ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಕುರಿತು ಸಿದ್ದರಾಮಯ್ಯ ಏನಂದ್ರು?
ಬೀದರ್, ಮಾರ್ಚ್ 07 : ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಇನ್ನೊಂದು 2-3 ದಿನಗಳಲ್ಲಿ ಸಿದ್ಧವಾಗಲಿದೆ. ಇಂದು ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ವಿಷಯ ಚರ್ಚೆ ಆಗಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ರಾಮೇಶ್ವರ ಕಫೆ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಬಂಧನವಾಗಿಲ್ಲದಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಪೊಲೀಸರು ಆರೋಪಿಯನ್ನು ಹುಡುಕುತ್ತಿದ್ದಾರೆ. ಎನ್. ಎಸ್. ಜಿ ಹಾಗೂ ಸಿಸಿಬಿ ಎರಡೂ ಹುಡುಕಾಟ ಕೈಗೊಂಡಿದೆ ಎಂದರು. ಸುಳಿವುಗಳು ದೊರೆತಿದ್ದು, ತನಿಖೆ ಜಾರಿಯಲ್ಲಿದೆ ಎಂದರು. ಬಾಕಿ ಇರುವ ಕಾಮಗಾರಿಗಳ ಬಿಲ್ಲುಗಳ ಪವತಿಗಾಗಿ 50 ಕೋಟಿ ರೂ.ಗಳನ್ನು ಜಿಲ್ಲಾಧಿಕಾರಿ ಗಳಿಗೆ ಒದಗಿಸಲಾಗಿದೆ. ಅಗತ್ಯವಿದ್ದರೆ ಇನ್ನೂ ಹೆಚ್ಚಿನ ಹಣ ಒದಗಿಸಲಾಗುವುದು ಎಂದರು.

ರಾಜ್ಯದಲ್ಲಿ ದಲಿತ ಸಿಎಂ ಆಗಬೇಕು ಎಂದು ಸಮಾಜ ಕಲ್ಯಾಣ ಸಚಿವ ಡಾ: ಹೆಚ್.ಸಿ.ಮಹದೇವಪ್ಪ ಅವರ ಹೇಳಿಕೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹೇಳಿದ ಮಾತನ್ನು ಪುನರುಚ್ಚರಿಸಿದ್ದಾರೆ ಎಂದ ಅವರು, ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕನೆಂದು ಘೋಷಿಸಿದ ಚಾರಿತ್ರಿಕ ಸಂಗತಿಗಾಗಿ 160 ಮಂದಿ ಶರಣ ಸ್ವಾಮೀಜಿಗಳು, ಗುರುಗಳು ಹಾಗೂ ವೀರಶೈವ- ಲಿಂಗಾಯತ ಮಠಾಧೀಶರ ನೇತೃತ್ವದಲ್ಲಿ ಮುಖ್ಯಮಂತ್ರಿಗಳಿಗೆ ಅಭೂತಪೂರ್ವ ಸನ್ಮಾನ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವಗುರು ಬಸವಣ್ಣ ಅವರನ್ನು ಕರ್ನಾಟಕದ ಸಾಂಸ್ಕøತಿಕ ನಾಯಕ ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ ಬಸವಕಲ್ಯಾಣದಲ್ಲಿ ಬೃಹತ್ ಸನ್ಮಾನ ಸ್ವೀಕರಿಸಿದರು. ವಿಶ್ವ ಬಸವ ಧರ್ಮ ಟ್ರಸ್ಟ್, ಅನುಭವ ಮಂಟಪ - ಬಸವಕಲ್ಯಾಣ, ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಹಾಗೂ ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ವತಿಯಿಂದ ಮುಖ್ಯಮಂತ್ರಿಗಳಿಗೆ ಸನ್ಮಾನಿಸಲಾಯಿತು.
ಹುಬ್ಬಳ್ಳಿಯ ಮೂರುಸಾವಿರ ಮಠದ ಶ್ರೀ ಜಗದ್ಗುರು ಗುರುಸಿದ್ದರಾಜಯೋಗೀಂದ್ರ ಮಹಾಸ್ವಾಮೀಜಿ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ವಹಿಸಿದ್ದರು. ಬಸವಕಲ್ಯಾಣ ಅನುಭವ ಮಂಟಪದ ವಿಶ್ವ ಬಸವ ಧರ್ಮ ಟ್ರಸ್ಟ್‍ನ ಅಧ್ಯಕ್ಷರಾದ ಶ್ರೀ ನಾಡೋಜ ಡಾ|| ಬಸವಲಿಂಗ ಪಟ್ಟದೇವರು ಮತ್ತು 150 ಕ್ಕೂ ಹೆಚ್ಚು ಶರಣಗುರುಗಳು, ಸ್ವಾಮೀಜಿಗಳು ಉಪಸ್ಥಿತರಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹರಸಿದರು.
ಕಾರ್ಯಕ್ರಮವನ್ನು ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರು ಹಾಗೂ ಶಾಸಕರಾದ ಡಾ. ಶಾಮನೂರು ಶಿವಶಂಕರಪ್ಪ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ, ಸಚಿವರು ಮತ್ತು ಅಖಿಲ ಭಾರತ ವೀರಶೈವ ಮಹಾಸಭಾದ ಮಹಾಪ್ರಧಾನ ಕಾರ್ಯದರ್ಶಿಗಳಾದ ಈಶ್ವರ್ ಖಂಡ್ರೆ ಅವರು ವಹಿಸಿದ್ದರು.












Click it and Unblock the Notifications