ರಾಜ್ಯದ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : 7.5 ಲಕ್ಷ ಬಿ-ಖಾತಾಗಳಿಗೆ ಎ ಖಾತಾ ವಿತರಣೆ!

ಬೆಂಗಳೂರು, ಆಗಸ್ಟ್‌ 23: 50×80 ಅಡಿ ಅಳತೆವರೆಗಿನ ಕಟ್ಟಡಗಳ ನಿರ್ಮಾಣಕ್ಕೆ ಸ್ವಯಂಚಾಲಿತ 'ನಂಬಿಕೆ ನಕ್ಷೆ' ಯೋಜನೆಯಲ್ಲಿ ಒಂಬತ್ತು ಸಾವಿರ ನಕ್ಷೆಗಳನ್ನು ನೀಡಲಾಗಿದೆ. ಬಡಾವಣೆಗಳನ್ನು ನಿರ್ಮಿಸಿದ ನಂತರ ಕಂದಾಯ ನಿವೇಶನಗಳನ್ನು ಹಂಚಿ, ಅಲ್ಲಿರುವ ರಸ್ತೆಗಳು ಮಾಲೀಕನ ಹೆಸರಿನಲ್ಲಿ ಇದ್ದ ಅನೇಕ ಪ್ರಕರಣಗಳಿದ್ದವು. ಈ ಎಲ್ಲ ಖಾಸಗಿ ರಸ್ತೆಗಳನ್ನು 'ಸರ್ಕಾರಿ ರಸ್ತೆಗಳು' ಎಂದು ಘೋಷಣೆ ಮಾಡಲಾಗುತ್ತದೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಹೇಳಿದರು.

ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್‌ ಅವರು ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, 7.5 ಲಕ್ಷ ಬಿ ಖಾತೆಗಳನ್ನು 'ಎ' ಖಾತೆಗಳನ್ನಾಗಿ ಮಾಡಲಾಗುತ್ತದೆ. 'ಅಭಿವೃದ್ದಿ ಹೊಂದಿದ ಜಮೀನು ' ಎಂದು ಮಾರ್ಗಸೂಚಿ ದರದ ಶೇ 5.5ರಷ್ಟು ಶುಲ್ಕ ಪಾವತಿಸಿಕೊಂಡು 'ಎ' ಖಾತೆ ನೀಡಲು ತೀರ್ಮಾನ ಮಾಡಿದ್ದೇವೆ ಎಂದು ಡಿ.ಕೆ.ಶಿವಕುಮಾರ್‌ ಅವರು ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.

The Karnataka State A Khata Distributed To 7 5 Lakh B Khata

ಈ ದೇಶದಲ್ಲಿ ಬಡವರಿಗೆ ಸೂರು, ಹೊಟ್ಟೆ ತುಂಬಿಸಲು ಅನ್ನ, ಕೆಲಸ ಮಾಡಲು ಉದ್ಯೋಗ, ಉಳುವವನಿಗೆ ಭೂಮಿ ಕೊಟ್ಟಿರುವುದು, ಫಾರಂ 53 ತಂದು ಬಗರ್ ಹುಕುಂ ಸಾಗುವಳಿ ಜಮೀನು ಸಕ್ರಮ, ಅರಣ್ಯ ಪ್ರದೇಶದಲ್ಲಿ ವಾಸವಿರುವ ಬುಡಕಟ್ಟು ಜನರಿಗೆ ಭೂಮಿ ಕೊಟ್ಟಿರುವುದು ಕಾಂಗ್ರೆಸ್ ಸರ್ಕಾರ. ಇದೇ ನಮ್ಮ ಇತಿಹಾಸ. ಬೇಕಿದ್ದರೆ ನೀವು ನಿಮ್ಮ ಸರ್ಕಾರದ ಸಾಧನೆಗಳನ್ನು ಹೇಳಿ. ನಾವು ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳನ್ನು ದೇಶದ ಗೌರವಾನ್ವಿತ ಪ್ರಧಾನಮಂತ್ರಿಗಳು ಟೀಕೆ ಮಾಡಿದ್ದರು. ಬೇರೆ ರಾಜ್ಯಗಳ ಮುಖ್ಯಮಂತ್ರಿಗಳು ಇದು ಜಾರಿ ಅಸಾಧ್ಯ ಎಂದರು.

ಈ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತದೆ ಎಂದು ಹೇಳಿದರು. ಆದರೆ ಮಧ್ಯಪ್ರದೇಶ, ಮಹಾರಾಷ್ಟ್ರ, ದೆಹಲಿ ಸೇರಿದಂತೆ ಎಲ್ಲಾ ರಾಜ್ಯಗಳಲ್ಲಿ ಬಿಜೆಪಿ ಗ್ಯಾರಂಟಿ ಯೋಜನೆ ಘೋಷಣೆ ಮಾಡಿ ಕರ್ನಾಟಕ ಮಾದರಿ ಅನುಸರಿಸಲಾಗಿದೆ. ಇದು ಕಾಂಗ್ರೆಸ್ ಸರ್ಕಾರದ ಯೋಜನೆಗಳೇ ಹೊರತು ಬಿಜೆಪಿ ಯೋಜನೆಗಳಲ್ಲ ಎಂಬುದನ್ನು ಈ ಸದನದಲ್ಲಿ ಮತ್ತೊಮ್ಮೆ ಹೇಳುತ್ತೇನೆ ಎಂದು ಡಿ ಕೆ ಶಿವಕುಮಾರ್‌ ಅವರು ತಿಳಿಸಿದರು.

ಚುನಾವಣೆ ಸಂದರ್ಭದಲ್ಲಿ ನಾನು ಒಂದು ಮಾತು ಹೇಳಿದ್ದೆ. ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ ಎಂದು ಹೇಳಿದ್ದೆ. ಈ ದಾನ ದರ್ಮ ಮಾಡುವ ಕೈಗೆ ಜನ ಅಧಿಕಾರ ಕೊಟ್ಟಿದ್ದಕ್ಕೆ ಐದು ಗ್ಯಾರಂಟಿ ಕೊಟ್ಟಿದೆ. ಈ ಐದು ಬೆರಳು ಸೇರಿ ಕೈ ಮುಷ್ಠಿಯಾಯಿತು, ಐದು ಗ್ಯಾರಂಟಿಗಳು ಸೇರಿ ಕೈ ಗಟ್ಟಿಯಾಯಿತು. ಇದಕ್ಕೆಲ್ಲ ಉತ್ತರವನ್ನು 2028ರಲ್ಲಿ ರಾಜ್ಯದ ಜನ ಉತ್ತರ ನೀಡಲಿದ್ದಾರೆ ಎಂದು ತಿಳಿಸಿದರು.

ನಿಯಮ 69ರ ಅಡಿಯಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ ಎಂದು 38 ಶಾಸಕರು 6 ಗಂಟೆ 17 ನಿಮಿಷಗಳ ಕಾಲ ಚರ್ಚೆ ಮಾಡಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾವೆಲ್ಲರೂ ಕೆಲಸ ಮಾಡುತ್ತಿದ್ದು, ಜನ ನಮ್ಮನ್ನು ಆಡಳಿತದಲ್ಲಿ ಕೂರಿಸಿದ್ದಾರೆ. ಪ್ರತಿಪಕ್ಷದಲ್ಲಿರುವವರೂ ಈ ಹಿಂದೆ ಆಡಳಿತ ಮಾಡಿದ್ದಾರೆ. ಈ ಸರ್ಕಾರದಲ್ಲಿ ಆಡಳಿತ ಪಕ್ಷದ 139 ಶಾಸಕರಿದ್ದಾರೆ. ಚುನಾವಣೆ ಸಂದರ್ಭದಲ್ಲಿ ನಾನು ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿ, ಮುಖ್ಯಮಂತ್ರಿಗಳು ಆಗ ವಿರೋಧ ಪಕ್ಷದ ನಾಯಕರಾಗಿ ಇಡೀ ರಾಜ್ಯದ ಪ್ರವಾಸ ಮಾಡಿ ಜನರ ಆಸೆ, ಆಕ್ರೋಶ ಗಮನದಲ್ಲಿಟ್ಟುಕೊಂಡು ಗ್ಯಾರಂಟಿ ಯೋಜನೆ ಘೋಷಣೆ ಮಾಡಿದೆವು ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+