ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜೂನ್ 21ರವರೆಗೆ ರಾಜ್ಯದಲ್ಲಿ ಲಾಕ್‌ಡೌನ್ ಮುಂದುವರಿಕೆ: ಸಿಎಂ ಯಡಿಯೂರಪ್ಪ!

|
Google Oneindia Kannada News

ಬೆಂಗಳೂರು, ಜೂ. 10: ಇಡೀ ರಾಜ್ಯಾದ್ಯಂತ ಮತ್ತೊಂದು ವಾರದವರೆಗೆ ಲಾಕ್‌ಡೌನ್ ಮುಂದುವರೆಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀರ್ಮಾನ ತೆಗೆದುಕೊಂಡಿದ್ದಾರೆ. ಜೂನ್ 14ಕ್ಕೆ ಕೊನೆಯಾಗಬೇಕಿದ್ದ ಲಾಕ್‌ಡೌನ್‌ ಮಾರ್ಗಸೂಚಿಯಲ್ಲಿ ಕೆಲ ಸಡಿಲಿಕೆಗಳೊಂದಿಗೆ ರಾಜ್ಯಾದ್ಯಂತ ಜೂನ್ 21ರವರೆಗೆ ಲಾಕ್‌ಡೌನ್ ಮುಂದುವರೆಯಲಿದೆ. ಈ ತೀರ್ಮಾನ ತೆಗೆದುಕೊಳ್ಳುವ ಮೊದಲು ತಜ್ಞರೊಂದಿಗೆ ಸುದೀರ್ಘವಾಗಿ ಎರಡು ಗಂಟೆಗಳ ಕಾಲ ಯಡಿಯೂರಪ್ಪ ಅವರು ಸುದೀರ್ಘ ಚರ್ಚೆ ನಡೆಸಿದ ಬಳಿಕ ಈ ನಿರ್ಧಾರಕ್ಕೆ ಬರಲಾಗಿದೆ.

ಕೋವಿಡ್ ನಿಯಂತ್ರಣದ ಕುರಿತು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಹಾಗೂ ತಜ್ಞರೊಂದಿಗೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಯಿತು. ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ ಅವರು, "ಕೋವಿಡ್ ಪಾಸಿಟಿವಿಟಿ ದರ ಹೆಚ್ಚಿರುವ 11 ಜಿಲ್ಲೆಗಳಲ್ಲಿ ಲಾಕ್‌ಡೌನ್ ಮಾರ್ಗಸೂಚಿಗಳಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ, ಉಳಿದ ಜಿಲ್ಲೆಗಳಲ್ಲಿ ಕೆಲ ರಿಯಾಯತಿಗಳೊಂದಿಗೆ ಲಾಕ್‌ಡೌನ್ ಮುಂದುವರೆಸಲಾಗುತ್ತದೆ" ಎಂದು ಹೇಳಿದ್ದಾರೆ.

The lockdown will continue until the 21st of June in Karnataka State

Recommended Video

ರಾಜ್ಯದ ಬೊಕ್ಕಸ ತುಂಬಿಸಲು ಮಧ್ಯಪ್ರಿಯರಿಗೆ ಗುಡ್ ನ್ಯೂಸ್ ಕೊಟ್ಟ ಸಿಎಂ | Oneindia Kannada

ಇಡೀ ರಾಜ್ಯಾದ್ಯಂತ ಕೊರೊನಾ ವೈರಸ್ ಪಾಸಿಟಿವಿಟಿ ದರ ಇವತ್ತು (ಜೂ. 10) ಶೇಕಡಾ 6.58ರಷ್ಟು ಬಂದಿದೆ. ಹೀಗಾಗಿ ಪಾಸಿಟಿವಿಟಿ ದರ ಶೇಕಡಾ 5ಕ್ಕಿಂತ ಕಡಿಮೆಯಾದ ಬಳಿಕ ಅನ್‌ಲಾಕ್ ಪ್ರಕ್ರಿಯೆ ಜಾರಿ ಮಾಡಲು ಸರ್ಕಾರ ಮೊದಲೇ ತೀರ್ಮಾನ ಮಾಡಿತ್ತು. ಆ ಹಿನ್ನೆಲೆಯಲ್ಲಿ ಮತ್ತೊಂದು ವಾರ ಲಾಕ್‌ಡೌನ್ ಮುಂದುವರೆಸಲು ಸರ್ಕಾರ ತೀರ್ಮಾನ ಮಾಡಿದ್ದು, ನಂತರ ಅನ್‌ಲಾಕ್ ಪ್ರಕ್ರಿಯೆ ಆರಂಭಿಸಲು ಇವತ್ತು ನಡೆಸ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ.

English summary
Chief Minister B.S. Yediyurappa has taken a decision. The lockdown will continue until the 21st of June, with some relaxations in the lockdown guidelines that should end on June 14th.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X