ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು; ಗ್ಯಾರಂಟಿ ಯೋಜನೆಗೆ ಬೀಳುತ್ತಾ ಬ್ರೇಕ್? ಈಶ್ವರ ಖಂಡ್ರೆ ಏನಂದ್ರು?
ಬೆಂಗಳೂರು, ಜೂನ್ 10: ಲೋಕಸಭಾ ಚುನಾವಣೆಯಲ್ಲಿ ನಿರೀಕ್ಷೆ ತಕ್ಕಂತೆ ಕಾಂಗ್ರೆಸ್ ಗೆಲುವು ಸಾಧಿಸದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸರ್ಕಾರ ಕೊಟ್ಟ ಪಂಚ ಗ್ಯಾರಂಟಿಗಳನ್ನ ರದ್ದು ಮಾಡಬೇಕು ಎಂಬ ಚರ್ಚೆ ಕಾಂಗ್ರೆಸ್ ಪಾಳಯದಲ್ಲಿ ಕೇಳಿ ಬರುತ್ತಿದೆ. ಈ ಬಗ್ಗೆ ಈಶ್ವರ ಖಂಡ್ರೆ ಅವರ ಪ್ರತಿಕ್ರಿಯಿಸಿದ್ದು, ಗ್ಯಾರಂಟಿ ಮುಂದುವರಿಯಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ಕಲ್ಯಾಣ ಕರ್ನಾಟಕದಲ್ಲಿ ಗ್ಯಾರಂಟಿ ಫಲ ನೀಡಿದೆ ಎಂದು ಹೇಳಿದ್ದಾರೆ.
ವಿಕಾಸ ಸೌಧದ ಸಚಿವರ ಕಾರ್ಯಾಲಯದಲ್ಲಿ ನಡೆದ ಮೃಗಾಲಯ ಪ್ರಾಧಿಕಾರದ 156ನೇ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಹಾಲಿ ಇರುವ ಸಿಂಹ, ಹುಲಿ ಸಫಾರಿಯ ಜೊತೆಗೆ ಜೂನ್ ಮಾಸಾಂತ್ಯದೊಳಗೆ ಚಿರತೆ ಸಫಾರಿ ಆರಂಭಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.

ರಾಜ್ಯದಲ್ಲಿರುವ ವಿವಿಧ ಮೃಗಾಲಯಗಳಿಗೆ ಪ್ರವಾಸಿಗರನ್ನು ಹೆಚ್ಚು ಸೆಳೆಯಲು ಮತ್ತು ಆದಾಯ ಹೆಚ್ಚಿಸಲು ಕೈಗೊಳ್ಳ ಬೇಕಾದ ಕ್ರಮಗಳ ಬಗ್ಗೆ ಪರಾಮರ್ಶಿಸಿದರು. ಮೈಸೂರು ಚಾಮರಾಜೇಂದ್ರ ಮಾಲಯ ಹಾಗೂ ಕಾರಂಜಿ ಕೆರೆ ಮಧ್ಯ ಭಾಗದಲ್ಲಿ ಸಾರ್ವಜನಿಕ, ಖಾಸಗಿ ಪಾಲುದಾರಿಕೆ (ಪಿಪಿಪಿ) ಮಾದರಿಯಲ್ಲಿ ಅಕ್ವೇರಿಯಂ (ಮತ್ಸ್ಯಾಗಾರ) ನಿರ್ಮಿಸಲು, ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲು ಸಮಾಲೋಚನಾ ಸಂಸ್ಥೆ ಆಯ್ಕೆ ಮಾಡಲು 15 ದಿನಗಳ ಒಳಗಾಗಿ ಪ್ರಸ್ತಾವನೆ ಮಂಡಿಸಲು ಸೂಚಿಸಲಾಯಿತು.
ಮೈಸೂರು ಮೃಗಾಲಯ ಮತ್ತು ಕಾರಂಜಿ ಕೆರೆ ಪ್ರಕೃತಿ ಉದ್ಯಾನದಲ್ಲಿ ಕ್ಯಾಮೆರಾ ಕಾಂಬೋ ಟಿಕೆಟ್ ಪರಿಚಯಿಸಿ, ಸ್ಥಿರ ಕ್ಯಾಮರಾಗೆ 150 ರೂ. ಮತ್ತು ವಿಡಿಯೋ ಕ್ಯಾಮರಾಗೆ 300 ರೂ. ದರ ವಿಧಿಸಲು ಅನುಮತಿಸಲಾಯಿತು.
ಅದೇ ರೀತಿ ಬನ್ನೇರುಘಟ್ಟ ರಾಷ್ಟ್ರೀಯ ಜೈವಿಕ ಉದ್ಯಾನವನದಲ್ಲಿ ಪಿಪಿಪಿ ಮಾದರಿಯಲ್ಲಿ ಸಿಹಿ ನೀರು ಮತ್ತು ಉಪ್ಪು ನೀರಿನ ಮತ್ಸ್ಯಾಗಾರಗಳನ್ನು ನಿರ್ಮಿಸಲು ಈಗಾಗಲೇ ನಡೆದಿರುವ ಪರಿಕಲ್ಪನೆ ಅಧ್ಯಯನ ವರದಿ ಮತ್ತು ಕಾರ್ಯಸಾಧ್ಯತೆ ವರದಿ ಪರಿಶೀಲಿಸಿ ಜಾಗತಿಕ ಮಾನದಂಡಗಳ ರೀತ್ಯ ಮತ್ಸ್ಯಾಗಾರ ನಿರ್ಮಾಣಕ್ಕೆ ಅನುಮೋದನೆ ನೀಡಲಾಯಿತು.
ಮೃಗಾಲಯಗಳಲ್ಲಿ ವನ್ಯಜೀವಿ ಪಶುವೈದ್ಯರ ಕೊರತೆ ಆಗದಂತೆ ಮತ್ತು ಮೃಗಾಲಯದಲ್ಲಿರುವ ವನ್ಯಜೀವಿಗಳು ಸೋಂಕು ಇತ್ಯಾದಿಯಿಂದ ಸಾವಿಗೀಡಾಗದಂತೆ ಕ್ರಮ ವಹಿಸಲು ಪಶುವೈದ್ಯರ ನೇಮಕಾತಿಯ ಬಗ್ಗೆ ಚರ್ಚಿಸಿ, ವೈದ್ಯರ ನೇಮಕಾತಿಗೆ ಅನುಮೋದನೆ ನೀಡಲಾಯಿತು. ಚಿತ್ರದುರ್ಗದ ಆಡು ಮಲ್ಲೇಶ್ವರ ಕಿರು ಮೃಗಾಲಯಕ್ಕೆ ಸ್ಥಳೀಯ ಪಶುವೈದ್ಯಾಧಿಕಾರಿಗಳ ಸೇವೆ ಪಡೆಯಲು ಘಟನೋತ್ತರ ಅನುಮೋದನೆ ನೀಡಲಾಯಿತು.
ಇತರ ನಿರ್ಣಯಗಳು ಇಲ್ಲಿವೆ.
• ಬನ್ನೇರುಘಟ್ಟ ಜೈವಿಕ ಉದ್ಯಾನದ ಪ್ರಾಣಿ, ಪಕ್ಷಿಗಳಿಗೆ ಮತ್ತು ಪ್ರವಾಸಿಗರಿಗೆ ಅನುಕೂಲವಾಗುವಂತೆ ಬೆಂಗಳೂರು ಜಲಮಂಡಳಿಯಿಂದ ಕಾವೇರಿ ನೀರು ಒದಗಿಸಲು ಈಗಾಗಲೇ ಸರ್ಕಾರ ಅನುಮತಿ ನೀಡಿದ್ದು,, ಕೊಳವೆ ಮಾರ್ಗ ಅಳವಡಿಕೆ ಕಾಮಗಾರಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ನೀರು ಹರಿಸು ಕ್ರಮ ಕೈಗೊಳ್ಳಲು ಸಮ್ಮತಿ.
• ಬನ್ನೇರುಘಟ್ಟ ಉದ್ಯಾನದಲ್ಲಿ ನೇರಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮತ್ತು 21 ಸಾವಿರ ಮಾಸಿಕ ವೇತನ ಮೀರಿದ 153 ಸಿಬ್ಬಂದಿಗೆ ಸಿ.ಜಿ.ಎಚ್.ಎಸ್. ದರದಂತೆ ವೈದ್ಯಕೀಯ ವೆಚ್ಚ ಭರಿಸಲು ಅನುಮೋದನೆ.
• ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯಲ್ಲಿ ನಿರ್ಮಾಣ ಮಾಡಲಾಗಿರುವ ರಣಹದ್ದು ಸಂರಕ್ಷಣಾ ಸಂತಾನೋತ್ಪತ್ತಿ ಕೇಂದ್ರವನ್ನು ಬನ್ನೇರುಘಟ್ಟ ಜೈವಿಕ ಉದ್ಯಾನವನದ ಸ್ಯಾಟಲೈಟ್ ಕೇಂದ್ರವಾಗಿ ಕಾರ್ಯನಿರ್ವಹಣೆಗೆ ಅನುಮೋದನೆ.
• ಗದಗ ಮೃಗಾಲಯದ ವಿಸ್ತರಣೆ ಮತ್ತು ಅಭಿವೃದ್ಧಿಗೆ 13.20 ಎಕೆ ಜಮೀನು ಭೂಸ್ವಾಧೀನ ಮತ್ತು ಮೃಗಾಲಯದ ಸಿಬ್ಬಂದಿಗೆ ರಿಯಾಯಿತಿ ದರದಲ್ಲಿ ಮಧ್ಯಾಹ್ನದ ಊಟ ಪೂರೈಕೆಗೆ ಸಮ್ಮತಿ.
-
By Election: ಒಬ್ಬರಿಂದ ಪಕ್ಷ ಗೆಲ್ಲಲ್ಲ, ಇದು ಕಾಂಗ್ರೆಸ್ ಸಿದ್ಧಾಂತಕ್ಕೆ ಸಿಗುವ ಜಯ: ಸಲೀಂ ಅಹ್ಮದ್ ಟಾಂಗ್ ಕೊಟ್ಟಿದ್ಯಾರಿಗೆ? -
GST: ಕಾಂಗ್ರೆಸ್ ಜನರ ಪರವೋ ಅಥವಾ ಹೆಚ್ಚಿನ ತೆರಿಗೆ ದರದ ಪರವೋ? ಮಾಜಿ ಸಿಎಂ ನೇರ ಪ್ರಶ್ನೆ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ












Click it and Unblock the Notifications