ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಪತ್ರ ನಕಲಿ ಎಂದ ಸಿದ್ದರಾಮಯ್ಯ.! ಆ ಪತ್ರದಲ್ಲಿ ಏನಿದೆ.?

ನನ್ನ ಮತ್ತು ಕೆಪಿಸಿಸಿ ಅಧ್ಯಕ್ಷರ ಸಂಬಂಧವನ್ನು ಕೆಡಿಸುವ ದುರುದ್ದೇಶದಿಂದಲೇ ಯಾರೋ ಕಿಡಿಗೇಡಿಗಳು ಈ ಕೃತ್ಯ ನಡೆಸಿದ್ದಾರೆ. ಈ ಪತ್ರಕ್ಕೂ ನನಗೂ ಸಂಬಂಧ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರು,ಫೆಬ್ರವರಿ2: ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬರೆದಿದ್ದಾರೆ ಎನ್ನಲಾಗಿರುವ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಆದರೆ ಈ ಪತ್ರ ನಕಲಿ ಎಂದು ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಆ ಪತ್ರಕ್ಕೂ ನನಗೂ ಸಂಬಂಧ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಈ ಕುರಿತಾಗಿ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದು, ನನ್ನ ಹೆಸರನ್ನು ದುರ್ಬಳಕೆ ಮಾಡಿಕೊಂಡ ನಕಲಿ ಪತ್ರವೊಂದು ಹರಿದಾಡುತ್ತಿದೆ. ನನ್ನ ಮತ್ತು ಕೆಪಿಸಿಸಿ ಅಧ್ಯಕ್ಷರ ಸಂಬಂಧವನ್ನು ಕೆಡಿಸುವ ದುರುದ್ದೇಶದಿಂದಲೇ ಯಾರೋ ಕಿಡಿಗೇಡಿಗಳು ಈ ಕೃತ್ಯ ನಡೆಸಿದ್ದಾರೆ.ಈ ಪತ್ರಕ್ಕೂ ನನಗೂ ಸಂಬಂಧ ಇಲ್ಲ ಎಂದು ಸ್ಪಷ್ಟಪಡಿಸುತ್ತಿದ್ದೇನೆ ಎಂದಿದ್ದಾರೆ.

The letter Circulating On Social Media Is Fake Says Siddaramaiah

ಮುಂದಿನ ಚುನಾವಣೆಯಲ್ಲಿ ಗೆಲುವಿನ ಹಾದಿಯಲ್ಲಿರುವ ನಮ್ಮ‌ ಪಕ್ಷದ ಬಗ್ಗೆ ಕಾರ್ಯಕರ್ತರಲ್ಲಿ ಗೊಂದಲ ಮೂಡಿಸುವ ಉದ್ದೇಶದಿಂದಲೇ ಈ ಖೊಟ್ಟಿ ಪತ್ರವನ್ನು ಹರಿಯಬಿಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಈ ಬಗ್ಗೆ ನಾನು ಪೋಲಿಸರಿಗೆ ದೂರು ನೀಡಲಿದ್ದು, ಈ ದುಷ್ಕೃತ್ಯದ ಹಿಂದಿನ ದುರುಳರನ್ನು ಪತ್ತೆ ಹಚ್ಚಿ ಶಿಕ್ಷೆಗೊಳಪಡಿಸುತ್ತಾರೆಂದು ನಂಬಿದ್ದೇನೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ನಲ್ಲಿ ಉಲ್ಲೇಖ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+