ಮೇ 30ರವರೆಗೂ ಕರ್ನಾಟಕದಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ
ಬೆಂಗಳೂರು, ಮೇ 25: ಕರ್ನಾಟಕದಲ್ಲಿ ಮೇ 30ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
Recommended Video
ಭಾನುವಾರ ಮಧ್ಯಾಹ್ನಬೆಂಗಳೂರಿನಲ್ಲಿ ಭಾರಿ ಮಳೆ ಸುರಿದು ಅನಾಹುತವನ್ನೇ ಸೃಷ್ಟಿ ಮಾಡಿದೆ. 150ಕ್ಕೂ ಹೆಚ್ಚು ಮರಗಳು ಧರೆಗುರುಳಿವೆ, ಕರ್ಫ್ಯೂ ಜಾರಿಯಲ್ಲಿದ್ದ ಕಾರಣ ಯಾರೂ ಕೂಡ ಮನೆಯಿಂದ ಆಚೆ ಬಂದಿರಲಿಲ್ಲ, ಹೀಗಾಗಿ ಮತ್ತಷ್ಟು ಅನಾಹುತವಾಗುವುದನ್ನು ತಪ್ಪಿಸಿದಂತಾಗಿದೆ.
ಮೇ 25-26 ರಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಮೇ 27,28,29 ರಂದು ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗ ಹಾಗೂ ಮೈಸೂರಿನಲ್ಲಿ ಧಾರಾಕಾರ ಮಳೆ ಸುರಿಯಲಿದೆ.

ಭಾನುವಾರ ಸುರಿದ ಮಳೆಗೆ ಬೆಂಗಳೂರಿನ ಮತ್ತಿಕೆರೆ, ಎನ್‌ಆರ್ ಕಾಲೊನಿ, ಪದ್ಮನಾಭನಗರ ಸೇರಿದಂತೆ ಹಲವೆಡೆ ಮರ ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿದ್ದವು.
ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 36 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಿದ್ದು, ಮೇ 30ರವರೆಗೆ ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯಾಗಲಿದೆ.ನಗರದಲ್ಲಿ ಭಾನುವಾರ ಸಂಜೆ ಸುರಿದ ಮಳೆಗೆ 150ಕ್ಕೂ ಹೆಚ್ಚು ಮರಗಳು ಧರೆಗುರುಳಿವೆ.
ಮಲ್ಲೇಶ್ವರ, ಶ್ರೀನಗರ, ಮೆಜೆಸ್ಟಿಕ್, ಗಿರಿನಗರ, ಕೆಂಗೇರಿ, ಮೈಸೂರು ರಸ್ತೆ, ಜಯನಗರ, ಉತ್ತರಹಳ್ಳಿ, ಪದ್ಮನಾಭನಗರ ಸೇರಿದಂತೆ ಬಹುತೇಕ ಕಡೆ ಭಾರಿ ಮಳೆಯಾಗಿದೆ. ಬಿಬಿಎಂಪಿಗೆ ಸುಮಾರು 150ಕ್ಕೂ ಹೆಚ್ಚು ಮರಗಳು ಬಿದ್ದಿರುವ ಬಗ್ಗೆ ದೂರುಗಳು ಬಂದಿವೆ. ಎನ್‌ಆರ್ ಕಾಲೊನಿ, ಗವಿಪುರ, ಜೆಪಿನಗರ, ಇಪಿಐಪಿ ರಸ್ತೆ, ಮಹಾದೇವಪುರ, ಪುಲಕೇಶಿನಗರದಲ್ಲಿ ಸಾಕಷ್ಟು ಮರಗಳು ಬಿದ್ದಿವೆ.
150ಕ್ಕೂ ಹೆಚ್ಚು ದೂರುಗಳು ಬಿಬಿಎಂಪಿಗೆ ಬಂದಿವೆ ಎಂದು ಆಯುಕ್ತರು ಬರೆದುಕೊಂಡಿದ್ದಾರೆ. ನಾಗರಿಕರು ಮಾಡಿರುವ ಎಲ್ಲಾ ಕರೆಗಳಿಗೂ ಬಿಬಿಎಂಪಿ ಸ್ಪಂದಿಸುತ್ತದೆ ಎಂದು ಹೇಳಿದ್ದಾರೆ.












Click it and Unblock the Notifications