Get Updates
Get notified of breaking news, exclusive insights, and must-see stories!

ರಾಜ್ಯದಲ್ಲಿ ಸರ್ಕಾರ ಶಾಲೆಗಳನ್ನು ಮುಚ್ಚುತ್ತಿದೆ: ಹೆಚ್‌ ಡಿ ಕುಮಾರಸ್ವಾಮಿ

ಬೆಂಗಳೂರು, ನವೆಂಬರ್‌ 21: ರಾಜ್ಯ ಸರ್ಕಾರ ಶಾಲೆಗಳನ್ನು ಮುಚ್ಚುತ್ತಿದೆ. ರಾಜ್ಯ ಮಠಮಾನ್ಯಗಳು ಬಡವರಿಗೆ, ದುರ್ಬಲರಿಗೆ ಶಿಕ್ಷಣ ನೀಡಲು ಸರ್ಕಾರದ ಮಾಡುವ ಕೆಲಸವನ್ನು ಮಾಡುತ್ತಿವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು.

ನಗರದಲ್ಲಿ ಶ್ರೀ ಆದಿಚುನಚಗಿರಿ ಶಿಕ್ಷಣ ಟ್ರಸ್ಟ್ ಹಾಕಿಕೊಂಡಿದ್ದ 17ನೆ ಬಿಜಿಎಸ್ ಸಂಸ್ಥಾಪನಾ ದಿನ ಹಾಗೂ ಬಿಜಿಎಸ್ ಉತ್ಸವದ ಉದ್ಘಾಟನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಹೆಚ್‌ ಡಿ ಕುಮಾರಸ್ವಾಮಿ ಅವರು, ರಾಜ್ಯ ಸರ್ಕಾರವು ನಡೆಸಲಾಗಿದೆ ಶಾಲೆಗಳನ್ನು ಮುಚ್ಚುವ ಕೆಲಸ ಮಾಡುತ್ತಿದೆ. ರೈತರು, ಬಡವರು, ಆರ್ಥಿಕ ದುರ್ಬಲರ ಮಕ್ಕಳು ವ್ಯಾಸಂಗ ಮಾಡುವ ಶಾಲೆಗಳಿಗೆ ಸರ್ಕಾರ ಬೀಗ ಹಾಕುತ್ತಿದೆ. ಇಂತಹ ಸಂದರ್ಭದಲ್ಲಿ ಮಠಗಳು ನಾಡಿನ ಮಕ್ಕಳಿಗೆ ಅನ್ನ, ಅಕ್ಷರ, ಆಶ್ರಯ ನೀಡುವ ಕೆಲಸ ಮಾಡುತ್ತಿವೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು.

The government is closing schools in the state Says HD Kumaraswamy

ಶಿಕ್ಷಣ ಸಂಸ್ಥೆಗಳನ್ನು ಕಟ್ಟುವುದು ಸುಲಭ. ಅವುಗಳ ನಿರ್ವಹಣೆ ಹಾಗೂ ನಡೆಸಿಕೊಂಡು ಹೋಗುವುದು ಸುಲಭವಲ್ಲ. ಆದರೆ, ದಕ್ಷತೆ, ಕ್ಷಮತೆಯಿಂದ ಮಠಗಳು ಸುನಾಯಾಸವಾಗಿ ನಡೆಸಿಕೊಂಡು ಹೋಗುತ್ತಿವೆ. ದೂರದೃಷ್ಟಿ, ಸಮಾಜದ ಕುರಿತಾದ ಕಾಳಜಿಯಿಂದ ಇದೆಲ್ಲವೂ ಸಾಧ್ಯವಾಗಿದೆ ಎಂದು ಕುಮಾರಸ್ವಾಮಿ ಅವರು ಹೇಳಿದರು. ಮಠಗಳು ಕೇವಲ ಶಿಕ್ಷಣ ಸಂಸ್ಥೆಗಳನ್ನು ಅಷ್ಟೇ ನಡೆಸುತ್ತಿಲ್ಲ. ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿವೆ. ಅಲ್ಲದೆ, ಸಮಾಜ ಸೇವೆಯ ನಡುವೆಯೇ ಆಧ್ಯಾತ್ಮ ಕ್ಷೇತ್ರದಲ್ಲಿಯೂ ನಿಸ್ವಾರ್ಥವಾಗಿ ತೊಡಗಿಸಿಕೊಂಡಿವೆ ಎಂದು ಪ್ರತಿಪಾದಿಸಿದರು. ಮುಂದಿನ ತಲೆಮಾರಿಗೆ ಗಟ್ಟಿಯಾದ, ಉತ್ತಮ ಮೌಲ್ಯಗಳನ್ನು ಕಲಿಸುವ ಶಿಕ್ಷಣ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಆದಿಚುಂಚನಗಿರಿ ಮಠವು ಮುಂಚೂಣಿಯಲ್ಲಿ ನಿಂತು ಸಮಾಜದಲ್ಲಿ ಅರಿವು ಮೂಡಿಸುತ್ತಿದೆ ಎಂದು ಕೇಂದ್ರ ಸಚಿವರು ಹೇಳಿದರು.

ಒಡಿಶಾ ಸಿಎಂ ಭೇಟಿಯಾದ ಹೆಚ್.ಡಿ. ಕುಮಾರಸ್ವಾಮಿ

2030ರ ವೇಳೆಗೆ ಭಾರತವು ವಾರ್ಷಿಕ 300 ದಶಲಕ್ಷ ಟನ್ ಉಕ್ಕು ಉತ್ಪಾದನೆ ಸಾಮರ್ಥ್ಯವನ್ನು ತಲುಪುತ್ತದೆ ಎಂದು ಕೇಂದ್ರದ ಬೃಹತ್‌ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಘೋಷಿಸಿದರು.

ಇಲ್ಲಿನ ರೊರ್ಕೆಲಾ ಉಕ್ಕು ಸ್ಥಾವಕ್ಕೆ ಭೇಟಿಯ ನಂತರ ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ ಸಚಿವರು, ಪ್ರಧಾನಿ ನರೇಂದ್ರ ಮೋದಿ ಅವರು ನಿಗದಿಪಡಿಸಿರುವ ಈ ಗುರಿಯನ್ನು ಮುಟ್ಟಲು ರೊರ್ಕೆಲಾ ಉಕ್ಕು ಸ್ಥಾವರದ (ಆರ್‌ಎಸ್‌ಪಿ) ವಿಸ್ತರಣೆ ಮತ್ತು ಉಕ್ಕು ಕ್ಷೇತ್ರದ ವ್ಯಾಪಕ ಅಭಿವೃದ್ಧಿಗೆ ಒಡಿಶಾದ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು ಎಂದು ತಿಳಿಸಿದರು.

ರಾಷ್ಟ್ರದ ಅಭಿವೃದ್ಧಿಯ ಬೆನ್ನೆಲುಬಾಗಿರುವ ಉಕ್ಕು ಕ್ಷೇತ್ರವನ್ನು ಮತ್ತಷ್ಟು ಬಲಪಡಿಸುವ ಮೋದಿ ಅವರ ದೃಷ್ಟಿಕೋನವನ್ನು ಸಾಕಾರಗೊಳಿಸಲು ಉಕ್ಕು ಉತ್ಪಾದನೆಯ ಮುಂಚೂಣಿ ರಾಜ್ಯಗಳಲ್ಲಿ ಒಂದಾದ ಒಡಿಶಾ ಸರ್ಕಾರವೂ ಕೇಂದ್ರಕ್ಕೆ ಎಲ್ಲಾ ಸಹಕಾರವನ್ನು ನೀಡಲಿದೆ. ಈ ಬಗ್ಗೆ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಜತೆ ನಡೆಸಿರುವ ಮಾತುಕತೆ ಫಲಪ್ರಧವಾಗಿದೆ ಎಂದು ಅವರು ಹೇಳಿದರು.

ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಅವರನ್ನು ಭುವನೇಶ್ವರದಲ್ಲಿ ಭೇಟಿ ಭೇಟಿ ಮಾಡಿ, ರಾಜ್ಯದಲ್ಲಿನ ಉಕ್ಕು ಸಂಬಂಧಿತ ಅಭಿವೃದ್ಧಿ, ವಿಶೇಷವಾಗಿ ರೂರ್ಕೆಲಾ ಉಕ್ಕು ಸ್ಥಾವರದ ಕಾರ್ಯಾಚರಣೆಗಳು ಮತ್ತು ವಿಸ್ತರಣೆ ಯೋಜನೆಗಳ ಬಗ್ಗೆ ವಿವರವಾದ ಮಾತುಕತೆ, ಪರಿಶೀಲನೆ ನಡೆಸಿದರು. ಈ ಸಭೆಯಲ್ಲಿ ಒಡಿಶಾ ರಾಜ್ಯದವರೇ ಆದ ಕೇಂದ್ರದ ಬುಡಕಟ್ಟು ವ್ಯವಹಾರಗಳ ಖಾತೆ ಸಚಿವ ಜುಯಲ್ ಓರಾಮ್ ಕೂಡ ಹಾಜರಿದ್ದರು.

ಈ ಮಾತುಕತೆಯನ್ನು "ಅತ್ಯಂತ ಫಲಪ್ರದ" ಎಂದು ಬಣ್ಣಿಸಿದ ಕೇಂದ್ರ ಸಚಿವ ಕುಮಾರಸ್ವಾಮಿ ಅವರು, ಪ್ರಮುಖ ಉಕ್ಕು ಮತ್ತು ಗಣಿಗಾರಿಕೆ ಕೇಂದ್ರವಾಗಿ ಒಡಿಶಾದ ಸ್ಥಾನವನ್ನು ಬಲಪಡಿಸುವ ಬಗ್ಗೆ ಚರ್ಚೆಗಳು ಕೇಂದ್ರೀಕೃತವಾಗಿದ್ದವು. ಉಕ್ಕು ಸಚಿವಾಲಯ ಮತ್ತು ಒಡಿಶಾ ಸರ್ಕಾರದ ಹಿರಿಯ ಅಧಿಕಾರಿಗಳು ಚರ್ಚೆಯಲ್ಲಿ ಭಾಗವಹಿಸಿದ್ದರು ಎಂಬುದಾಗಿ ಮಾಹಿತಿ ನೀಡಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+