ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹುಬ್ಬಳ್ಳಿಯಲ್ಲಿ ಹೂಡಿಕೆ ಮಾಡುತ್ತಾ ಹಿಂದೂಜಾ ಗ್ರೂಪ್?

|
Google Oneindia Kannada News

ಬೆಂಗಳೂರು, ಫೆ. 12: ಅಂತಾರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕ ಎಂದರೆ ಬೆಂಗಳೂರು ಮಾತ್ರ ಎನ್ನುವಂತಹ ಸ್ಥಿತಿಯಿದೆ. ಅದನ್ನು ಹೋಗಲಾಡಿಸುವ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ 'ಇನ್ವೆಸ್ಟ್ ಕರ್ನಾಟಕ ಹುಬ್ಬಳ್ಳಿ' ಸಮಾವೇಶವನ್ನು ಇದೇ ಫೆಬ್ರವರಿ 14ರಂದು ಆಯೋಜಿಸಲಾಗಿದೆ. ಬೆಂಗಳೂರು ಹೊರತು ಪಡಿಸಿ ಉತ್ತರ ಕರ್ನಾಟಕ ಭಾಗದಲ್ಲಿ ಬಂಡವಾಳ ಹೂಡಿಕೆ ಆಕರ್ಷಿಸುವ ನಿಟ್ಟಿನಲ್ಲಿ ಸಮಾವೇಶ ನಡೆಯಲಿದ್ದು ಈಗಾಗಲೇ ಎಲ್ಲ ಸಿದ್ಧತೆಗಳು ನಡೆದಿವೆ.

ಬೆಂಗಳೂರಿನಲ್ಲಿ ಇದೇ ನವೆಂಬರ್ 3 ರಿಂದ 5ರ ವರೆಗೆ ನಡೆಯುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೂ ಮೊದಲೇ ಹುಬ್ಬಳ್ಳಿಯಲ್ಲಿ ಇನ್ವೆಸ್ಟ್ ಕರ್ನಾಟಕ ಎಂದು ಹೂಡಿಕೆದಾರರನ್ನು ಆಕರ್ಷಿಸಲು ರಾಜ್ಯ ಸರ್ಕಾರ ಪ್ರಯತ್ನ ನಡೆಸಿದೆ.

'ಇನ್ವೆಸ್ಟ್ ಕರ್ನಾಟಕ'ಕ್ಕೆ ದಾವೊಸ್‌ನಲ್ಲಿ ಚಾಲನೆ ನೀಡಿದ ಯಡಿಯೂರಪ್ಪ'ಇನ್ವೆಸ್ಟ್ ಕರ್ನಾಟಕ'ಕ್ಕೆ ದಾವೊಸ್‌ನಲ್ಲಿ ಚಾಲನೆ ನೀಡಿದ ಯಡಿಯೂರಪ್ಪ

ಇನ್‌ವೆಸ್ಟ್‌ ಕರ್ನಾಟಕ - ಹುಬ್ಬಳ್ಳಿ ಸಮಾವೇಶದ ಪೂರ್ವಭಾವಿ ಸಿದ್ದತೆಗಳ ಕುರಿತು ಹುಬ್ಬಳ್ಳಿಯಲ್ಲಿ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಮಾಹಿತಿ ಕೊಟ್ಟಿದ್ದಾರೆ. ಡೆನಿಸ್ಸನ್ ಹೊಟೆಲ್‌ನಲ್ಲಿ ಸಮಾವೇಶ ನಡೆಯಲಿದ್ದು, ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರು ಚಾಲನೆ ನೀಡಲಿದ್ದಾರೆ. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ, ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ. ಸದಾನಂದಗೌಡ ಹಾಗೂ ರೈಲ್ವೇ ರಾಜ್ಯ ಸಚಿವ ಸುರೇಶ್‌ ಅಂಗಡಿ ಅವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಕರ್ನಾಟಕ ಎಂದರೆ ಬೆಂಗಳೂರು ಮಾತ್ರವಲ್ಲ!

ಕರ್ನಾಟಕ ಎಂದರೆ ಬೆಂಗಳೂರು ಮಾತ್ರವಲ್ಲ!

ಬಹುತೇಕರಿಗೆ ಕರ್ನಾಟಕವೆಂದರೆ ಬೆಂಗಳೂರು ಮಾತ್ರ ಎಂಬ ಕಲ್ಪನೆ ಇದೆ. ಕೈಗಾರಿಕಾ ಬೆಳವಣಿಗೆ ಕೇವಲ ಬೆಂಗಳೂರು ಹಾಗೂ ಸುತ್ತಮುತ್ತಲಿನಲ್ಲಿ ಆಗುತ್ತಿದ್ದು, 2 ಟಯರ್ ಮತ್ತು 3 ಟಯರ್ ನಗರಗಳಲ್ಲಿಯೂ ಕೈಗಾರಿಕೋದ್ಯಮದ ಬೆಳವಣಿಗೆ ಆಗಬೇಕೆಂಬ ಉದ್ದೇಶದಿಂದ ಇನ್ವೆಸ್ಟ್‌ ಕರ್ನಾಟಕ ಸಮಾವೇಶ ಆಯೋಜಿಸಲಾಗಿದೆ. ಸಮಾವೇಶದಿಂದ ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಹಾವೇರಿ, ವಿಜಯಪುರ, ಕಲುಬುರಗಿ, ಯಾದಗಿರಿ ಸೇರಿದಂತೆ ಉತ್ತರ ಕರ್ನಾಟಕ ಭಾಗದಲ್ಲಿ ಹೂಡಿಕೆ ಮಾಡುವಂತೆ ಉದ್ಯಮಿಗಳಿಗೆ ಮಾಹಿತಿ ಕೊಡುವುದು ಸಮಾವೇಶದ ಉದ್ದೇಶವಾಗಿದೆ.

1000ಕ್ಕೂ ಹೆಚ್ಚು ಉದ್ಯಮಿಗಳು ಭಾಗವಹಿಸುವ ನಿರೀಕ್ಷೆ

1000ಕ್ಕೂ ಹೆಚ್ಚು ಉದ್ಯಮಿಗಳು ಭಾಗವಹಿಸುವ ನಿರೀಕ್ಷೆ

ಈ ಸಮಾವೇಶಕ್ಕೆ 1000 ಕ್ಕೂ ಹೆಚ್ಚು ಉದ್ಯಮಿಗಳು ಆಗಮಿಸುವ ನಿರೀಕ್ಷೆ ಇದೆ. ಹೈದರಾಬಾದ್, ಮುಂಬೈ ರೋಡ್‌ ಶೋ ನಡೆಸಿದ ಸಂದರ್ಭದಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ‌ ಹೂಡಿಕೆಗೆ ಇರುವ ಹೆಚ್ಚಿನ ಅವಕಾಶಗಳ ಬಗ್ಗೆ ಉದ್ಯಮಿಗಳಿಗೆ ಮಾಹಿತಿ ಕೊಡಲಾಗಿದೆ. ಹಿಂದೂಜಾ ಹಾಗೂ ಟಾಟಾ ಗ್ರೂಪ್‌ನ ಮುಖ್ಯಸ್ಥರು ಹುಬ್ಬಳ್ಳಿ ಸಮಾವೇಶಕ್ಕೆ ತಮ್ಮ ತಂಡ ಕಳುಹಿಸಿಕೊಡುವುದಾಗಿ ಭರವಸೆ ನೀಡಿದ್ದಾರೆ. ಅವರು ಯಾವ ವಲಯದಲ್ಲಿ ಹೂಡಿಕೆ ಮಾಡಬಹುದು ಎಂಬುದರ ಬಗ್ಗೆ ಅಧ್ಯಯನ ನಡೆಸಲಿದ್ದಾರೆ.

ಜೊತೆಗೆ, ಚೀನಾ ಮೂಲದ ಕಂಪನಿ ಪ್ರತಿನಿಧಿಗಳು ಸಮಾವೇಶಕ್ಕೆ ಆಗಮಿಸಿ, ವಿದ್ಯುತ್ಚಾಲಿತ ವಾಹನ ನಿರ್ಮಾಣ ತಯಾರಿಕಾ ಘಟಕ ನಿರ್ಮಾಣದ ಬಗ್ಗೆಯೂ ಚರ್ಚೆ ನಡೆಸಲಿದ್ದಾರೆ. ಜ್ಯೋತಿ ಲ್ಯಾಬ್ಸ್, ಗೋದ್ರೇಜ್ ಮತ್ತು ಕ್ರಿಯೇಟಿವ್ ಪಾಲಿಪ್ಯಾಕ್ ಕರ್ನಾಟಕದಲ್ಲಿ ಹೂಡಿಕೆ ಮಾಡಲು ಆಸಕ್ತ ತಳೆದಿದ್ದಾರೆ.

ಯಾದಗಿರಿಯ ಕಡೆಚೂರು ಕೈಗಾರಿಕಾ ಪ್ರದೇಶದಲ್ಲಿ ಭೂ ಬ್ಯಾಂಕ್

ಯಾದಗಿರಿಯ ಕಡೆಚೂರು ಕೈಗಾರಿಕಾ ಪ್ರದೇಶದಲ್ಲಿ ಭೂ ಬ್ಯಾಂಕ್

ಯಾದಗಿರಿ ಜಿಲ್ಲೆಯ ಕಡೆಚೂರು ಕೈಗಾರಿಕಾ ಪ್ರದೇಶದಲ್ಲಿ 2500 ಎಕರೆ ಭೂ ಬ್ಯಾಂಕ್ ಲಭ್ಯತೆ ಇದೆ. ಅಲ್ಲಿ ಕೈಗಾರಿಕೆ ತೆರೆಯುವ ಆಸಕ್ತಿಯೂ ಕೆಲ ಕಂಪನಿಗಳಿಂದ ವ್ಯಕ್ತವಾಗಿವೆ. ಕೆಐಎಡಿಬಿಯು ಭೂ ಲಭ್ಯತೆ ಹೊಂದಿದ್ದು, ಕೆಲವೆಡೆ ಭೂ ಸ್ವಾದೀನ ಮುಂದುವರೆದಿದೆ. ಆಸಕ್ತಿ ಹೊಂದಿರುವ ಹೂಡಿಕೆದಾರರನ್ನು ಸ್ಥಳ ಪರಿಶೀಲನೆಗೂ ಕರೆದೊಯ್ಯಲಾಗುತ್ತಿದೆ. ಮತ್ತೊಂದೆಡೆ ನೀರು, ರಸ್ತೆ ಅಗಲೀಕರಣದಂತಹ ಮೂಲಸೌಕರ್ಯ ಕೆಲಸಗಳು ಅಲ್ಲಿ ನಡೆಯುತ್ತಿವೆ.

ಉತ್ತರ ಕರ್ನಾಟಕ ಭಾಗದಲ್ಲಿ ಜವಳಿ, ಸೌರಶಕ್ತಿ, ಆಹಾರ ಪಾರ್ಕ್ ಸೇರಿದಂತೆ ಬಹುತೇಕ ವಲಯಗಳಲ್ಲಿ ಹೂಡಿಕೆ ಮಾಡಲು ಉದ್ಯಮಿಗಳು ಚಿಂತನೆ ನಡೆಸಿದ್ದಾರೆ. ಇತ್ತೀಚೆಗೆ ಪತಾಂಜಲಿ ಸಂಸ್ಥಾಪಕ ಬಾಬಾ ರಾಮ್‌ ದೇವ್‌ ಆಹಾರ ಪಾರ್ಕ್‌ ಆರಂಭಿಸಲು ಆಸಕ್ತಿ ತೋರಿಸಿದ್ದಾರೆ. ಬಾಬಾ ರಾಮ್‌ ದೇವ್ ಅವರ ತಂಡ
ಬಂದು ಪರಿಶೀಲನೆ ನಡೆಸಿದೆ ಎಂಬ ಮಾಹಿತಿಯಿದೆ.

3 ದಿನ ನಡೆಯುವ ಇನ್ವೆಸ್ಟ್ ಹುಬ್ಬಳ್ಳಿ ಸಮಾವೇಶ

3 ದಿನ ನಡೆಯುವ ಇನ್ವೆಸ್ಟ್ ಹುಬ್ಬಳ್ಳಿ ಸಮಾವೇಶ

ಫೆಬ್ರವರಿ 14 ರಂದು ಬೆಳಗ್ಗೆ 10 ರಿಂದ 12 ರವರೆಗೆ ಉತ್ತರ ಕರ್ನಾಟಕ ಭಾಗದಲ್ಲಿ ಯಾವ ರೀತಿಯ ಹೂಡಿಕೆಗೆ ಅವಕಾಶಗಳು ಇವೆ ಎಂಬುದರ ಬಗ್ಗೆ ಚರ್ಚೆ ನಡೆಸಲಾಗುತ್ತದೆ. ನಂತರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಮಾವೇಶ ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 3 ರಿಂದ ವಿವಿಧ ಉದ್ಯಮಿಗಳೊಂದಿಗೆ ಒಪ್ಪಂದಕ್ಕೆ ಸಹಿ ಹಾಕುವ ಕಾರ್ಯಕ್ರಮವಿದೆ.

ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಅವರು ಸಹ ಸಮಾವೇಶಕ್ಕೆ ಕೈ ಜೋಡಿಸಿದ್ಸಾರೆ. ಕೇಂದ್ರ ಹಾಗೂ ರಾಜ್ಯ ಸರಕಾರದಿಂದಲೂ ಸಾಕಷ್ಟು ಸಹಕಾರ ವ್ಯಕ್ತವಾಗಿದೆ. ಸಮಾವೇಶ ನೆರವೇರಿಕೆಗೆ ಇಲಾಖೆಯ ಎಲ್ಲಾ ಅಧಿಕಾರಿಗಳು ಸಹ ಒಟ್ಟಿಗೆ ನಿಂತು ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಮಾಹಿತಿ ಕೊಟ್ಟಿದ್ದಾರೆ.

English summary
The Invest Karnataka Conference will be held in Hubli to attract investors. The purpose of the conference is to attract investment in North Karnataka apart from Bangalore.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X