Karnataka BJP State President: ಬಿ.ವೈ. ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಸ್ಥಾನ!?: ಸಿ ಟಿ ರವಿ ಹೇಳಿದ್ದೇನು?
ಶಿವಮೊಗ್ಗ, ಸೆಪ್ಟೆಂಬರ್ 11: ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ಲಿಂಗಾಯತ ನಾಯಕ ಬಿ ಎಸ್ ಯಡಿಯೂರಪ್ಪ ಅವರು ತಮ್ಮ ಪುತ್ರ ಹಾಗೂ ಶಿಕಾರಿಪುರ ಶಾಸಕ ಬಿ ವೈ ವಿಜಯೇಂದ್ರ ಅವರಿಗೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ನೀಡುವ ಕುರಿತು ಬಿಜೆಪಿ ಪಾಳಯದಲ್ಲಿ ಚರ್ಚೆಯಾಗುತ್ತಿದ್ದು, ಈ ಬಗ್ಗೆ ಮಾಜಿ ಸಚಿವ ಸಿ ಟಿ ರವಿ ಪ್ರತಿಕಿಯಿಸಿದ್ದಾರೆ.
ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಬಿ.ವೈ.ವಿಜಯೇಂದ್ರ ಅವರಿಗೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ನೀಡಬೇಕು ಎಂದು ಒಂದೆಡೆ ಕಾರ್ಯಕರ್ತರು ಚರ್ಚೆ ಮಾಡುತ್ತಿದ್ದಾರೆ. ಆದರೆ ಅಂತಿಮವಾಗಿ ಪಕ್ಷದ ನಾಯಕರು ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತಾರೆ. ಹೀಗಾಗಿ ನಾನು ಈ ಬಗ್ಗ ಹೆಚ್ಚು ಮಾತನಾಡುವುದಿಲ್ಲ ಎಂದು ಸಿ ಟಿ ರವಿ ಹೇಳಿದ್ದಾರೆ.

ಇನ್ನೂ ಲೋಕಸಭಾ ಚುನಾವಣೆಗೆ ಜೆಡಿಎಸ್ ಜೊತೆಗಿನ ಮೈತ್ರಿ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಲೋಕಸಭಾ ಚುನಾವಣೆಗೆ ಜೆಡಿಎಸ್ ಜೊತೆಗಿನ ಮೈತ್ರಿ ಬಗ್ಗೆಯೂ ಇನ್ನೂ ಅಧಿಕೃತ ಮಾಹಿತಿ ಇಲ್ಲ ಎಂದು ಹೇಳಿದ ಅವರು, ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಎಚ್.ಡಿ.ಕುಮಾರಸ್ವಾಮಿ ಆಡಿದ ಮಾತುಗಳನ್ನೂ ಕೇಳಿದ್ದೇನೆ. ಆದರೆ, ಈ ಕುರಿತು ಇನ್ನೂ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ ಎಂದು ಹೇಳಿದರು.
ಸರ್ಕಾರ ರಚನೆಯಾಗಿ ಮೂರು ತಿಂಗಳಾದ್ರೂ ವಿಪಕ್ಷನಾಯಕನ ಆಯ್ಕೆಯಲ್ಲಿ ವಿಳಂಬದ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ವಿಪಕ್ಷ ನಾಯಕನ ಆಯ್ಕೆ ವಿಚಾರದಲ್ಲಿ ಯಾಕೆ ವಿಳಂಬವಾಗುತ್ತಿದೆ ಎಂಬುದು ಸ್ಪಷ್ಟವಿಲ್ಲ. ಆದರೆ, ಕಾರಣವಿಲ್ಲದೇ ಕೇಂದ್ರದ ನಾಯಕರು ವಿಳಂಬ ಮಾಡುತ್ತಿಲ್ಲ ಎಂದು ಹೇಳಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗಿ ಬರೋಬ್ಬರಿ ಮೂರು ತಿಂಗಳು ಪೂರೈಸಿದ್ದು, ವಿಪಕ್ಷ ನಾಯಕನ ಆಯ್ಕೆ ಹಾಗೂ ರಾಜ್ಯಾಧ್ಯಕ್ಷ ಬದಲಾವಣೆ ಕುರಿತು ಬಿಜೆಪಿ ಹೈಕಮಾಂಡ್ ವಿಳಂಬ ಮಾಡುತ್ತಿರುವ ಬಗ್ಗೆ ರಾಜ್ಯ ಬಿಜೆಪಿ ನಾಯಕರಲ್ಲಿ ಹಲವು ಪ್ರಶ್ನೆಗಳು ಮೂಡಿವೆ. ಈಗಾಗಲೋ ಲೋಕಸಭಾ ಚುನಾವಣೆಯ ದೃಷ್ಠಿಯಿಂದಾಗಿ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರ ಅನಿವಾರ್ಯತೆ ರಾಜ್ಯ ಬಿಜೆಪಿ ಗೆ ಅನಿವಾರ್ಯ ಎಂಬುದು ಬಿಜೆಪಿ ಹೈಕಮಾಂಡ್ ಗೆ ತಿಳಿದಿದೆ ಎನ್ನಲಾಗಿದೆ.
ಇನ್ನೂ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ಲಿಂಗಾಯತ ನಾಯಕ ಬಿ.ಎಸ್. ಯಡಿಯೂರಪ್ಪ ತಮ್ಮ ಪುತ್ರ ಬಿ.ವೈ. ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಮಾಡಲು ಪಟ್ಟು ಹಿಡಿದಿದ್ದಾರೆ ಎಂಬ ಮಾತು ಕೇಳಿ ಬಂದಿದ್ದು, ಅಲ್ಲದೇ ಹೈಕಮಾಂಡ್ ಸಹ ರಾಜ್ಯಾಧ್ಯಕ್ಷ ಆಯ್ಕೆಯಲ್ಲಿ ವಿಳಂಬ ಮಾಡುತ್ತಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.












Click it and Unblock the Notifications