ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದಲ್ಲಿ ಶಾಲೆ ಆರಂಭಿಸುವ ಕುರಿತು ಸರ್ಕಾರದ ಸ್ಪಷ್ಟನೆ!

|
Google Oneindia Kannada News

ಬೆಂಗಳೂರು, ಅ. 09: ಶಾಲೆ ಆರಂಭಿಸುವ ಕುರಿತು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಮತ್ತೊಮ್ಮೆ ಸ್ಪಷ್ಟನೆ ಕೊಟ್ಟಿದ್ದಾರೆ. ಸ್ವತಃ ಅವರು ಕೊರೊನಾ ವೈರಸ್‌ ಸೋಂಕಿಗೆ ತುತ್ತಾಗಿದ್ದು, ಕ್ವಾರಂಟೈನ್‌ಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಾಲೆ ಆರಂಭಿಸುವುದರ ಕುರಿತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರಿಗೆ ಪತ್ರ ಬರೆದು ವಿರೋಧಿಸಿದ್ದಾರೆ.

ಇದೇ ಸಂದರ್ಭದಲ್ಲಿ ಕಲಬುರಗಿ ಜಿಲ್ಲೆ ಸೇರಿದಂತೆ ಹಲವೆಡೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಕೊರೊನಾ ವೈರಸ್ ಸೋಂಕಿಗೆ ತುತ್ತಾಗಿದ್ದಾರೆ. ಇದು ಶಾಲೆ ಆರಂಭಿಸುವ ಕುರಿತು ನಡೆಯುತ್ತಿರುವ ಚರ್ಚೆ ಹಿನ್ನೆಲೆಯಲ್ಲಿ ಮಕ್ಕಳ ಪಾಲಕರಲ್ಲಿ ಆತಂಕ ಹೆಚ್ಚಿಸಿದೆ. ಹೀಗಾಗಿ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಶಾಲೆ ಆರಂಭದ ಕುರಿತು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಇದೇ ವಿಚಾರದ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೂ ಸ್ಪಷ್ಟನೆಯನ್ನು ಕೊಟ್ಟಿದ್ದಾರೆ.

'ಶಿಕ್ಷಕರಿಗೆ' ಸಾವಿನ ಮನೆಯಾದ 'ವಿದ್ಯಾಗಮ' ಯೋಜನೆ!'ಶಿಕ್ಷಕರಿಗೆ' ಸಾವಿನ ಮನೆಯಾದ 'ವಿದ್ಯಾಗಮ' ಯೋಜನೆ!

ಅಭಿಪ್ರಾಯ ಕೇಳಿದ್ದೇನೆ

ಅಭಿಪ್ರಾಯ ಕೇಳಿದ್ದೇನೆ

ಶಾಲೆಗಳನ್ನು ಆರಂಭಿಸುವ ಕುರಿತು ರಾಜ್ಯದ ಎಲ್ಲಾ ಶಾಸಕರುಗಳ ಅಭಿಪ್ರಾಯವನ್ನು ಸುಮಾರು 9 ದಿವಸಗಳ ಹಿಂದೆ ನಾನು ಕೇಳಿದ್ದೆ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ವಿರೋಧ ಪಕ್ಷ ನಾಯಕರ ಸಿದ್ದರಾಮಯ್ಯ ಅವರಿಂದ ಹಿಡಿದು, ಅನೇಕ ಸಚಿವರು, ಶಾಸಕರು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ.

ಅದೇ ರೀತಿ ಆರೋಗ್ಯ ಸಚಿವ ಶ್ರೀರಾಮುಲು ಅವರು ಈ ಕುರಿತು ಚರ್ಚೆ ನಡೆಸಿ ನನಗೆ ತಮ್ಮ ಅಭಿಪ್ರಾಯ ನೀಡುವುದಾಗಿ ತಿಳಿಸಿದ್ದಾರೆ. ಜೊತೆಗೆ ಡಾ. ಸುಧಾಕರ್ ಅವರು ಪತ್ರದ ಮೂಲಕ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ಸುರೇಶ್ ಕುಮಾರ್ ತಿಳಿಸಿದ್ದಾರೆ.‌

ಮಕ್ಕಳ ಹಿದೃಷ್ಟಿಯಿಂದ ತೀರ್ಮಾನ

ಮಕ್ಕಳ ಹಿದೃಷ್ಟಿಯಿಂದ ತೀರ್ಮಾನ

ಶಿಕ್ಷಣ ಇಲಾಖೆಯ ಮುಂದಿನ ತೀರ್ಮಾನವನ್ನು ಮಕ್ಕಳ ಹಿತವನ್ನು ಆದ್ಯತೆಯಲ್ಲಿಟ್ಟುಕೊಂಡು ಎಲ್ಲರೊಡನೆ ಸಮಾಲೋಚನೆಯ ನಂತರ ಕೈಗೊಳ್ಳಲಾಗುತ್ತದೆಯೇ ಹೊರತು ಯಾವುದನ್ನೂ ಧಿಡೀರನೆ ಘೋಷಿಸುವುದಿಲ್ಲ. ಯಾವುದೇ ಪೋಷಕರ ಮನಸ್ಸಿನಲ್ಲಿ ಈ ಕುರಿತು ಕಿಂಚಿತ್ ಸಹ ಗೊಂದಲ ಬೇಡ ಎಂದು ಕಳಕಳಿಯಿಂದ ತಿಳಿಸುತ್ತಿದ್ದೇನೆ ಎಂದು ಪ್ರಕಟಣೆಯಲ್ಲಿ ಸುರೇಶ್ ಕುಮಾರ್ ಅವರು ಮನವಿ ಮಾಡಿದ್ದಾರೆ.

ಮತ್ತೊಮ್ಮೆ ಸ್ಪಷ್ಟ ಪಡಿಸುತ್ತಿದ್ದೇನೆ

ಮತ್ತೊಮ್ಮೆ ಸ್ಪಷ್ಟ ಪಡಿಸುತ್ತಿದ್ದೇನೆ

ಶಾಲೆ ಆರಂಭಿಸುವ ಕುರಿತು ಅಭಿಪ್ರಾಯಗಳನ್ನು ಕೇಳಿದ ಮಾತ್ರಕ್ಕೆ ಸರ್ಕಾರ ಶಾಲೆಗಳನ್ನು ಆರಂಭ ಮಾಡುವ ನಿರ್ಧಾರವನ್ನು ಈಗಾಗಲೇ ಕೈಗೊಂಡೇ ಬಿಟ್ಟಿದೆ ಎಂಬರ್ಥದಲ್ಲಿ ವಿಫುಲವಾಗಿ ಚರ್ಚೆ ನಡೆಯುತ್ತಿದೆ. ಇದು ದುರದೃಷ್ಟಕರ. ಚರ್ಚೆ ಮತ್ತೆ ಮತ್ತೆ ಇದು ಮರುಕಳಿಸುತ್ತಲೇ ಇದೆ. ನಾನು ಬಾರಿ ಬಾರಿ ಸ್ಪಷ್ಟೀಕರಣ ಕೊಡುತ್ತಲೇ ಇದ್ದೇನೆ.

ಈಗಾಗಲೇ ಮುಖ್ಯಮಂತ್ರಿ ಯಡಿಯೂರಪ್ಪ ಅವರೂ ಸಹ ಈ ಕುರಿತು ಸರ್ಕಾರದ ನಿಲುವನ್ನು ಬಹಳ ಸ್ಪಷ್ಟವಾಗಿ ತಿಳಿಸಿದ್ದಾರೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ಶಾಲೆ ತೆರೆಯುವ ಧಾವಂತ ಇಲ್ಲ

ಶಾಲೆ ತೆರೆಯುವ ಧಾವಂತ ಇಲ್ಲ

ನಾನು ಈ ರಾಜ್ಯದ ಶಿಕ್ಷಣ ಸಚಿವ ಮಾತ್ರನಲ್ಲ. ಸುಮಾರು ಒಂದು ಕೋಟಿ ಮಕ್ಕಳ ಪೋಷಕ ಕೂಡ ಹೌದು. ಹೀಗಾಗಿ ಯಾವುದೇ ಕಾರಣಕ್ಕೂ ಶಾಲೆಗಳನ್ನು ತೆರೆಯುವ ಧಾವಂತ ನಮ್ಮ ಸರ್ಕಾರಕ್ಕಾಗಲಿ ಅಥವಾ ಶಿಕ್ಷಣ ಇಲಾಖೆಗಾಗಲಿ ಖಂಡಿತ ಇಲ್ಲ.‌ ನಮಗೆ ನಮ್ಮ‌ ಮಕ್ಕಳ ಆರೋಗ್ಯ, ಸುರಕ್ಷತೆ ಅತ್ಯಂತ ಮುಖ್ಯ.

ಅವುಗಳನ್ನು ಬಲಿಕೊಟ್ಟು ಯಾರೂ ಯಾವ ಕಾರ್ಯವನ್ನೂ ಪ್ರತಿಷ್ಟೆಗಾಗಿ ಮಾಡಬಾರದು, ಮಾಡುವುದಿಲ್ಲ.

ನಾನು ಮತ್ತೊಮ್ಮೆ, ಮಗದೊಮ್ಮೆ ಸ್ಪಷ್ಟಗೊಳಿಸುತ್ತಿದ್ದೇನೆ.‌ ಶಾಲೆ ಪ್ರಾರಂಭ ಮಾಡುವ ಯಾವುದೇ ತರಾತುರಿ ನಮ್ಮ ಮುಂದೆ ಇಲ್ಲ ಎಂದು ಸುರೇಶ್ ಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯಡಿಯೂರಪ್ಪ ಸ್ಪಷ್ಟನೆ

ಯಡಿಯೂರಪ್ಪ ಸ್ಪಷ್ಟನೆ

ಕೊರೊನಾ ಸಂಕಷ್ಟದ ಕಾಲದಲ್ಲಿ ಶಾಲೆಗಳನ್ನು ಆರಂಭಿಸುವ ಯಾವುದೇ ಯೋಚನೆಗಳು ಸರ್ಕಾರಕ್ಕಿಲ್ಲ. ಮಕ್ಕಳ ಆರೋಗ್ಯ ಹಾಗೂ ಭವಿಷ್ಯದ ಹಿತದೃಷ್ಟಿಯಿಂದ ಶಾಲೆಗಳನ್ನು ಆರಂಭಿಸುವ ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು.

ತಜ್ಞರು, ಹಿರಿಯ ಅಧಿಕಾರಿಗಳ ಸಭೆ ಕರೆದು, ಸಾಧಕ-ಬಾಧಕಗಳನ್ನು ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು. ಅಲ್ಲಿಯವರೆಗೆ ಯಾವುದೇ ಉಹಾಪೋಹ ಹಾಗೂ ವದಂತಿಗಳಿಗೆ ಕಿವಿಗೊಡಬಾರದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

English summary
Chief Minister BS Yediyurappa said in the announcement that, the government has no plans to open schools in the time of Corona hardship. The decision will be taken in consultation with all those who start schools for the benefit of children's health and future. A meeting of experts and senior officials will be held and the pros and cons will be decided and discussed. Until then, no rumors or rumors should be heeded.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X