ಶುಕ್ರವಾರ ಜೆಡಿಎಸ್‌ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಾಧ್ಯತೆ

ಬೆಂಗಳೂರು, ಡಿಸೆಂಬರ್‌ 16: ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಶುಕ್ರವಾರ ಬಿಡುಗಡೆ ಮಾಡುವ ಸಾಧ್ಯತೆ ಇದೆ.

ಕೋಲಾರದಲ್ಲಿ ಪಕ್ಷದ ಪಂಚರತ್ನ ಯಾತ್ರೆ ಉದ್ಘಾಟನೆ ವೇಳೆ ಪಟ್ಟಿ ಬಿಡುಗಡೆ ಮಾಡಬೇಕಿದ್ದ ವೇಳಾಪಟ್ಟಿಯನ್ನು ಮುಂದೂಡಲಾಗಿದ್ದು, ಶುಕ್ರವಾರ ಬಿಡುಗಡೆ ಮಾಡಲಾಗುವುದು ಎನ್ನಲಾಗಿದೆ. ಟಿಕೆಟ್‌ ಆಕಾಂಕ್ಷಿಗಳು ಹಾಗೂ ಶಾಸಕರನ್ನು ಉದ್ದೇಶಿಸಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ, ಮಾಗಡಿಯಲ್ಲಿ ಪಂಚರತ್ನ ಯಾತ್ರೆಗೆ ಚಾಲನೆ ನೀಡುವ ಮುನ್ನ ಪಟ್ಟಿ ಬಿಡುಗಡೆ ಮಾಡುವುದಾಗಿ ಹೇಳಿದ್ದರು.

ಮಾಗಡಿಯಲ್ಲಿ ಪಂಚರತ್ನ ಯಾತ್ರೆ ಆರಂಭಿಸುವ ಮುನ್ನ ಮೊದಲ ಪಟ್ಟಿಯಲ್ಲಿ 97ರಿಂದ 100 ಅಭ್ಯರ್ಥಿಗಳ ಹೆಸರನ್ನು ಬಿಡುಗಡೆ ಮಾಡುತ್ತೇವೆ. ಚುನಾವಣೆಯಲ್ಲಿ ಗೆಲ್ಲಲು ಟಿಕೆಟ್ ಆಕಾಂಕ್ಷಿಗಳು ಶ್ರದ್ಧೆಯಿಂದ ಕೆಲಸ ಮಾಡಬೇಕು. ಸ್ಪರ್ಧೆಗಾಗಿ ಅವರು ಚುನಾವಣೆಗೆ ಸ್ಪರ್ಧಿಸಬಾರದು. ಅವರು ಚುನಾವಣೆಯ ಬಗ್ಗೆ ಗಂಭೀರವಾಗಿರದಿದ್ದರೆ, ಅವರನ್ನು ಬದಲಾಯಿಸಲು ನಾವು ಹಿಂಜರಿಯುವುದಿಲ್ಲ ಎಂದು ಎಚ್ಚರಿಸಿದರು.

The list of JDS candidates is likely to be released on Friday

ಪಂಚರತ್ನ ಯಾತ್ರೆ ಮುಗಿಸಿರುವ 19 ಕ್ಷೇತ್ರಗಳ ಪೈಕಿ 17ರಲ್ಲಿ ಗೆಲುವು ಸಾಧಿಸುವ ವಿಶ್ವಾಸವಿದೆ. ತಮ್ಮ ಪುತ್ರ ನಿಖಿಲ್ ಅವರನ್ನು ಚುನಾವಣೆಯಲ್ಲಿ ಕಣಕ್ಕಿಳಿಸುವುದನ್ನು ನಿರಾಕರಿಸದ ಕುಮಾರಸ್ವಾಮಿ, ನಿಖಿಲ್ ರಾಜಕೀಯ ಬದುಕನ್ನು ಮತದಾರರೇ ನಿರ್ಧರಿಸುತ್ತಾರೆ. ನಿಖಿಲ್ ಕುಮಾರಸ್ವಾಮಿ ಅವರು ಈಗಾಗಲೇ ಸಕ್ರಿಯ ರಾಜಕಾರಣದಲ್ಲಿದ್ದಾರೆ. ಅವರ ಹೆಸರನ್ನು ಘೋಷಣೆ ಮಾಡುವುದಕ್ಕೆ ನನಗೆ ಯಾವುದೇ ಅಂಜಿಕೆ ಇಲ್ಲ. ನನಗೆ ನಿಖಿಲ್‌ ಅವರನ್ನು ಹೇಗಪ್ಪ ದಡ ಸೇರಿಸೋದು ಎಂಬ ಚಿಂತೆ ಇಲ್ಲ. ನನಗೆ ಇರೋದು ನಾಡಿನ ಜನರ ಚಿಂತೆ ಎಂದರು.

The list of JDS candidates is likely to be released on Friday

ಪಕ್ಷದ ಕಚೇರಿಯಲ್ಲಿ ಶಾಸಕರು ಹಾಗೂ ಸಂಭವನೀಯ ಅಭ್ಯರ್ಥಿಗಳ ಸಭೆ ನಡೆಸಲಾಯಿತು. ಚುನಾವಣೆ ನಡೆಸುವ ಬಗೆ, ಸಾಮಾಜಿಕ ಜಾಲತಾಣಗಳ ಬಳಕೆ, ಪಂಚರತ್ನಗಳ ಪ್ರಚಾರ ಸೇರಿದಂತೆ ಇನ್ನು ಚುನಾವಣೆ ತನಕ ಹೇಗೆಲ್ಲಾ ಕೆಲಸ ಮಾಡಬೇಕು ಎಂಬ ಬಗ್ಗೆ ಕೆಲ ಮಹತ್ವದ ಮಾಹಿತಿ ಹಂಚಿಕೊಂಡಿದ್ದೇನೆ. ನಿಧಾನ ಗತಿಯಲ್ಲಿ ಕೆಲಸ ಮಾಡುತ್ತಿರುವ ಕೆಲವರಿಗೆ ಸ್ವಲ್ಪ ಖಾರವಾಗಿಯೇ ಕಿವಿಮಾತು ಹೇಳಿದ್ದೇನೆ ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+