ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶನಿವಾರ ರಾಜ್ಯಾದ್ಯಂತ ಭಾರೀ ಮಳೆ ಮುನ್ಸೂಚನೆ ಕೊಟ್ಟ ಹವಾಮಾನ ಇಲಾಖೆ

|
Google Oneindia Kannada News

ಬೆಂಗಳೂರು, ಜುಲೈ 15; ರಾಜ್ಯಾದ್ಯಂತ ಸತತವಾಗಿ ಸುರಿಯುತ್ತಿರುವ ಮಳೆ ಹಲವು ಜಿಲ್ಲೆಗಳಲ್ಲಿ ಶುಕ್ರವಾರ ಕೊಂಚ ಬಿಡುವು ನೀಡಿತ್ತು. ಶನಿವಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಕಳೆದ ಒಂದು ವಾರದಿಂದ ಬೆಂಗಳೂರು, ಮೈಸೂರು, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ ಜಿಲ್ಲೆಯಲ್ಲಿ ಸತತವಾಗಿ ಮಳೆಯಾಗಿತ್ತು. ಶುಕ್ರವಾರ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಜನತೆಗೆ ಸೂರ್ಯನ ದರ್ಶನವಾಗಿದೆ. ಆದರೆ ಶನಿವಾರದಿಂದ ಮತ್ತೆ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದ ಕರಾವಳಿ, ಮಲೆನಾಡಲ್ಲಿ 5 ದಿನ ಭಾರೀ ಮಳೆಕರ್ನಾಟಕದ ಕರಾವಳಿ, ಮಲೆನಾಡಲ್ಲಿ 5 ದಿನ ಭಾರೀ ಮಳೆ

ಉತ್ತರ ಕರ್ನಾಟಕದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ತುಂತುರು ಮಳೆಯಾಗಲಿದೆ. ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಹಲವು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಹೇಳಿದೆ. ಶುಕ್ರವಾರ ನಗರದಲ್ಲಿ ಗರಿಷ್ಠ 27 ಮತ್ತು ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.

ಕರ್ನಾಟಕದಲ್ಲಿ ಈವರೆಗೆ ಮಳೆಯಿಂದ ಸಂಭವಿಸಿದ ಅನಾಹುತಗಳಲ್ಲಿ ಒಟ್ಟು 32 ಮಂದಿ ಸಾವನ್ನಪ್ಪಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಮಳೆಯಿಂದ ಉಂಟಾದ ಪ್ರವಾಹದಲ್ಲಿ ಐವರು ಕಾಣೆಯಾಗಿದ್ದಾರೆ, ಹಲವು ಪ್ರಕರಣಗಳಲ್ಲಿ 34 ಮಂದಿ ಗಾಯಗೊಂಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

 ಜುಲೈ 19ರವೆರೆಗೆ ರಾಜ್ಯದಲ್ಲಿ ಮಳೆ

ಜುಲೈ 19ರವೆರೆಗೆ ರಾಜ್ಯದಲ್ಲಿ ಮಳೆ

ಕರ್ನಾಟಕದ ವಿವಿಧೆಡೆ ಜುಲೈ 19ರವರೆಗೂ ಭಾರೀ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶನಿವಾರ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ.

ಕರಾವಳಿಯ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಹಲವೆಡೆ ಭಾರೀ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ತೀರದಲ್ಲಿ ಬಿರುಗಾಳಿಯ ವೇಗವು ಪ್ರತಿ ಗಂಟೆಗೆ ಸುಮಾರು 45-55 ಕಿಲೋ ಮೀಟರ್ ಇರಲಿದೆ. ಈ ಹಿನ್ನೆಲೆಯಲ್ಲಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

 ಕರಾವಳಿ ಜಿಲ್ಲೆಗಳಲ್ಲಿ ಮಳೆ ಅಬ್ಬರ

ಕರಾವಳಿ ಜಿಲ್ಲೆಗಳಲ್ಲಿ ಮಳೆ ಅಬ್ಬರ

ಕರಾವಳಿ ಜಿಲ್ಲೆಗಳು ಮಳೆಯ ಅಬ್ಬರಕ್ಕೆ ಸಿಲುಕಿ ತತ್ತರಿಸಿವೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ 355 ಹೆಕ್ಟೇರ್ ಬೆಳೆ ನಾಶವಾಗಿದೆ. ಮಳೆಯಿಂದಾಗಿ 1,062 ಮನೆಗಳಿಗೆ ಹಾನಿಯಾಗಿರುವ ಬಗ್ಗೆ ವರದಿಯಾಗಿದೆ.

ರಾಜ್ಯದ ತೀವ್ರ ನೆರೆ ಪೀಡಿತ ಪ್ರದೇಶಗಳಲ್ಲಿ ಒಟ್ಟು 14 ಪರಿಹಾರ ಶಿಬಿರಗಳನ್ನು ಆರಂಭಿಸಲಾಗಿದೆ. 4 ರಾಷ್ಟ್ರೀಯ ವಿಪತ್ತು ರಕ್ಷಣಾ ತಂಡಗಳು, 4 ರಾಜ್ಯ ವಿಪತ್ತು ರಕ್ಷಣಾ ತಂಡಗಳು ಕಾರ್ಯಾಚರಣೆ ನಡೆಸುತ್ತಿವೆ. ಜುಲೈ ತಿಂಗಳಲ್ಲಿ ನಾಲ್ಕು ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

 ಸಾಂಕ್ರಾಮಿಕ ರೋಗದ ಭಯ

ಸಾಂಕ್ರಾಮಿಕ ರೋಗದ ಭಯ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸತತ ಮಳೆಯಿಂದಾಗಿ ಪ್ರವಾಹ ಉಂಟಾಗಿದೆ. ನೆರೆಯಿಂದ ಕಂಗೆಟ್ಟಿರುವ ಜನತೆಗೆ ಈಗ ಸಾಂಕ್ರಾಮಿಕ ರೋಗದ ಭಯ ಶುರುವಾಗಿದೆ. ಅದರಲ್ಲೂ ಸೊಳ್ಳೆಗಳಿಂದ ಹರಡುವ ರೋಗಗಳು ಸಮುದಾಯದ ಮಟ್ಟದಲ್ಲಿ ಹರಡುವ ಆತಂಕ ಮನೆ ಮಾಡಿದೆ. ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮಳೆ ಅಧಿಕವಾಗಿದ್ದು ಪ್ರವಾಹದ ಪರಿಸ್ಥಿತಿ ಎದುರಾಗಿದೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮಲೇರಿಯಾ, ಡೆಂಘೀ, ಚಿಕನ್‌ ಗುನ್ಯಾ, ಜಪಾನೀಸ್‌ ಎನ್ಸಫಲೈಟಿಸ್‌, ಆನೆಕಾಲು ಮೊದಲಾದ ರೋಗಗಳು ಹರಡುವ ಸಾಧ್ಯತೆ ಹೆಚ್ಚಾಗಿದೆ. ಜಿಲ್ಲಾಡಳಿತವು ಆರೋಗ್ಯ ಇಲಾಖೆಯೊಂದಿಗೆ ಕೈಜೋಡಿಸಿ ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಲು ಸರ್ಕಾರ ಸೂಚನೆ ನೀಡಿದೆ.

 ಜಲಾಶಯಗಳಿಂದ ನೀರು ಹೊರಬಿಡುವ ಆತಂಕ

ಜಲಾಶಯಗಳಿಂದ ನೀರು ಹೊರಬಿಡುವ ಆತಂಕ

ರಾಜ್ಯದ ಹಲವು ಜಲಾಶಯಗಳು ಭರ್ತಿಯಾಗಿದೆ. ಮಹಾರಾಷ್ಟ್ರದಲ್ಲೂ ವಿಪರೀತ ಮಳೆಯಾಗುತ್ತಿದ್ದು ಕೊಯ್ನಾ ಜಲಾಶಯಕ್ಕೆ ದಾಖಲೆ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಜಲಾಶಯ ತುಂಬುತ್ತಿದ್ದಂತೆ ಹೆಚ್ಚಿನ ನೀರನ್ನು ಕರ್ಣಾಟಕಕ್ಕೆ ಹರಿಸಲಾಗುತ್ತದೆ.

ಜಿಲ್ಲಾಧಿಕಾರಿಗಳ ಸಭೆಯಲ್ಲಿ ಈ ಬಗ್ಗೆ ಮಾತನಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಲಾಶಯದ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿರಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಲಾಶಯದಿಂದ ನೀರು ಹೊರಬಿಟ್ಟರೆ ನದಿ ಪಾತ್ರದ ಗ್ರಾಮಗಳು ಮುಳುಗಡೆ ಭೀತಿ ಎದುರಾಗುತ್ತದೆ. ಆದ್ದರಿಂದ ಮೊದಲೇ ಎಚ್ಚರಿಸಿ ನಾಗರಿಕರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಕ್ರಮ ವಹಿಸಲು ಸೂಚನೆ ನೀಡಲಾಗಿದೆ.

Recommended Video

Sri Lanka ಆಟಗಾರ Chamika Karunaratne ಭಾರತ ನಮ್ಮಣ್ಣ ಎಂದಿದ್ದಾರೆ | *International | OneIndia Kannada

English summary
Several districts of North Karnataka will have cloudy weather with showers. Bengaluru city will have partly cloudy weather and moderate rain may occur in many places. The city recorded a maximum temperature of 27 degrees Celsius and a minimum of 19 degrees Celsius on Friday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X