದನೆ ಪಡೆಯಬೇಕಾಗಿರುತ್ತದೆ. ಈಗ ರಾಜ್ಯ ಸರ್ಕಾರವು ಈ ಸಂಯೋಜನೆಗಳ ಪಠ್ಯಕ್ರಮವನ್ನು ಡಿ.ಜಿ.ಟಿ.ಗೆ ಸಲ್ಲಿಸಿದ್ದು, ಅದು ಪ್ರಕ್ರಿಯೆಯಲ್ಲಿದೆ. ಆದರೆ, ವಿದ್ಯಾರ್ಥಿಗಳ ಪ್ರವೇಶಾತಿಗೆ ಅನುಕೂಲ ಮಾಡಿಕೊಡುವುದಕ್ಕಾಗಿ ಎನ್.ಸಿ.ವಿ.ಇ.ಟಿ.ಯಿಂದ ಈ 6 ಸಂಯೋಜನೆಗಳಿಗೆ ಮಾನ್ಯತೆ ಪಡೆಯುವ ಷರತ್ತಿಗೊಳಪಟ್ಟು ಈ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದೂ ಅಶ್ವಥ್ ನಾರಾಯಣ ಸ್ಪಷ್ಟಪಡಿಸಿದ್ದಾರೆ.

Recommended Video

ತಾಲಿಬಾನಿಗಳ ಅಟ್ಟಹಾಸಕ್ಕೆ ಹೆದರಿದ ಪಾಕಿಸ್ತಾನ! | Oneindia Kannada
ಅಲ್ಪಾವಧಿ ಕೋರ್ಸ್‌ಗಳಿಗೆ ಅನುಮೋದನೆ!

ಅಲ್ಪಾವಧಿ ಕೋರ್ಸ್‌ಗಳಿಗೆ ಅನುಮೋದನೆ!

ಇದೇ ಸಭೆಯಲ್ಲಿ, 3 ತಿಂಗಳ ಅವಧಿಯ 23 ಅಲ್ಪಾವಧಿ ಸರ್ಟಿಫೈಡ್ ಕೋರ್ಸ್‌ಗಳಿಗೆ ಕೂಡ ಎಸ್.ವಿ.ಸಿ.ಟಿ.ಯು ಅನುಮೋದನೆ ನೀಡಿದೆ ಎಂದು ಸಚಿವ ಡಾ. ಅಶ್ವಥ್ ನಾರಾಯಣ ಹೇಳಿದ್ದಾರೆ. ಕೌಶಲಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಡಾ. ಎಸ್. ಸೆಲ್ವಕುಮಾರ್, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಆಯುಕ್ತ ಡಾ. ಹರೀಶ್ ಕುಮಾರ್ ಕೆ. ಮತ್ತಿತರರು ಇದ್ದರು.

ಈ ಹಿಂದೆ ಡಿಪ್ಲೊಮಾ ಇಂಜಿನಿಯರಿಂಗ್‌ನಲ್ಲಿದ್ದ 33 ಕೋರ್ಸ್‌ಗಳೊಂದಿಗೆ 8 ಹೊಸ ಕೋರ್ಸ್‌ಗಳನ್ನು ಈ ಶೈಕ್ಷಣಿಕ ವರ್ಷದಿಂದ ಆರಂಭಿಸಲು ಉನ್ನತ ಶಿಕ್ಷಣ ಇಲಾಖೆ ತೀರ್ಮಾನ ಮಾಡಿತ್ತು. ಇದೀಗ ಅದೇ ಮಾದರಿಯಲ್ಲಿ ಐಟಿಐಗೂ ಹೊಸ ಕೋರ್ಸ್‌ಗಳನ್ನು ಸೇರಿಸಲಾಗಿದೆ.

English summary
The Department of Higher Education has added 6 new courses for ITI students. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X