ರಾಮನಗರ: ಅಂಗಡಿಯಲ್ಲಿ ಬೆಂಕಿ, ಲಕ್ಷಾಂತರ ಮೌಲ್ಯದ ವಸ್ತಗಳು ಭಸ್ಮ
ರಾಮನಗರ. ಅಕ್ಟೋಬರ್ 14 : ಜಿಲ್ಲೆಯ ಚನ್ನಪಟ್ಟಣದ ಸಾತನೂರು ಸರ್ಕಲ್ ಬಳಿ ಇರುವ ಪೇಯಿಂಟ್ ಅಂಗಡಿವೊಂದರಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿದೆ.
ಚನ್ನಪಟ್ಟಣದ ಸಾತನೂರು ಸರ್ಕಲ್ ಬಳಿಯ ತಾಜ್ ಹೋಟಲ್ ಸಮೀಪದಲ್ಲಿರುವ ರಘು ಎಂಬುವವರಿಗೆ ಸೇರಿದ ಶ್ರೀ ಲಕ್ಷ್ಮಿ ವೆಂಕಟೇಶ್ವರ ಟ್ರೇಡರ್ಸ್ ಬಣ್ಣದ ಅಂಗಡಿಯಲ್ಲಿ ಶುಕ್ರವಾರ ಸಂಜೆ ಬೆಂಕಿ ಹೊತ್ತಿ ಕೊಂಡಿದೆ. ಪರಿಣಾಮ ಅಂಗಡಿಯಲ್ಲಿದ್ದ ಸುಮಾರು 20 ಲಕ್ಷ ರು. ಮೌಲ್ಯದ ಪೇಯಿಂಟ್, ಬ್ರಶ್ ಹಾಗೂ ಇನ್ನಿತರ ಸಾಮಾಗ್ರಿಗಳು ಬೆಂಕಿಗೆ ಆಹುತಿಯಾಗಿವೆ.

ವಿದ್ಯುತ್ ಇಲ್ಲದ ಕಾರಣ ಜನರೇಟರ್ ಆನ್ ಮಾಡಲಾಗಿತ್ತು. ಈ ವೇಳೆ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಕಾಣಿಸಿಕೊಂಡು ಅಂಗಡಿಯನ್ನು ಆವರಿಸಿಕೊಂಡಿದೆ.
ನೋಡು ನೋಡುತ್ತಿದ್ದಂತೆಯೇ ಅಂಗಡಿಯಲ್ಲಿದ್ದ ವಸ್ತುಗಳು ಸುಟ್ಟು ಭಸ್ಮವಾಗಿವೆ. ವಿಷಯ ತಿಳಿದು ಕೂಡಲೇ ಸ್ಥಳಕ್ಕೆ ಆಗಮಿಸಿದ ಚನ್ನಪಟ್ಟಣ ಅಗ್ನಿ ಶಾಮಕ ಠಾಣೆಯ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಲು ಹರಸಾಹಸ ಪಟ್ಟರು. ಚನ್ನಪಟ್ಟಣ ಟೌನ್ ಠಾಣೆಯ ಪೊಲೀರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.












Click it and Unblock the Notifications