ವಿವೇಕ್ ಅಗ್ನಿಹೋತ್ರಿ ನಿರ್ದೇಶನದಲ್ಲಿ ಸಿನಿಮಾ ಆಗುತ್ತಿದೆ ಎಸ್‌.ಎಲ್‌. ಭೈರಪ್ಪರ ಪರ್ವ ಕಾದಂಬರಿ

ಬೆಂಗಳೂರು, ಅಕ್ಟೋಬರ್‌ 21: ದಿ ಕಾಶ್ಮೀರ್‌ ಫೈಲ್ಸ್‌ ಸಿನೆಮಾ ಖ್ಯಾತಿಯ ನಿರ್ದೇಶಕ ವಿವೇಕ್‌ ಅಗ್ನಿಹೋತ್ರಿ ಅವರು ಕನ್ನಡದ ಸಾಹಿತಿ ಎಸ್‌ ಎಲ್‌ ಭೈರಪ್ಪ ಅವರ ಪರ್ವ ಕಾದಂಬರಿಯನ್ನು ಸಿನೆಮಾ ಮಾಡಲು ಹೊರಟಿದ್ದಾರೆ.

ಕನ್ನಡದ ಖ್ಯಾತ ಲೇಖಕ ಎಸ್.ಎಲ್. ಭೈರಪ್ಪ ಅವರ ಪರ್ವ ಕಾದಂಬರಿಯನ್ನು ಆಧರಿಸಿ ಸಿನಿಮಾ ಮಾಡಲಾಗುತ್ತಿದೆ. ಶನಿವಾರ ಬೆಂಗಳೂರಿನ ಚೌಡಯ್ಯ ಮೆಮೋರಿಯಲ್ ಹಾಲ್‌ನಲ್ಲಿ ಈ ಸಿನಿಮಾದ ಟೈಟಲ್ ಲಾಂಚ್ ಮಾಡಲಾಗಿದೆ.

sl-bhyrappas-parva-novel

ದಿ ಕಾಶ್ಮೀರ್ ಫೈಲ್ಸ್, ದಿ ವ್ಯಾಕ್ಸಿನ್ ವಾರ್ ಸಿನಿಮಾಗಳ ಖ್ಯಾತಿಯ ವಿವೇಕ್ ಅಗ್ನಿಹೋತ್ರಿ ಪರ್ವ ಕೃತಿಯನ್ನು ಸಿನಿಮಾ ಮಾಡಲು ಮುಂದಾಗಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡ ವಿವೇಕ್ ಅಗ್ನಿಹೋತ್ರಿ, ಒಂದು ವರ್ಷದ ಹಿಂದೆ ಪ್ರಕಾಶ್ ಬೆಳವಾಡಿ ನನಗೆ ಕರೆ ಮಾಡಿದ್ದರು.

ಭೈರಪ್ಪನವರ ಜೊತೆ ಮಾತನಾಡುವಂತೆ ಹೇಳಿದ್ದರು. ದಿ ಕಾಶ್ಮೀರ್ ಫೈಲ್ಸ್ ಸಿನಿಮಾವನ್ನು ನೋಡಿ ಅವರು ಪರ್ವ ಸಿನಿಮಾ ಮಾಡುವಂತೆ ಹೇಳಿದರು. ಮಹಾಭಾರತದಲ್ಲಿ ನಾವು ಕೇಳದೆ ಇರುವಂತಹ ವಿಷಯಗಳನ್ನ ಬರೆದಿದ್ದಾರೆ. ಇದಕ್ಕಾಗಿ ಸಾಕಷ್ಟು ವರ್ಷಗಳ ಕಾಲ ಶ್ರಮಿಸಿದ್ದಾರೆ. ಈ ಸಿನಿಮಾ ಮೂರು ಪಾರ್ಟ್ಗಳಲ್ಲಿ ಬರುತ್ತದೆ ಎಂದು ಹೇಳಿದರು.

sl-bhyrappas-parva-novel

ನಟಿ ಪಲ್ಲವಿ ಜೋಷಿ ಮಾತನಾಡಿ, ಪರ್ವ ಕಾದಂಬರಿಯನ್ನು ಸಿನಿಮಾ ಮಾಡುತ್ತಿರುವುದು ಜವಾಬ್ದಾರಿ ಹೆಚ್ಚಿಸಿದೆ. ಈ ವಿಷಯವನ್ನು ನಿರ್ವಹಿಸುವುದು ಅಷ್ಟು ಸುಲಭವಲ್ಲ. ಭೈರಪ್ಪ ಸರ್ ಗುರಿಯನ್ನು ಸಿನಿಮಾ ರೂಪಕ್ಕಿಳಿಸುತ್ತಿರುವುದು ಖುಷಿ ಕೊಟ್ಟಿದೆ. ಪರ್ವ ಸಿನಿಮಾವನ್ನು 3 ಭಾಗದಲ್ಲಿ ಕನ್ನಡ ಹಾಗೂ ಹಿಂದಿ ಎರಡು ಭಾಷೆಯಲ್ಲಿ ನಿರ್ಮಾಣ ಮಾಡಲಾಗುತ್ತಿದ್ದು, ಪ್ರಕಾಶ್ ಇಲ್ಲದೇ ಇದು ಆಗುತ್ತಿರಲಿಲ್ಲ ಎಂದರು.

ಸಾಹಿತಿ ಎಸ್.ಎಲ್. ಭೈರಪ್ಪ ಮಾತನಾಡಿ, ಪರ್ವ ಕಾದಂಬರಿಯನ್ನು ಸಿನಿಮಾ ಮಾಡಲು ಬಂದಿದ್ದಾರೆ. ವಿವೇಕ್ ಅಗ್ನಿಹೋತ್ರಿ ಅವರಿಗೆ ಸಾಕಷ್ಟು ಅನುಭವವಿದೆ. ಇವರು ಮಾಡಿರುವ ಸಿನಿಮಾಗಳು ಸಕ್ಸಸ್ ಆಗಿವೆ. ಕನ್ನಡ ಹಾಗೂ ಹಿಂದಿ ಭಾಷೆಯಲ್ಲಿ ಸಿನಿಮಾ ಮಾಡುತ್ತಿದ್ದಾರೆ. ಇಂಗ್ಲೀಷ್ ನಲ್ಲಿ ಸಿನಿಮಾ ಮಾಡಬೇಕು. ನಿಜವಾದ ಮಹಾಭಾರತ ಏನೋ ಅನ್ನೋದನ್ನು ತೋರಿಸಬಹುದು. ಸಿನಿಮಾ ಮಾಡಲು ನನ್ನ ಒಪ್ಪಿಗೆ ಇದೆ. ಹಾರೈಕೆ ಇದೆ ಎಂದರು.

ಪರ್ವ ಕಾದಂಬರಿಯ ವಿಷಯ ಏನ್ನು ಅನ್ನುವುದು ಓದಿದವರಿಗೆ ಗೊತ್ತೇ ಇದೆ. ಮಹಾಭಾರತವನ್ನ ಆಯಾ ಪಾತ್ರಗಳ ಮೂಲಕ ಮತ್ತೊಮ್ಮೆ ಹೇಳಿರೋದೇ ಈ ಪರ್ವ ಕಾದಂಬರಿಯ ವಿಶೇಷ. ಅಂತಹ ಈ ಒಂದು ಕಾದಂಬರಿಯನ್ನ ಕ್ಲಾಸಿಕ್ ಕೃತಿ ಅಂತಲೇ ಪರಿಗಣಿಸಲಾಗುತ್ತದೆ. ಇದೀಗ ಈ ಪರ್ವ ಕಾದಂಬರಿಗೆ ವಿವೇಕ್ ಅಗ್ನಿಹೋತ್ರಿ ನಿರ್ದೇಶನ ಮಾಡುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+