ಕಾಂಗ್ರೆಸ್ ಕಾರ್ಯಕರ್ತರಿಗೆ ಗುಡ್‌ನ್ಯೂಸ್; ನಿಗಮ ಮಂಡಳಿ ಪಟ್ಟಿ ರೆಡಿ

ಬೆಂಗಳೂರು,ಜನವರಿ 01: ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನವನ್ನ ಗೆಲ್ಲುವ ಗುರಿ ಹಾಕಿಕೊಂಡಿರುವ ಕಾಂಗ್ರೆಸ್‌ ನಿಗಮ ಮಂಡಳಿಯಲ್ಲಿ ಈ ಬಾರೀ ಶಾಸಕರಿಗೆ ಹಾಗೂ ಕಾರ್ಯಕರ್ತರಿಗೆ ಅವಕಾಶವನ್ನ ನೀಡಲು ಕಾಂಗ್ರೆಸ್‌ ಹೈಕಮಾಂಡ್‌ ಚಿಂತನೆ ನಡೆಸಿದೆ.

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ನಮ್ಮ ಸರ್ಕಾರ ಅಧಿಕಾರಕ್ಕೆ ಬರುವಲ್ಲಿ ಕಾರ್ಯಕರ್ತರ ಶ್ರಮ ಬಹಳಷ್ಟಿದೆ. ಹೀಗಾಗಿ ಅವರಿಗೂ ನಿಗಮ ಹುದ್ದೆ ಸ್ಥಾನ ಮಾನ ನೀಡಲು ಪಟ್ಟಿ ಮಾಡ್ತಿದ್ದೇವೆ. ನಾವು ಮೊದಲ ಹಂತದಲ್ಲಿ ಶಾಸಕರಿಗೆ ನಿಗಮ ಮಂಡಳಿಗಳ ಅಧ್ಯಕ್ಷ ಹುದ್ದೆ ನೀಡುವ ಬಗ್ಗೆ ಯೋಚಿಸಿದ್ದೆವು. ಆದರೆ ಕಾರ್ಯಕರ್ತರಿಗೂ ಸ್ಥಾನ ನೀಡಲು ಹೈಕಮಾಂಡ್‌ ಸೂಚಿಸಿದೆ. ಹೀಗಾಗಿ ಅವರ ಪಟ್ಟಿ ಸಿದ್ಧಪಡಿಸುತ್ತಿದ್ದೇವೆ ಎಂದು ಹೇಳಿದರು.

The List Is Ready To Give Corporation Board Post Says CM Siddaramaiah

ಜನವರಿ 4 ರಂದು ದೆಹಲಿಗೆ ಬರುವಂತೆ ನಮ್ಮ ನಾಯಕರು ಕರೆದಿದ್ದಾರೆ. ನಾವು ತೆರಳುತ್ತಿದ್ದೇವೆ. ಮುಂಬರುವ ಲೋಕಸಭಾ ಚುನಾವಣೆ ಸಂಬಂಧ ಚರ್ಚೆಯಾಗುವ ನಿರೀಕ್ಷೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ ಅವರು ನಿಗಮ ಮಂಡಳಿಯ ಸ್ಥಾನಮಾನಕ್ಕೆ ಕೇವಲ ಶಾಸಕರನ್ನು ಪರಿಗಣಿಸಲು ಮುತುವರ್ಜಿ ವಹಿಸುತ್ತಿರುವುದು ಕಂಡು ಬರುತ್ತಿರುವುದು ಕಾರ್ಯಕರ್ತರ ಅಸಮಾಧಾನಕ್ಕೆ ಕಾರಣವಾಗಿದೆ. ಹೀಗಾಗಿ ಸರ್ಕಾರ ಮತ್ತು ಪಕ್ಷವು ನಿಗಮ ಮಂಡಳಿ ಸ್ಥಾನಮಾನದಲ್ಲಿ ಕಾರ್ಯಕರ್ತರಿಗೆ ಈ ಬಾರೀ ಅವಕಾಶವನ್ನ ನೀಡಲು ಮುಂದಾಗಿದೆ. ಏಕೆಂದರೆ, ನಿಗಮ ಮಂಡಳಿಯಲ್ಲಿ ಪಕ್ಷ ಕಟ್ಟಿ ಬೆಳೆಸಿದ ಕಾರ್ಯಕರ್ತರಿಗೆ ಯಾವುದೇ ಸ್ಥಾನಮಾನ ಸಿಗದಿದ್ದರೇ ಅದು ಮುಂದಿನ ಲೋಕಸಭಾ ಚುನಾವಣೆಯ ಮೇಲೂ ಪರಿಣಾಮ ಬೀರಲಿದೆ ಎಂದು ಕಾಂಗ್ರೆಸ್‌ ನಾಯಕರು ಶಾಸಕರಿಗೂ ಹಾಗೂ ಕಾರ್ಯಕರ್ತರಿಗೆ ನಿಗಮ ಮಂಡಳಿ ಸ್ಥಾನ ನೀಡಲು ಮುಂದಾಗಿದೆ.

ಜ.4 ರಂದು ಸಿಎಂ ಹಾಗೂ ಡಿಸಿಎಂ ದೆಹಲಿಗೆ: ಪರಮೇಶ್ವರ್‌ ಹೇಳಿದ್ದೇನು?

ಲೋಕಸಭಾ ಚುನಾವಣೆ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಕೆಲ ಮಹತ್ವಪೂರ್ಣ ವಿಷಯಗಳನ್ನು ಚರ್ಚಿಸಲು ಮಲ್ಲಿಕಾರ್ಜುನ ಖರ್ಗೆ ನೇತೃತ್ವದ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಯನ್ನು ದೆಹಲಿಗೆ ಬರುವಂತೆ ಹೇಳಿದ್ದಾರೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಹೇಳಿದರು. ಇದು ಮೊದಲಿನಿಂದಲೂ ನಡೆದುಕೊಂಡು ಬಂದಿರುವ ಪದ್ಧತಿ, ಚುನಾವಣಾ ಹತ್ತಿರ ಬಂದಾಗ, ಸಂಭಾವ್ಯ ಅಭ್ಯರ್ಥಿಗಳ ಮಾಹಿತಿ ಪಡೆಯಲು ಚುನಾವಣಾ ಸಿದ್ಧತೆಗಳ ಬಗ್ಗೆ ಚರ್ಚೆ ಮಾಡಲು ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದರೆ, ಅಲ್ಲಿನ ಮುಖ್ಯಮಂತ್ರಿಯನ್ನು ಎಐಸಿಸಿ ನಡೆಸುವ ಅಧಿಕೃತ ಸಭೆಗೆ ಕರೆಸಲಾಗುತ್ತದೆ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+