ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಬಡ್ತಿ ಮೀಸಲಾತಿ ಜಾರಿಗೆ ಸರ್ಕಾರ ಆದೇಶ

|
Google Oneindia Kannada News

ಬೆಂಗಳೂರು, ಫೆಬ್ರವರಿ 27: ಪರಿಶಿಷ್ಟ ಜಾತಿ, ಪಂಗಡ ಸೇರಿ ಹಿಂದುಳಿದ ಸಮುದಾಯದ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಬಡ್ತಿ ಮೀಸಲಾತಿ ಕಾಯ್ದೆಯನ್ನು ಇಂದಿನಿಂದಲೇ ಜಾರಿಯಾಗುವಂತೆ ಆದೇಶ ಹೊರಡಿಸಿದೆ.

ಎಸ್‌ಸಿ ಎಸ್‌ಟಿ ಬಡ್ತಿ ಮೀಸಲಾತಿಗೆ ಅನುಮೋದನೆ ನೀಡಿದ ಸಚಿವ ಸಂಪುಟ ಎಸ್‌ಸಿ ಎಸ್‌ಟಿ ಬಡ್ತಿ ಮೀಸಲಾತಿಗೆ ಅನುಮೋದನೆ ನೀಡಿದ ಸಚಿವ ಸಂಪುಟ

ಬಡ್ತಿ ಮೀಸಲಾತಿ ಕಾಯ್ದೆಗೆ ರಾಷ್ಟ್ರಪತಿಗಳ ಅಂಕಿತ ಸಿಕ್ಕಿದ್ದರೂ ಸಹ ಬಹು ಕಾಲದಿಂದ ಜಾರಿ ಮಾಡದೆ ಮೀನಾ-ಮೇಷ ಎಣಿಸಲಾಗುತ್ತಿತ್ತು. ಆದರೆ ಕುಮಾರಸ್ವಾಮಿ ಸರ್ಕಾರ ಬಡ್ತಿ ಮೀಸಲಾತಿ ಕಾಯ್ದೆ ಜಾರಿಗೆ ಆದೇಶ ಹೊರಡಿಸಿದೆ.

ರಾಜೀನಾಮೆ ನೀಡಲು ಮುಂದಾಗಿದ್ದ ಸಚಿವ ಪ್ರಿಯಾಂಕ್ ಖರ್ಗೆ? ಕಾರಣ ಏನು? ರಾಜೀನಾಮೆ ನೀಡಲು ಮುಂದಾಗಿದ್ದ ಸಚಿವ ಪ್ರಿಯಾಂಕ್ ಖರ್ಗೆ? ಕಾರಣ ಏನು?

ಬಡ್ತಿ ಮೀಸಲಾತಿಯನ್ನು ಸುಪ್ರಿಂ ಕೋರ್ಟ್‌ 2017 ರಲ್ಲಿ ರದ್ದು ಮಾಡಿತ್ತು. ಆ ನಂತರ ಸಿದ್ದರಾಮಯ್ಯ ಅವಧಿಯಲ್ಲಿ ಬಡ್ತಿ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತಂದು ರಾಷ್ಟ್ರಪತಿಗಳ ಅಂಕಿತ ಪಡೆಯಲಾಗಿತ್ತು. ಆದರೆ ಜಾರಿ ಮಾಡಿರಲಿಲ್ಲ.

The government ordered the implementation reservation in promotion

ಆದರೆ ಈಗ ಕುಮಾರಸ್ವಾಮಿ ಸರ್ಕಾರವು ಸಂಪುಟದಲ್ಲಿ ಕಾಯ್ದೆಗೆ ಒಪ್ಪಿಗೆ ಪಡೆದು ಜಾರಿಗೊಳಿಸಿದೆ. ತ್ವರಿತವಾಗಿ ಜಾರಿ ಆಗುವಂತೆ ಆದೇಶದಲ್ಲಿ ತಿಳಿಸಲಾಗಿದೆ.

ಖಾಸಗಿ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಆದ್ಯತೆ: ನಿಯಮ ತಿದ್ದುಪಡಿಗೆ ಚಿಂತನೆ ಖಾಸಗಿ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಆದ್ಯತೆ: ನಿಯಮ ತಿದ್ದುಪಡಿಗೆ ಚಿಂತನೆ

ಸುಪ್ರಿಂಕೋರ್ಟ್‌ನಲ್ಲಿ ಬಡ್ತಿ ಮೀಸಲಾತಿ ರದ್ದಾದ ಬಳಿಕ ಎಸ್‌ಸಿ, ಎಸ್‌ಟಿ ನೌಕರರಿಗೆ ಹಿಂಬಡ್ತಿ ಆಗಿತ್ತು. ಆದರೆ ಈಗ ಮತ್ತೆ ಅವರಿಗೆ ಬಡ್ತಿ ದೊರೆಯಲಿದೆ. ಅದೂ ಸಹ ತ್ವರಿತವಾಗಿ ದೊರೆಯಲಿದೆ.

English summary
State government ordered to implementation reservation in promotion. In 2017 supreme court canceled reservation in promotion, then state government proposed act and took approve.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X