ಎಚ್‌.ಡಿ.ರೇವಣ್ಣ ಅವರಿಗೆ ಬಿಗ್‌ ರಿಲೀಫ್‌; ಯಾಕೆ?

ಬೆಂಗಳೂರು: ಸಂತ್ರಸ್ತ ಮಹಿಳೆಯೊಬ್ಬರ ಕಿಡ್ನ್ಯಾಪ್‌ ಕೇಸ್‌ನಲ್ಲಿ ಜೆಡಿಎಸ್‌ ಶಾಸಕ ಎಚ್.ಡಿ.ರೇವಣ್ಣ ಅವರಿಗೆ ಹೈಕೋರ್ಟ್‌ನಲ್ಲಿ ಬಿಗ್‌ ರಿಲೀಫ್‌ ಸಿಕ್ಕಿದೆ. ಮೈಸೂರಿನ ಕೆ.ಆರ್‌.ನಗರದ ಮಹಿಳೆಯನ್ನು ಕಿಡ್ನ್ಯಾಪ್‌ ಕೇಸ್‌ ಸಂಬಂಧ ರೇವಣ್ಣ ಅವರಿಗೆ ನೀಡಲಾಗಿದ್ದ ಜಾಮೀನು ರದ್ದು ಮಾಡುವಂತೆ ಎಸ್‌ಐಟಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಇಂದು ವಿಚಾರಣೆ ನಡೆಸಿದ ಹೈಕೋರ್ಟ್‌, ಎಸ್‌ಐಟಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಇದರಿಂದ ರೇವಣ್ಣ ಅವರು ನಿಟ್ಟುಸಿರು ಬಿಡುವಂತಾಗಿದೆ.

ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರ ಮೇಲಿರುವ ಅತ್ಯಾಚಾರ ಪ್ರಕರಣವು ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಈ ಪೈಕಿ ಇದೇ ಕೇಸ್‌ನ ಸಂತ್ರಸ್ತೆಯನ್ನು ರೇವಣ್ಣ ಅಪಹರಿಸಿದ್ದರು ಎಂದು ಆರೋಪಿಸಲಾಗಿತ್ತು. ಇದೇ ಕೇಸ್‌ನಲ್ಲಿ ರೇವಣ್ಣ ಅವರನ್ನು ಪೊಲೀಸರು ಬಂಧಿಸಿದ್ದರು.

The Karnataka High Court Has Refused To Cancel The Bail Of JDS MLA HD Revanna

ಪರಪ್ಪನ ಅಗ್ರಹಾರ ಜೈಲು ಸೇರಿದ್ದ ರೇವಣ್ಣ, ಬಳಿಕ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಜಾಮೀನು ಪಡೆದು ಹೊರಬಂದಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಎಸ್‌ಐಟಿ ಅಧಿಕಾರಿಗಳು ಜಾಮೀನು ರದ್ದು ಮಾಡುವಂತೆ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಇದೇ ಪ್ರಕರಣದಲ್ಲಿ ಆರೋಪಿಯಾಗಿರುವ ರೇವಣ್ಣ ಪತ್ನಿ ಭವಾನಿ ಅವರೂ ಈಗಾಗಲೇ ಜಾಮೀನು ಪಡೆದುಕೊಂಡಿದ್ದಾರೆ.

ಹಲವು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಪ್ರಜ್ವಲ್‌ ರೇವಣ್ಣ ಅವರ ಮೇಲಿದೆ. ಇದಕ್ಕೆ ಸಂಬಂಧಿಸಿದಂತೆ ಪ್ರಜ್ವಲ್‌ ಅವರೇ ಸೆರೆಹಿಡಿದಿದ್ದರು ಎನ್ನಲಾದ ಅಶ್ಲೀಲ ವಿಡಿಯೋಗಳು ಎಲ್ಲೆಡೆ ಹರಿದಾಡಿದ್ದವು. ಈ ಅತ್ಯಾಚಾರದ ವಿಡಿಯೋಗಳು ಹೊರಬರುತ್ತಿದ್ದಂತೆ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರಿದ್ದರು. ಬಳಿಕ ಅವರ ಮೇಲೆ ಪ್ರಕರಣಗಳೂ ದಾಖಲಾಗಿ, ಹಲವು ತಿಂಗಳ ನಂತರ ತಾವೇ ಖುದ್ದು ವಿದೇಶದಿಂದ ವಾಪಸ್‌ ಆಗಿ ಪೊಲೀಸರ ಮುಂದೆ ಶರಣಾದರು. ಬಳಿಕ ಪ್ರಜ್ವಲ್‌ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಯಿತು.

ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಮೊದಲ ಚಾರ್ಜ್‌ಶೀಟ್‌ ಕೂಡ ಸಲ್ಲಿಸಿದ್ದಾರೆ. ತನಿಖೆ ನಡೆಸಿದ ಎಸ್‌ಐಟಿ ಅಧಿಕಾರಿಗಳು ಸುಮಾರು 2,000 ಪುಟಗಳಷ್ಟು ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದಾರೆ. ಅಷ್ಟೇ ಅಲ್ಲದೆ, 123 ಸಾಕ್ಷಿಗಳನ್ನು ಕಲೆ ಹಾಕಿ ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ.

The Karnataka High Court Has Refused To Cancel The Bail Of JDS MLA HD Revanna

ಮನೆ ಕೆಲಸಕ್ಕೆ ಬರುತ್ತಿದ್ದ ಮಹಿಳೆಗೆ ರೇವಣ್ಣ ಮನೆಯಲ್ಲಿ ಮೈಕೈ ಮುಟ್ಟಿ ದೌರ್ಜನ್ಯ ಎಸಗಿದ್ದಾರೆ ಎಂದು ಇದರಲ್ಲಿ ಉಲ್ಲೇಖಿಸಲಾಗಿದೆ. ಪ್ರಜ್ವಲ್ ವಿರುದ್ಧ ಹೊಳೆನರಸೀಪುರ ಮನೆಯಲ್ಲಿ ನಿರಂತರವಾಗಿ ಅತ್ಯಾಚಾರ, ಬೆಂಗಳೂರಿನ ಬಸವನಗುಡಿ ಮನೆಯಲ್ಲೂ ಅತ್ಯಾಚಾರ ನಡೆಸಿರುವುದಾಗಿ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖ ಮಾಡಲಾಗಿದೆ.

ಹೊಳೆನರಸೀಪುರ ಮನೆಯಿಂದ ಬೆಂಗಳೂರು ಮನೆಗೆ ಕರೆದುಕೊಂಡು ಬಂದು ಕೂಡ ಅತ್ಯಾಚಾರ ಎಸಗಿದ್ದಾರೆ. ಸಂತ್ರಸ್ತೆಯ ಜೊತೆ ಬೆದರಿಸಿ ನಿರಂತರವಾಗಿ ಲೈಂಗಿಕ ಸಂಪರ್ಕ ನಡೆಸಿದ್ದಾರೆ ಎಂದು ಎಸ್‌ಐಟಿಯಿಂದ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದೆ ಎನ್ನಲಾಗಿದೆ. ಇದೇ ಪ್ರಕರಣದಲ್ಲಿ ರೇವಣ್ಣ ಅವರೂ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇರೆಗೆ ಅವರ ವಿರುದ್ಧವೂ ಕೇಸ್‌ ದಾಖಲಾಗಿತ್ತು. ಇದೇ ಕೇಸ್‌ನಲ್ಲಿ ರೇವಣ್ಣ ಜಾಮೀನು ಪಡೆದಿರುವುದನ್ನು ಹೈಕೋರ್ಟ್‌ ಸಮ್ಮತಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+