ಹೈಕೋರ್ಟ್‌ನಲ್ಲಿ ಮುಡಾ ಕೇಸ್‌ ವಿಚಾರಣೆ ಏನಾಯ್ತು?

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಕೆ ಮಾಡಿರುವ ಅರ್ಜಿಯ ವಿಚಾರಣೆ ಇಂದು ನಡೆಯಿತು. ಈ ಪ್ರಕರಣದಲ್ಲಿ ಈಗಾಗಲೇ ಮಧ್ಯಂತರ ಆದೇಶವನ್ನು ಹೈಕೋರ್ಟ್ ವಿಸ್ತರಣೆ ಮಾಡಿತ್ತು. ಇಂದು ವಿಚಾರಣೆ ನಡೆಸಿದ ಕೋರ್ಟ್‌, ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 12ಕ್ಕೆ ಮತ್ತೆ ಮುಂದೂಡಿದೆ.

ಮುಡಾ ಪ್ರಕರಣದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್‌ ಅವರು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಸೆಕ್ಷನ್ 17-ಎ ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಸೆಕ್ಷನ್-2023ರ ಸೆಕ್ಷನ್ 218ರ ಅಡಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿಚಾರಣೆಗೆ ಅನುಮತಿ ನೀಡಿದ್ದರು. ಇದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅವರು ಹೈಕೋರ್ಟ್‌ ಮೆಟ್ಟಿಲೇರಿದ್ದರು.

The Karnataka High Court Adjourned The Muda Case Hearing

ಇಂದು ನಡೆದ ವಿಚಾರಣೆಯಲ್ಲಿ ಸರ್ಕಾರದ ಪರವಾಗಿ ಹಾಜರಾಗಿದ್ದ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, 17ಎ ಅಡಿ ಪ್ರಾಸಿಕ್ಯೂಷನ್‌ಗೆ ಪೊಲೀಸರು ಅನುಮತಿ ಕೇಳಲು ಅವಕಾಶವಿದೆ. ಇದಕ್ಕೂ ಮುನ್ನ ತನಿಖಾಧಿಕಾರಿ ಪ್ರಾಥಮಿಕ ತನಿಖೆ ನಡೆಸಬೇಕು. ಪ್ರಾಥಮಿಕ ತನಿಖೆಯ ವಿವರವನ್ನು ಸಕ್ಷಮ ಪ್ರಾಧಿಕಾರಕ್ಕೆ ನೀಡಬೇಕು ಎಂದು ವಾದ ಮಂಡಿಸಿದರು.

ರಾಜ್ಯಪಾಲ ಥಾವರ್‌ಚಂದ್‌ ಗೆಹಲೋಟ್‌ ಅವರು ಸರ್ಕಾರಕ್ಕೆ ಶೋಕಾಸ್ ನೋಟಿಸ್ ನೀಡುವ ಬದಲು ತನಿಖಾಧಿಕಾರಿಯಿಂದ ವರದಿ ಪಡೆಯಬೇಕಿತ್ತು. ಆದರೆ ವರದಿಯಿಲ್ಲದೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ ಎಂದು ಕೇಂದ್ರ ಸರ್ಕಾರದ 17ಎ ಮಾರ್ಗಸೂಚಿ ಆಧರಿಸಿ ಅಡ್ವೊಕೇಟ್‌ ಜನರಲ್ ವಾದಿಸಿದರು.

ದೂರುದಾರ ಸ್ನೇಹಮಯಿ ಕೃಷ್ಣ ಪರವಾಗಿ ವಕೀಲೆ ಲಕ್ಷ್ಮಿ ಅಯ್ಯಂಗಾರ್ ಅವರೂ ವಾದ ಮಂಡಿಸಿದರು. ಅರ್ಜಿದಾರರ ಸೂಚನೆಯಂತೆ ಇಡೀ ಪ್ರಕ್ರಿಯೆ ನಡೆದಿದೆ ಎಂದು ವಿವರಿಸಿದರು. ಸಿದ್ದರಾಮಯ್ಯ ಅವರು ಅಧಿಕಾರದಲ್ಲಿದ್ದಾಗಲೇ ಈ ಎಲ್ಲ ಪ್ರಕ್ರಿಯೆ ನಡೆದಿದೆ. ಸಿಎಂ ಪತ್ನಿಗೆ ಬೇರೆ ಆದಾಯದ ಮೂಲಗಳು ಇರಲಿಲ್ಲ. ಆದಾಯ ತೆರಿಗೆ ರಿಟರ್ನ್ ಅನ್ನು ಸಿಎಂ ಅವರ ಪತ್ನಿ ಫೈಲ್ ಮಾಡಿಲ್ಲ. ಹೀಗಾಗಿ ಪತ್ನಿಯ ಆಸ್ತಿಯನ್ನು ಪತಿಯ ಆಸ್ತಿ ಎಂದು ಪರಿಗಣಿಸಬೇಕು. ಸಿದ್ದರಾಮಯ್ಯ ಮೇಲಿನ ಆರೋಪಗಳಿಗೆ ಪುರಾವೆಗಳಿವೆ ಎಂದು ವಾದ ಮಂಡಿಸಿದರು ಎನ್ನಲಾಗಿದೆ.

The Karnataka High Court Adjourned The Muda Case Hearing

ವಾದ ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ, ಸೆಪ್ಟೆಂಬರ್ 12ರಂದೇ ನಿಮ್ಮ ವಾದ ಮಂಡಿಸಿ ಕೊನೆಗೊಳಿಸಬೇಕು ಎಂದು ಸೂಚಿಸಿದರು. ಹಾಗಾಗಿ ಅದೇ ದಿನವೇ ತೀರ್ಪು ಹೊರಬರುವ ಸಾಧ್ಯತೆ ಇದೆ. ಸೆಪ್ಟೆಂಬರ್ 12ರಂದು ಮಧ್ಯಾಹ್ನ 12 ಗಂಟೆಗೆ ವಿಚಾರಣೆ ನಡೆಯಲಿದೆ. ಸದ್ಯಕ್ಕೆ ಸಿಎಂ ಸಿದ್ದರಾಮಯ್ಯ ಅವರಿಗೆ ತಾತ್ಕಾಲಿಕ ರಿಲೀಫ್‌ ಸಿಕ್ಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+