ನಟ ದರ್ಶನ್‌ಗೆ ರಾಜಾತಿಥ್ಯ ಎಫೆಕ್ಟ್‌; 43 ಮಂದಿಗೆ ಶಾಕ್‌

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ ಈ ಹಿಂದೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರು. ಇಲ್ಲಿ ದರ್ಶನ್‌ ಅವರಿಗೆ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗಿದೆ ಎನ್ನುವ ಆರೋಪ ಕೇಳಿಬಂದಿತ್ತು. ಇದಕ್ಕೆ ಸಂಬಂಧಿಸಿದಂತೆ ದರ್ಶನ್‌ ಸಿಗರೇಟ್‌ ಸೇದಿಕೊಂಡು ಜಾಲಿ ಮಾಡುತ್ತಿದ್ದ ಫೋಟೋ ಕೂಡ ಲೀಕ್‌ ಆಗಿ ಸಂಚಲನ ಸೃಷ್ಟಿಸಿತ್ತು. ಈ ಘಟನೆ ಬೆನ್ನಲ್ಲೇ ರಾಜ್ಯದ ವಿವಿಧ ಜೈಲುಗಳ ಸಿಬ್ಬಂದಿಯನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಟ ದರ್ಶನ್ ಅವರಿಗೆ ವಿಶೇಷ ಆತಿಥ್ಯ ನೀಡಿದ ಪ್ರಕರಣದ ಬೆನ್ನಲ್ಲೇ ರಾಜ್ಯದ ವಿವಿಧ ಕಾರಾಗೃಹಗಳ 43 ಸಿಬ್ಬಂದಿಯನ್ನು ಅವರ ಹೆಸರಿನ ಮುಂದೆ ಸೂಚಿಸಿರುವ ಹುದ್ದೆಗಳಿಗೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಜೈಲ‌ರ್ ಶಂಭು ಷಣ್ಮುಖಪ್ಪ ವೆನ್ನಾಲ ಅವರನ್ನು ಬೆಂಗಳೂರು ಕೇಂದ್ರ ಕಾರಾಗೃಹಕ್ಕೆ ವರ್ಗಾವಣೆ ಮಾಡಲಾಗಿದೆ. ಒಟ್ಟಾರೆ ರಾಜ್ಯದಲ್ಲಿರುವ ವಿವಿಧ ಕಾರಾಗೃಹಗಳಿಗೆ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿದೆ.

The Karnataka Government Has Issued An Order To Transfer Jail Officials

ಕೊಲೆ ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಜೈಲಿನಲ್ಲಿ ವಿಶೇಷ ಪರಿಗಣನೆ ನೀಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಏಳು ಮಂದಿಯನ್ನು ಈಗಾಗಲೇ ಅಮಾನತು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದರು.

ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ಶೀಟರ್‌ ವಿಲ್ಸನ್ ಗಾರ್ಡನ್‌ ನಾಗ, ಪ್ರಕರಣದ ಆರೋಪಿ ನಾಗರಾಜ್‌ ಜೊತೆ ಕುಳಿತು ನಟ ದರ್ಶನ್‌ ಒಂದು ಕೈಯಲ್ಲಿ ಕಾಫಿ ಮಗ್‌, ಮತ್ತೊಂದು ಕೈಯಲ್ಲಿ ಸಿಗರೇಟ್‌ ಹಿಡಿದಿರುವ ಫೋಟೋ & ರೌಡಿಗಳಿಗೆ ವಿಡಿಯೋ ಕಾಲ್‌ ಮಾಡಿ ಮಾತನಾಡಿರುವ ವಿಡಿಯೋ ಭಾರೀ ವೈರಲ್‌ ಆಗಿತ್ತು. ಇದರ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ ನೂತನ ಅಧಿಕಾರಿಗಳನ್ನು ನೇಮಕ ಮಾಡಿತ್ತು.

ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯ ಆರೋಪ ಹಿನ್ನೆಲೆ 9 ಜೈಲಾಧಿಕಾರಿಗಳನ್ನು ಅಮಾನತು ಮಾಡಲಾಗಿದ್ದು, ಕಾರಾಗೃಹ ಡಿಐಜಿ ಸೋಮಶೇಖರ್ ಜಾಗಕ್ಕೆ ನೂತನ ಕಾರಾಗೃಹ ಡಿಐಜಿಪಿಯಾಗಿ ಮೈಸೂರು ಕಾರಗೃಹ ಅಕಾಡೆಮಿ ಡಿಐಜಿಯಾಗಿದ್ದ ದಿವ್ಯಾಶ್ರಿ ಅವರನ್ನು ನೇಮಿಸಲಾಗಿತ್ತು.

The Karnataka Government Has Issued An Order To Transfer Jail Officials

ಕಾರಾಗೃಹ ಡಿಐಜಿ ಸೋಮಶೇಖರ್ ಜಾಗಕ್ಕೆ ನೂತನ ಕಾರಾಗೃಹ ಡಿಐಜಿಪಿಯಾಗಿ ಮೈಸೂರು ಕಾರಗೃಹ ಅಕಾಡೆಮಿ ಡಿಐಜಿಯಾಗಿದ್ದ ದಿವ್ಯಶ್ರೀ ಹಾಗೂ ಕೇಂದ್ರ ಕಾರಗೃಹ ಮುಖ್ಯ ಅಧೀಕ್ಷಕ ವಿ.ಶೇಷಮೂರ್ತಿ ಅಮಾನತು ಬೆನ್ನಲ್ಲೇ ಜೈಲಿನ ಮುಖ್ಯ ಅಧೀಕ್ಷಕರಾಗಿ ಕೆ.ಸುರೇಶ್ ಎಂಬುವವರನ್ನು ಸರ್ಕಾರ ನೇಮಿಸಿದ್ದು, ಜೈಲಿನಲ್ಲಿ ಅಕ್ರಮ ಬಯಲಿಗೆ ಬರುತ್ತಿದ್ದಂತೆ ಈ ಕ್ರಮ ಕೈಗೊಳ್ಳಲಾಗಿತ್ತು.

ಪರಪ್ಪನ ಅಗ್ರಹಾರಕ್ಕೆ ಕರ್ನಾಟಕ ಕೈಗಾರಿಕ ಭದ್ರತಾ ದಳ ಇಲಾಖೆ ಸಿಬ್ಬಂದಿ & ಅಧಿಕಾರಿಗಳು ಪೊಲೀಸರನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದ್ದು, ಅವರ ಅನುಮತಿ ಪಡೆದು ಜೈಲಿನ ಆವರಣಕ್ಕೆ ಪ್ರವೇಶ ಮಾಡಬೇಕಾಗಿದೆ. ಇನ್ನು ಕೇಂದ್ರ ಕಾರಗೃಹ ಭದ್ರತೆಗಾಗಿ ಓರ್ವ ಅಸಿಸ್ಟೆಂಟ್ ಕಮಾಂಡೆಂಟ್, ಇಬ್ಬರು ಇನ್ಸ್‌ಪೆಕ್ಟರ್‌ಗಳು ಸೇರಿ ನೂರಕ್ಕೂ ಹೆಚ್ಚು ಸಿಬ್ಬಂದಿ ನೇಮಕ ಮಾಡಲಾಗಿತ್ತು.

ಈ ಕರ್ತವ್ಯಲೋಪದ ಬೆನ್ನಲ್ಲೇ ದರ್ಶನ್‌ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್‌ ಮಾಡಲಾಗಿತ್ತು. ಮುಂದೆ ಈ ರೀತಿಯ ಘಟನೆಗಳನ್ನು ನಡೆಯದಂತೆ ನೋಡಿಕೊಳ್ಳಲು ಖಡಕ್‌ ಆಗಿ ಸೂಚನೆ ನೀಡಲಾಗಿದ್ದು, ಇದರಿಂದಾಗಿ ಇಂದು ಎಲ್ಲ ಜೈಲುಗಳಿಗೆ ಅಧಿಕಾರಿಗಳನ್ನು ವರ್ಗಾವಣೆ ಮಾಡುವ ಮೂಲಕ ಮೇಜರ್‌ ಸರ್ಜರಿ ಮಾಡಿದೆ ಎಂದು ಹೇಳಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+