ಜ.22 ರಿಂದ 31ರವರೆಗೆ ವಿಧಾನಮಂಡಲ ಅಧಿವೇಶನ : ರಾಜ್ಯ ಸಂಪುಟ ಸಭೆಯಲ್ಲಿ ನಿರ್ಧಾರ
ಬೆಂಗಳೂರು: ವಿಬಿಜಿ ರಾಮ್ ಜಿ ಕಾಯ್ದೆಯ ಸಾಮಾಜಿಕ ಹಾಗೂ ಆರ್ಥಿಕ ಪರಿಣಾಮಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲು ವಿಶೇಷ ಚರ್ಚೆ ನಡೆಸಲು ಜನವರಿ.22ರಂದು ವಿಶೇಷ ಅಧಿವೇಶನ ಕರೆಯೋದಕ್ಕೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಸಂಪುಟ ಸಭೆಯ ಬಳಿಕ ಸಚಿವ ಹೆಚ್ ಕೆ ಪಾಟೀಲ್ ಹೇಳಿಕೆ ನೀಡಿದರು.
ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಟಿ ನಡೆಸಿದ ಕಾನೂನು ಸಚಿವರಾದ ಹೆಚ್ ಕೆ ಪಾಟೀಲ್ ಅವರು, ನೂತನ ಕಾಯ್ದೆಯು ಸಮಾಜದ ಮೇಲೆ ಬೀರಿರುವ ಸಾಮಾಜಿಕ ಹಾಗೂ ಆರ್ಥಿಕ ಪರಿಣಾಮಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಹಾಗೂ ಜಾಗೃತಿ ಮೂಡಿಸಲು ವಿಧಾನ ಮಂಡಲದ ಜಂಟಿ ಅಧಿವೇಶನದಲ್ಲಿ ವಿಶೇಷ ಚರ್ಚೆ ನಡೆಸಿ ನೂತನ ಕಾಯ್ದೆಯ ಕುರಿತು ನಿರ್ಣಯ ಕೈಗೊಳ್ಳಲು ಸಚಿವ ಸಂಪುಟ ನಿರ್ಣಯಿಸಿದೆ. ಜಂಟಿ ಸದನ 22 ರಂದು ಗುರುವಾರ ಬೆಳಿಗ್ಗೆ 11.00 ಗಂಟೆಗೆ ಕರೆಯಲು ತೀರ್ಮಾನಿಸಿದೆ. 22 ರಿಂದ 31 ರವರಿಗೆ ಜಂಟಿ ಅಧಿವೇಶನ ನಡೆಯಲಿದೆ.

ಸಚಿವ ಸಂಪುಟದಲ್ಲಿ ಮೂರು ಮುಖ್ಯ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ವಿಧಾನ ಸಭೆ ಹಾಗೂ ವಿಧಾನ ಅಧಿವೇಶನವನ್ನು 22-1- 2026 ರಂದು ಕರೆಯಲು ತೀರ್ಮಾನಿಸಲಾಗಿದೆ. 22-1-2026 ವಿಧಾನ ಮಂಡಲದ ಅಧಿವೇಶನದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲರನ್ನು ಆಹ್ವಾನಿಸಲು ಸಚಿವ ಸಂಪುಟ ತೀರ್ಮಾನಿಸಿದೆ. ರಾಜ್ಯಪಾಲರು ಮಾಡಲಿರುವ ಭಾಷಣವನ್ನು ಅನುಮೋದಿಸಲು ಸಚಿವ ಸಂಪುಟವು ಮುಖ್ಯಮಂತ್ರಿಗಳಿಗೆ ಅಧಿಕಾರ ನೀಡಿದೆ.
ಜನಹಿತ, ರಾಜ್ಯದ ಹಿತ ಕಾಪಾಡಲು ಸೂಕ್ತವಾದ ಹೆಜ್ಜೆ
ಜನಹಿತ, ರಾಜ್ಯದ ಹಿತ ಕಾಪಾಡಲು ಸೂಕ್ತವಾದ ಹೆಜ್ಜೆಯನ್ನು ಸರ್ಕಾರ ಇಡಲಿದೆ. ಒಕ್ಕೂಟ ವ್ಯವಸ್ಥೆಯಲ್ಲಿ ನಮ್ಮ ರಾಜ್ಯದ ಜನರ ಹಕ್ಕನ್ನು ಕಿತ್ತುಕೊಳ್ಳಲು ಮುಂದಾದರೆ ಸರ್ಕಾರ ಸುಮ್ಮನೆ ಕುಳಿತಿರಲು ಸಾಧ್ಯವಿಲ್ಲ ಎಂದು ಸಚಿವ ಹೆಚ್ ಕೆ ಪಾಟೀಲ್ ತಿಳಿಸಿದರು. ಸರ್ಕಾರ ಅಧಿವೇಶನ ಕರೆಯದೇ ಬಿಡಲು ಸಾಧ್ಯವಿಲ್ಲ. ಅರಿವು ಹಾಗೂ ಜಾಗೃತಿ ಮೂಡಿಸಲು ಹಾಗೂ ಕೇಂದ್ರ ಸರ್ಕಾರದ ಮೇಲೆ MNREGA ಕಾಯ್ದೆಯ ಮರುಸ್ಥಾಪನೆಗಾಗಿ ಒತ್ತಡ ತರಲು ಪ್ರಯತ್ನ ಮಾಡಲಾಗುತ್ತಿದೆ ಎಂದರು.
ಇತರ ರಾಜ್ಯಗಳು ತಕರಾರು ತೆಗೆದಿಲ್ಲ ಎಂಬ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಪಂಜಾಬ್, ತಮಿಳುನಾಡು ಸರ್ಕಾರ ಧ್ವನಿ ಎತ್ತಿವೆ ಎಂದರು. ಆರೇಳು ರಾಜ್ಯಗಳು ತಮ್ಮ ಸ್ಪಷ್ಟ ನಿಲುವು ಹಾಗೂ ಅಸಮಾಧಾನವನ್ನು ಹೊರಹಾಕಿವೆ. MNREGA ಕಾಯ್ದೆಯಡಿ ಕೇವಲ ಕೆಲಸ ಕೊಡುವುದು ಮಾತ್ರವಲ್ಲ, ಕೆಲಸ ಕೊಡದೇ ಹೋಗಿದ್ದರೆ, ಫಲಾನುಭವಿ ಉದ್ಯೋಗ ಭತ್ಯೆಯನ್ನು ಕೇಳಬಹುದಾಗಿತ್ತು. ಪಂಚಾಯತಿಗಳಿಗೆ ಕೆಲಸಗಳ ಬಗ್ಗೆ ತೀರ್ಮಾನಿಸುವ ಹಕ್ಕು ಇತ್ತು. ಹೊಸ ಕಾಯ್ದೆಯಡಿ ಪಂಚಾಯತಿಗಳಿಗೆ ಅಧಿಕಾರವಿಲ್ಲ. ಪಂಚಾಯತಿಗಳ ವ್ಯಾಪ್ತಿಗೂ ಬರುವುದಿಲ್ಲ. ಕೇಂದ್ರ ಸರ್ಕಾರವೇ ಎಲ್ಲಿ ಕಾಮಗಾರಿ ನಡೆಯಬೇಕೆಂದು ನಿರ್ಧರಿಸಲಿದೆ. ಗ್ರಾಮೀಣ ಆಸ್ತಿಯನ್ನು ಸೃಷ್ಟಿಸಲೆಂದು ಬಳಸಲಾಗುತ್ತಿದ್ದ ಕಾರ್ಮಿಕರನ್ನು ರಸ್ತೆ, ಟನಲ್ ನಿರ್ಮಾಣಕ್ಕೆ ಗುತ್ತಿಗೆದಾರರ ಬಳಿ ಕೆಲಸ ಮಾಡಬೇಕು ಎಂದರು.
ಅಧಿಕಾರ ವಿಕೇಂದ್ರೀಕರಣದ ಪರಿಕಲ್ಪನೆಗೆ ಕೊಡಲಿ ಏಟು
ಜನರ ಕೆಲಸದ ಹಕ್ಕನ್ನು ಕಿತ್ತುಕೊಂಡು, ಪಂಚಾಯತಿಗಳಿಗೆ ನಿರ್ಣಯದ ಅಧಿಕಾರವನ್ನು ಕಸಿದುಕೊಂಡು, ಪಂಚಾಯತಿಗಳಿಗೆ ನೀಡಲಾಗಿದ್ದ ಅಧಿಕಾರವನ್ನು ಸಂಪೂರ್ಣವಾಗಿ ಕಿತ್ತುಕೊಂಡು ಕೇಂದ್ರದಲ್ಲಿ ಅಧಿಕಾರವಿಟ್ಟುಕೊಳ್ಳುವುದು ಅಧಿಕಾರ ವಿಕೇಂದ್ರೀಕರಣದ ಪರಿಕಲ್ಪನೆಗೆ ಕೊಡಲಿ ಏಟು ಕೊಡಲಾಗಿದೆ. ಈ ಎಲ್ಲಾ ಕಾರಣಗಳಿಂದಾಗಿ ಜನರನ್ನು ಜಾಗೃತಗೊಳಿಸಿ, ವಿಶೇಷ ಚರ್ಚೆ ಮಾಡಿ, ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ನಿರ್ಣಯ ಮಾಡಲಾಗಿದೆ ಎಂದರು. ಜನರ ನ್ಯಾಯಾಲಯಕ್ಕೆ ಮಾತ್ರವಲ್ಲದೆ ಕಾನೂನಿನ ನ್ಯಾಯಾಲಯದ ಮೊರೆ ಹೋಗಲು ನಿರ್ಣಯಿಸಲಾಗಿದೆ ಎಂದು ಹೇಳಿದರು.
ಬಿಜೆಪಿ ಮತ್ತು ಜೆಡಿಎಸ್ ನಾಯಕರು ಸರ್ಕಾರಕ್ಕೆ ಸವಾಲು ಹಾಕಿರುವ ಬಗ್ಗೆ ಮಾಡಿರುವ ಆರೋಪಗಳಿಗೆ ಸಂಬಂಧಿಸಿದಂತೆ ಮಾತನಾಡಿ ನಮ್ಮ ರಾಜ್ಯದಲ್ಲಿ ಲೆಕ್ಕ ಪರಿಶೋಧನೆಯ ಉದ್ದೇಶವೇ ಅವ್ಯವಹಾರಗಳನ್ನು ಪತ್ತೆ ಹಚ್ಚಬೇಕೆನ್ನುವುದಾಗಿದೆ. ರಾಜ್ಯದಲ್ಲಿ ಈ ಬಗ್ಗೆ ಕ್ರಮವನ್ನೂ ಕೈಗೊಳ್ಳಲಾಗಿದೆ. ಮೋದಿಯವರು ಅಧಿಕಾರ ವಹಿಸಿಕೊಂಡ ಸಂದರ್ಭದಲ್ಲಿ ನರೇಗಾ ಬಗ್ಗೆ ಕೆಟ್ಟದಾಗಿ ಟೀಕೆ ಮಾಡಿದ್ದರು. ಮುಂದಿನ 12 ವರ್ಷಗಳಲ್ಲಿ ಇದೇ ಯೋಜನೆಯನ್ನು ಹೊಗಳಿದ್ದರು ಎಂದರು.
ಹೋರಾಟದ ಅಂಗೇ ಬಿಜೆಪಿಯವರು ಮಾಡಿರುವುದು ರಾಜಕೀಯ ಆರೋಪ. ಇಂಥ ಕರಾಳ ಕಾನೂನು ರೂಪಿಸಿದಾಗ ಜನರ ಹಿತ ಕಾಪಾಡಬೇಕೆಂಬ ಉದ್ದೇಶವಿದ್ದರೆ , ಕಾಯ್ದೆಯ ಅನಾನುಕೂಲತೆಗಳನ್ನು ಕೇಂದ್ರ ಸರ್ಕಾರಕ್ಕೆ ತಿಳಿಸಬೇಕಿತ್ತು. ಜನರಿಗೆ ಅನ್ಯಾಯ ಮಾಡುವ ಈ ಕಾನೂನನ್ನು ಅವರು ಒಪ್ಪಬಾರದಿತ್ತು. ರಾಜಕೀಯವಾಗಿ ಕೆಲವರು ಕಾಯ್ದೆಯನ್ನು ವಿಬಿಜಿ ರಾಮ್ ಜಿ ಎನ್ನುತ್ತಾರೆ. ಇದರಲ್ಲಿ ರಾಮ್ ಎಲ್ಲಿಂದ ಬರುತ್ತದೆ? ಬರೆಯುವಾಗ, ಹೇಳುವಾಗ ತಪ್ಪು ಏಕೆ ಮಾಡುತ್ತಾರೆ? ಭಾವನಾತ್ಮಕ ಅಂಶದಡಿ ಆಶ್ರಯ ಪಡೆಯುತ್ತಿರುವುದು ದುರದೃಷ್ಟಕರ ಸಂಗತಿ ಎಂದರು.
-
ಸಕಲೇಶಪುರದಲ್ಲಿ ಫೋಟೋಗ್ರಾಫರ್ಗಳ ಮೇಲೆ ಹಲ್ಲೆ ಪ್ರಕರಣ: ದುಬಾರಿ ಕ್ಯಾಮೆರಾಗೆ ಹಾನಿ, ಆರೋಪಿಗಳ ಬಂಧನ -
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
12 ಕೋಟಿ ರೂ ಡ್ರಗ್ಸ್ ಜಪ್ತಿ: ಗಂಧದ ನಾಡು 'ಗಾಂಜಾ ಬೀಡು' ಮಾಡಿದ ಕಾಂಗ್ರೆಸ್ ಸರ್ಕಾರ; R ಅಶೋಕ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ












Click it and Unblock the Notifications