Council Election: ಶಿಕ್ಷಣ ಕ್ಷೇತ್ರದ ಪರಿಷತ್ ಚುನಾವಣೆ ಯಾವಾಗ? ಅಪ್‌ಡೇಟ್ ಕೊಟ್ಟ ಡಿ ಕೆ ಶಿವಕುಮಾರ್
ಬೆಂಗಳೂರು, ಸೆಪ್ಟೆಂಬರ್ 05: ಶಿಕ್ಷಣ ಕ್ಷೇತ್ರದ ಪರಿಷತ್ ಚುನಾವಣೆ ಮುಂದಿನ ವರ್ಷ ನಡೆಯಲಿದ್ದು, ಈ ತಿಂಗಳ ಒಳಗಾಗಿ ಅರ್ಜಿ ಕರೆಯಲಾಗುವುದು. ನಂತರ ಅಭ್ಯರ್ಥಿ ಆಯ್ಕೆ ಮಾಡಲಾಗುವುದು. ಜಿ.ಸಿ.ಚಂದ್ರಶೇಖರ್ ಅವರಿಗೆ ಇದರ ಜವಾಬ್ದಾರಿ ನೀಡಲಾಗಿದೆ. ನಾಲ್ಕು ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು ಇದರ ಬಗ್ಗೆ ಹೆಚ್ಚು ಗಮನ ಹರಿಸಬೇಕು. ಇತ್ತೀಚೆಗೆ ಪುಟ್ಟಣ್ಣ ಸೇರಿದಂತೆ ಅನೇಕರು ಗೆದ್ದಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದರು.
ಕೆಪಿಸಿಸಿ ಕಚೇರಿಯ ಭಾರತ ಜೋಡೋ ಸಭಾಂಗಣದಲ್ಲಿ ಶುಕ್ರವಾರ ನಡೆದ ಶಿಕ್ಷಕರ ದಿನ ಕಾರ್ಯಕ್ರಮದಲ್ಲಿ ಶಿಕ್ಷಕರನ್ನು ಸನ್ಮಾನಿಸಿ ಶಿವಕುಮಾರ್ ಅವರು ಮಾತನಾಡಿ, ಶಿಕ್ಷಕರು ಹೊಸ ವಿಚಾರಗಳತ್ತ ಗಮನಹರಿಸಬೇಕು. ಎಐ ಈಗ ಎಲ್ಲವನ್ನು ನಿಯಂತ್ರಿಸುತ್ತಿದೆ. ಅದಕ್ಕೆ ತಕ್ಕಂತೆ ನೀವು ತಯಾರಿ ಮಾಡಿಕೊಳ್ಳಬೇಕು. ಸಮಾಜಕ್ಕೆ ನಾಲ್ಕು ಉತ್ತಮ ಪ್ರಜೆಗಳನ್ನು ತಯಾರು ಮಾಡಿದ ಆತ್ಮತೃಪ್ತಿ ನಿಮ್ಮಲ್ಲಿ ಇರಲಿ. ಗುರು ಗುರಿ ನೀಡುತ್ತಾನೆ. ಗುರಿ ತಲುಪಬೇಕಾದರೆ ಗುರು ಇರಬೇಕು ಎಂದು ಹೇಳಿದರು.

ಇಡೀ ಪ್ರಪಂಚ ಭಾರತವನ್ನು ಕರ್ನಾಟಕ ಹಾಗೂ ಬೆಂಗಳೂರಿನ ಮೂಲಕ ನೋಡುತ್ತಿದೆ. ಇದಕ್ಕೆ ಶಿಕ್ಷಕರೇ ಮೂಲ ಕಾರಣ. ಶಿಕ್ಷಣದಿಂದಲೇ ಪ್ರಗತಿ ಹೀಗಾಗಿ ನಮ್ಮ ಪ್ರಗತಿಗೆ ಶಿಕ್ಷಕರ ಪಾಲು ಹೆಚ್ಚಿದೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಬಣ್ಣಿಸಿದರು. ನಮ್ಮ ಹಿರಿಯರು ಶಿಕ್ಷಣದ ಮೂಲಕ ನಮಗೆ ಕೊಟ್ಟಿರುವ ಕೊಡುಗೆ ಮಹತ್ವದ್ದಾಗಿದೆ. ಸಿ.ವಿ ರಾಮನ್, ಸರ್ವಪಲ್ಲಿ ರಾಧಾಕೃಷ್ಣನ್ ಅವರಂತಹ ಶ್ರೇಷ್ಠ ವ್ಯಕ್ತಿಗಳು ಕರ್ನಾಟಕದ ನೆಲದಲ್ಲಿ ಬೋಧನೆ ಮಾಡಿದ್ದಾರೆ. ಕರ್ನಾಟಕವು ಅತ್ಯಂತ ಹೆಚ್ಚು ಎಂಜಿನಿಯರ್, ವೈದ್ಯರು, ನರ್ಸ್ ಗಳನ್ನು ದೇಶಕ್ಕೆ ಕೊಡುಗೆ ನೀಡುತ್ತಿದೆ. ಜವಾಹರ್ ಲಾಲ್ ನೆಹರೂ ಅವರ ಕಾಲದಲ್ಲೂ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ದೊರೆಯಿತು" ಎಂದರು.
ಮುಂದಿನ ಸಚಿವ ಸಂಪುಟದಲ್ಲಿ ಸಿಎಸ್ ಆರ್ ಅನುದಾನದಿಂದ ಶಾಲೆಗಳ ನಿರ್ಮಾಣದ ಬಗ್ಗೆ ಮಹತ್ವದ ತೀರ್ಮಾನ ಮಾಡಲಾಗುವುದು. ಯಾರು ಶಾಲೆ ನಿರ್ಮಾಣ ಮಾಡುತ್ತಾರೋ ಅವರ ಕಂಪೆನಿಯ ಹೆಸರನ್ನೇ ಇಟ್ಟುಕೊಳ್ಳಬಹುದು ಎಂದು ಹೇಳಿದ್ದೇವೆ. ಆದರೆ ಅತ್ಯುತ್ತಮ ಕಟ್ಟಡ ನಿರ್ಮಾಣ ಮಾಡಬೇಕು ಹಾಗೂ ನಗರ ಮಾದರಿಯಲ್ಲಿ ಸಿಬಿಎಸ್ ಇ ಶಿಕ್ಷಣ ದೊರೆಯಬೇಕು ಎಂಬುದು ನಮ್ಮ ಆಶಯ. ಈಗಾಗಲೇ ಒಂದಷ್ಟು ಶಾಲೆಗಳು ಪ್ರಾರಂಭವಾಗಿವೆ. ಸುಮಾರು 2 ಸಾವಿರ ಶಾಲೆ ನಿರ್ಮಾಣ ನಮ್ಮ ಗುರಿ ಎಂದರು.
ಇತ್ತೀಚೆಗೆ ಪತ್ರಿಕೆಯಲ್ಲಿ ಒಂದು ವರದಿ ಓದಿದೆ. ಸರ್ಕಾರಿ ಶಾಲೆಗಳನ್ನು ತೊರೆದು ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಸೇರಿಸುತ್ತಿದ್ದಾರೆ ಎಂದು. ಅದಕ್ಕೆ ನಾವು ಸಿಎಸ್ ಆರ್ ಹಣದ ತೊಡಗಿಸುವಿಕೆಗೆ ಪ್ರೋತ್ಸಾಹ ನೀಡುತ್ತಿದ್ದೇವೆ. ನಮ್ಮ ರಾಜ್ಯದಲ್ಲಿ 7,800 ಕೋಟಿಯಷ್ಟು ಹಣವನ್ನು ಸಿಎಸ್ ಆರ್ ಹಣ ಲಭ್ಯವಿದೆ ಎಂದು ವರದಿಗಳು ಹೇಳುತ್ತವೆ. ಒಂದಷ್ಟು ಜನ ಉದ್ಯಮಿಗಳು ಇನ್ನೂ ಮನಸು ಮಾಡಿಲ್ಲ. ನನ್ನ ಕ್ಷೇತ್ರದಲ್ಲಿ ಕೆಪಿಎಸ್ ಶಾಲೆಗಳ ವಿಚಾರದಲ್ಲಿ ಅತ್ಯುತ್ತಮ ಕೆಲಸವಾಗಿದೆ. ನನ್ನ ಕ್ಷೇತ್ರದಲ್ಲಿ ಟೊಯೋಟಾ ಕಂಪೆನಿಯವರು ತಲಾ 10 ಕೋಟಿ ವೆಚ್ಚದಲ್ಲಿ 7 ಕೆಪಿಎಸ್ ಶಾಲೆ ನಿರ್ಮಾಣ ಮಾಡುತ್ತಿದ್ದಾರೆ ಎಂದರು.
ಉತ್ತಮ ಶಿಕ್ಷಣ ಆಯಾಯ ಊರಿನಲ್ಲಿಯೇ ದೊರೆಯಬೇಕು. ಇಲ್ಲದಿದ್ದರೆ ವಲಸೆ ತಡೆಯಲು ಆಗುವುದಿಲ್ಲ. ನನ್ನನ್ನು ಶಿಕ್ಷಣಕ್ಕಾಗಿ ಬೆಂಗಳೂರಿಗೆ ನಮ್ಮ ತಂದೆ ತಾಯಿ ಕಳಿಸಿದರು. ನಾನು ಮರಳಿ ಊರಿಗೆ ಹೋಗಲೇ ಇಲ್ಲ. ಅದಕ್ಕೆ ಗ್ರಾಮೀಣ ಭಾಗದಲ್ಲಿ ಮೂರು ಪಂಚಾಯತಿಗಳು ಸೇರಿದಂತೆ ಒಂದು ಕೆಪಿಎಸ್ ಶಾಲೆ ನಿರ್ಮಾಣ ಮಾಡಲಾಗುತ್ತದೆ. ನಾನು ನಮ್ಮ ಊರಿನಲ್ಲಿ ಮೂರು ಶಾಲೆಗಳನ್ನು ದತ್ತು ತೆಗೆದುಕೋ ಎಂದು ಮಗಳಿಗೆ ಸೂಚನೆ ನೀಡಿದ್ದೇನೆ ಎಂದರು.
-
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
Government Employees: ಸರ್ಕಾರಿ ನೌಕರರ ವರ್ಗಾವಣೆ ಕುರಿತು ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ












Click it and Unblock the Notifications