Jagadish Shettar: ಬಿಜೆಪಿ ಆಪರೇಷನ್ ಕಮಲ; ಕೈ ಶಾಸಕರ ಅಸಮಾಧಾನದಿಂದ ಸರ್ಕಾರಕ್ಕೆ ಎಫೆಕ್ಟ್: ಜಗದೀಶ್ ಶೆಟ್ಟರ್ ಹೇಳಿದ್ದೇನು?
ಹುಬ್ಬಳ್ಳಿ, ಜೂನ್ 29: ಕಾಂಗ್ರೆಸ್‌ನ ಒಳ ಬೇಗುದಿಯಿಂದ, ಶಾಸಕರ ಅಸಮಾಧಾನದಿಂದ ಸರ್ಕಾರಕ್ಕೆ ಎಫೆಕ್ಟ್ ಆಗುತ್ತದೆ. ಬಿಜೆಪಿ ಆಪರೇಷನ್ ಕಮಲ ಮಾಡುವುದು ಬೇಕಾಗಿಲ್ಲ. ಸಿದ್ದರಾಮಯ್ಯ ಅವರ ಕೈಕಟ್ಟಿ ಹಾಕುವ ಕೆಲಸ ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದರಾದ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿ, ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಪದವಿ ಕಿತ್ತಾಟ ಹಿನ್ನೆಲೆಈ ವಿಚಾರವಾಗಿ ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟವಾಗಿ ಏನು ಹೇಳುತ್ತಿಲ್ಲಒಂದು ಸ್ಪಷ್ಟವಾದ ಸಿಗ್ನಲ್ಲನ್ನ ಕಾಂಗ್ರೆಸ್ ಹೈಕಮಾಂಡ್ ಕೊಡಬೇಕಿತ್ತು ಎಂದು ಬೆಳಗಾವಿ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಐದು ವರ್ಷ ಇರಬೇಕು ಎನ್ನುವ ಕ್ಲಿಯರ್ ಸಿಗ್ನಲ್ ಕೊಡಬೇಕಿತ್ತು. ಸಿದ್ದರಾಮಯ್ಯ ಅವರ ಕೈಕಟ್ಟಿ ಹಾಕುವ ಕೆಲಸ ನಡೆಯುತ್ತಿದೆ, ಇದರಿಂದ ರಾಜ್ಯದಲ್ಲಿ ಸರ್ಕಾರ ಅತಂತ್ರ ಆಗುತ್ತೆ ಇಂತಹ ಪರಿಸ್ಥಿತಿಯಿಂದ ಸರ್ಕಾರಕ್ಕೆ ಡ್ಯಾಮೇಜ್ ಆಗುತ್ತೆ, ಆಡಳಿತ ವ್ಯವಸ್ಥೆ ಹದಗಡುತ್ತದೆ ಎಂದು ಹೇಳಿದರು.
ಆಂತರಿಕ ಕಲಹದಿಂದ ಸರ್ಕಾರಕ್ಕೆ ತೊಂದರೆ ಆಗುತ್ತೆ ಒಂದು ಡಿಸಿಎಂ ಇದ್ದಿದ್ದು ಮೂರು ಡಿಸಿಎಂ ಆಗಲಿ ಮುಖ್ಯಮಂತ್ರಿ ಬದಲಾವಣೆ ಆಗಲಿ ಅನ್ನೋ ಗೊಂದಲ ನಿರ್ಮಾಣ ಮಾಡಿದ್ದಾರೆ ಎಂದ ಅವರು
ಇದರಿಂದಾಗಿ ಆಡಳಿತ ವ್ಯವಸ್ಥೆ ಹದಗೆಟ್ಟಿದೆ ಎಂದರು. ಒಕ್ಕಲಿಗ ಸ್ವಾಮೀಜಿ ಹೇಳಿಕೆ ವಿಚಾರವಾಗಿ ಮಾತನಾಡಿ, ಯಾರ ಮನಸಲ್ಲಿಏನಿದೆ ನ್ನೋದನ್ನ ಬೇರೆಯವರಿಂದ ಹೇಳಿಸುವ ಪ್ರಯತ್ನ ಆಗುತ್ತಿದೆ ಎಂದ ಅವರು, ಏನು ಹೇಳಬೇಕು ಅನ್ನೋದನ್ನ ಹೈಕಮಾಂಡ್ ಮುಂದೆ ಹೇಳಬೇಕು. ನಾನು ಕಾಂಗ್ರೆಸ್ ನಲ್ಲಿ ಇದ್ದರೂ ಕೂಡ ಈ ಬಗ್ಗೆ ಗೊತ್ತಾಗಿರಲಿಲ್ಲ. ಮುಖ್ಯಮಂತ್ರಿ ಹುದ್ದೆಗಾಗಿ ಮೊದಲಿನಿಂದಲೂ ಗುದ್ದಾಟ ಇದ್ದೇ ಇದೆ, ಈಗಲೂ ಅದು ಮುಂದುವರೆದಿದೆ.
ಗ್ಯಾರಂಟಿ ಯೋಜನೆಗಳಿಂದ ಎಲೆಕ್ಷನ್ ನಲ್ಲಿ ಲಾಭ ಆಗುತ್ತೆ ಅಂತ ತಿಳಿದುಕೊಂಡಿದ್ದರು ಲಾಭ ಆಗಿಲ್ಲ ಹೀಗಾಗಿ, ವಾಪಸ್ ತೆಗೆದುಕೊಳ್ಳುವಂತೆ ಕಾಂಗ್ರೆಸ್ ಶಾಸಕರೇ ಹೇಳುತ್ತಿದ್ದಾರೆ. ಗ್ಯಾರಂಟಿ ಅನುಷ್ಠಾನಕ್ಕಾಗಿ ಸರ್ಕಾರದ ಖಜಾನೆ ಖಾಲಿ ಆಗುತ್ತಿದೆ ಎಂದು ಆರೋಪ ಮಾಡಿದ ಅವರು, ವರಮಾನ ಹೆಚ್ಚಿಗೆ ಮಾಡಿಕೊಳ್ಳಲು ಡೀಸೆಲ್, ಪೆಟ್ರೋಲ್, ಹಾಲು, ಬಸ್ ಪ್ರಯಾಣ ದರ ಹೆಚ್ಚಳ ಮಾಡುತ್ತಿದ್ದಾರೆ. ಜನಸಾಮಾನ್ಯರು, ಬಡವರು ಬಹಳ ಸಂಕಷ್ಟ ಅನುಭವಿಸುತ್ತಿದ್ದಾರೆ. ಗ್ಯಾರಂಟಿ ಯೋಜನೆಯಿಂದ ರಾಜ್ಯದ ಜನತೆಗೆ ತೊಂದರೆಯಾಗುತ್ತಿದೆ. ಖಜಾನೆ ಕಾಲಿಯಾಗುತ್ತಿದೆ ಅಂತ ಕಾಂಗ್ರೆಸ್ ಶಾಸಕರೇ ಹೇಳುತ್ತಿದ್ದಾರೆ, ಇದನ್ನೆಲ್ಲ ವಿಚಾರ ಮಾಡಿ ಸಿದ್ದರಾಮಯ್ಯನವರು ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕು ಎಂದರು












Click it and Unblock the Notifications