3,300 ಬೆಲೆ ನಿಗದಿ; ಕಬ್ಬು ಬೆಳೆಗಾರರ ಹೋರಾಟಕ್ಕೆ ಮಣಿದ ಸರ್ಕಾರ: ಕೇಂದ್ರಕ್ಕೆ ನಿಯೋಗ ಭೇಟಿ ಯಾವಾಗ?
ಬೆಂಗಳೂರು, ನವೆಂಬರ್ 08: ರಾಜ್ಯ ಸರ್ಕಾರವು ಕಬ್ಬು ಬೆಳೆಗಾರರ ಹೋರಾಟಕ್ಕೆ ಕೊನೆಗೂ ಮಣಿದಿದೆ. ಶುಕ್ರವಾರ ರೂ.3,200 ಪ್ರತಿ ಟನ್ ಗೆ ನೀಡುವುದಾಗಿ ತಿಳಿಸಿದ್ದಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ರೂ.3,200 ಹಾಗೂ ಸಕ್ಕರೆ ಕಾರ್ಖಾನೆ ಮಾಲೀಕರಿಂದ ಹೆಚ್ಚುವರಿಯಾಗಿ ರೂ.50 ಮತ್ತು ಸರ್ಕಾರದಿಂದ 50 ರೂ ಸೇರಿದಂತೆ ಪ್ರತಿ ಟನ್ ಕಬ್ಬಿಗೆ ರೂ.3,300 ನೀಡುವುದಾಗಿ ಘೋಷಣೆ ಮಾಡಿದ್ದಾರೆ.
ಬೆಳಗಾವಿಯಲ್ಲಿ ಪ್ರತಿಭಟನಾನಿರತ ಕಬ್ಬು ಬೆಳೆಗಾರರು ಮತ್ತು ರೈತ ಸಂಘಟನೆಗಳ ಪರವಾಗಿ ಸತತ 7 ಗಂಟೆಗಳ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರ ಪರ ಖಚಿತ ನಿಲುವು ತೆಗೆದುಕೊಂಡು, ಟನ್ ಕಬ್ಬಿಗೆ 3300 ರೂ ಕೊಡಲು ನಿರ್ಧರಿಸಿದೆ. ಸತತ ಏಳು ಗಂಟೆಗಳ ನಿರಂತರ ಸಭೆ ಬಳಿಕ ಮುಖ್ಯಮಂತ್ರಿಗಳು ಪತ್ರಿಕಾಗೋಷ್ಠಿ ನಡೆಸಿ ಸರ್ಕಾರದ ನಿರ್ಧಾರ ಪ್ರಕಟಿಸಿದ್ದು, ಸರ್ಕಾರ ಮತ್ತು ಕಾರ್ಖಾನೆ ಮಾಲೀಕರು ತಲಾ 50ರೂ ಸೇರಿಸಿ ರೈತರಿಗೆ ಟನ್ ಗೆ 3300 ಕೊಡಲು ತೀರ್ಮಾನ ಮಾಡಲಾಗಿದೆ ಎಂದರು.

ರಾಜ್ಯದಲ್ಲಿ 81 ಸಕ್ಕರೆ ಕಾರ್ಖಾನೆಗಳಿವೆ. ಇವುಗಳಲ್ಲಿ 11 ಸಹಕಾರಿ ಕಾರ್ಖಾನೆಗಳು ಒಂದು ಕಾರ್ಖಾನೆ ಮಾತ್ರ ಸರ್ಕಾರಿ ಸೌಮ್ಯದ್ದು. ಉಳಿದವೆಲ್ಲಾ ಖಾಸಗಿ ಸಕ್ಕರೆ ಕಾರ್ಖಾನೆಗಳಾಗಿವೆ. ಅಕ್ಟೋಬರ್ 30ರಿಂದ ಬೆಳಗಾವಿ ರೈತರು ಕೇಂದ್ರ ಸರ್ಕಾರದ FRP ದರ ವಿರೋಧಿಸಿ ಇನ್ನೂ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆಗೆ ಇಳಿದಿದ್ದಾರೆ. ಪ್ರತಿಭಟನಾ ನಿರತ ರೈತ ಮುಖಂಡರ ಜೊತೆಗೆ ಬೆಳಗಾವಿ ಜಿಲ್ಲಾಧಿಕಾರಿಗಳು ಮಾತುಕತೆ ನಡೆಸಿದ್ದರು. ಆದರೆ ಮಾತುಕತೆ ವಿಫಲವಾದ ಹಿನ್ನೆಲೆಯಲ್ಲಿ ಸಚಿವರನ್ನು ಮಾತುಕತೆಗೆ ಕಳುಹಿಸಿದ್ದೆ ಎಂದರು.
ಕ್ಯಾಬಿನೆಟ್ ತೀರ್ಮಾನದಂತೆ ಇಂದು ಬೆಳಗ್ಗೆಯಿಂದ ಸತತ 7 ಗಂಟೆ ಕಾಲ ಸಭೆ ನಡೆಸಿದ್ದೇವೆ. ಈ ವೇಳೆ ಕಾರ್ಖಾನೆ ಮಾಲೀಕರು ಮತ್ತು ರೈತರು ತಮ್ಮ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ. ಇಬ್ಬರೂ ಕೇಂದ್ರ ಸರ್ಕಾರದ ನೀತಿಗಳಿಂದ ಆಗಿರುವ ನಷ್ಟ ಮತ್ತು ಸಮಸ್ಯೆಗಳನ್ನೂ ಹೇಳಿಕೊಂಡಿದ್ದಾರೆ. ಕೇಂದ್ರದಿಂದ ಆಗುತ್ತಿರುವ ತೊಂದರೆ ಬಗ್ಗೆ ಚರ್ಚಿಸಲು ಕೇಂದ್ರಕ್ಕೆ ನಿಯೋಗ ಹೋಗಲು ತೀರ್ಮಾನಿಸಿದ್ದೇವೆ. ಇದಕ್ಕೆ ಮಾಲೀಕರುಗಳೂ ಒಪ್ಪಿಕೊಂಡಿದ್ದಾರೆ ಎಂದರು.
10.25 ಇಳುವರಿ ಇರುವ ಕಬ್ಬಿಗೆ 3100 ರೂ, 11.25 ಇಳುವರಿ ಕಬ್ಬಿಗೆ 3200 ರೂ ಕೊಡುವುದಾಗಿ ತಿಳಿಸಿದ್ದಾರೆ. ಇದಕ್ಕೆ ಪ್ರತಿಭಟನಾ ರೈತರು ಒಪ್ಪಿಲ್ಲ. ಕಾನೂನು ಸಚಿವರಾದ ಹೆಚ್.ಕೆ.ಪಾಟೀಲ್ ರಾದ, ಸಕ್ಕರೆ ಸಚಿವರಾದ ಶಿವಾನಂದ ಪಾಟೀಲರು ಮತು ಕತೆ ನಡೆಸಿದರೂ ರೈತರು ಒಪ್ಪಿಲ್ಲ. ಬಳಿಕ ಕ್ಯಾಬಿನೆಟ್ ನಲ್ಲಿ ಚರ್ಚಿಸಿ, ಸಕ್ಕರೆ ಕಾರ್ಖಾನೆ ಮಾಲೀಕರು ಮತ್ತು ರೈತ ಮುಖಂಡರ ಜೊತೆ ಚರ್ಚೆ ನಡೆಸುವ ಜೊತೆಗೆ ಸಮಸ್ಯೆ ಸೃಷ್ಟಿಸಿರುವ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ತೀರ್ಮಾನಿಸಲಾಗಿತ್ತು ಎಂದರು.
ರಾಜ್ಯದಲ್ಲಿ 81 ಸಕ್ಕರೆ ಕಾರ್ಖಾನೆಗಳಿವೆ. ಕೇಂದ್ರ ಸರ್ಕಾರ 10-5-2025ರಂದು ಕಟಾವು ಮತ್ತು ಸಾಗಾಟ ಸೇರಿಸಿ 10.5 ರಿಕವರಿ ಇರುವ ಕಬ್ಬಿಗೆ ಪ್ರತಿ ಮೆಟ್ರಿಕ್ ಟನ್ಗೆ ರೂ.3550 ನಿಗದಿಪಡಿಸಿದೆ. ರಾಜ್ಯದಲ್ಲಿ ಕಳೆದ ವರ್ಷ 5.6 ಕೋಟಿ ಮೆ.ಟನ್ ಸಕ್ಕರೆ ಉತ್ಪಾದಿಸಲಾಗಿದ್ದು, ಈ ವರ್ಷ ಸುಮಾರು 6 ಕೋಟಿಗೂ ಹೆಚ್ಚು ಮೆ.ಟನ್ ಉತ್ಪಾದನೆ ಅಂದಾಜಿದೆ. ಇಂದು ಸಭೆಯಲ್ಲಿ ಸಕ್ಕರೆ ಕಾರ್ಖಾನೆಗಳಿಗೆ ಅನ್ವಯವಾಗುವಂತೆ ಕಟಾವು ಮತ್ತು ಸಾಗಾಟ ವೆಚ್ಚಕ್ಕೆ ಹೊರತುಪಡಿಸಿ, 11.25 ರಿಕವರಿ ಕಬ್ಬಿಗೆ ರೂ.3250 ಸಕ್ಕರೆ ಕಾರ್ಖಾನೆಗಳು ಪಾವತಿಸಬೇಕು. ಇದಕ್ಕೆ ಸರ್ಕಾರ ರೂ.50 ಹೆಚ್ಚುವರಿಯಾಗಿ ಪಾವತಿಸಲು ನಿರ್ಧಾರ ಕೈಗೊಳ್ಳಲಾಗಿದೆ.
ಇದು ಬೆಳಗಾವಿ ಜಿಲ್ಲಾಧಿಕಾರಿ ಅವರು ಅಂತಿಮಗೊಳಿಸಿದ್ದ ದರಕ್ಕಿಂತ ರೂ.100 ಹೆಚ್ಚಾಗಿದೆ. ಇದಕ್ಕೆ ಬಹುತೇಕ ಎಲ್ಲಾ ಸಕ್ಕರೆ ಕಾರ್ಖಾನೆ ಮಾಲಿಕರು ಒಪ್ಪಿಗೆ ಸೂಚಿಸಿದ್ದಾರೆ. ರಿಕವರಿ ದರಕ್ಕೆ ಅನುಗುಣವಾಗಿ ಜಿಲ್ಲೆಯಿಂದ ಜಿಲ್ಲೆಗೆ ಪ್ರತ್ಯೇಕ ದರ ನಿಗದಿಪಡಿಸಲಾಗುವುದು. ಇದಕ್ಕೆ ರೈತರು ಒಪ್ಪಿಗೆ ಸೂಚಿಸುವ ವಿಶ್ವಾಸವಿದೆ.
-
BMTC: ಉಚಿತ ಬಸ್ ಪ್ರಯಾಣದ ಹೊರೆ, ಆರ್ಥಿಕ ಸಂಕಷ್ಟದಲ್ಲಿ ಬಿಎಂಟಿಸಿ; ಸರ್ಕಾರದಿಂದ ₹850 ಕೋಟಿ ಪಾವತಿ ವಿಳಂಬ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ












Click it and Unblock the Notifications