Rain Alert : ರಾಜ್ಯದಲ್ಲಿ ಮುಂದುವರಿದ ಮಳೆರಾಯನ ಆರ್ಭಟ : ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

ಬೆಂಗಳೂರು, ಜೂನ್‌ 19: ಕರ್ನಾಟಕದಾದ್ಯಂತ ಮುಂಗಾರು ಅಬ್ಬರ ಜೋರಾಗಿದೆ. ರಾಜ್ಯದ ಹಲವು ಕಡೆ ಇಂದಿನಿಂದ ಮುಂದಿನ ಮೂರು ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಮುಂದಿನ ಮೂರಯ ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ತಿಳಿಸಿದೆ.

ರಾಜ್ಯದ ವಿವಿಧ ಭಾಗಗಳಲ್ಲಿ ಭರ್ಜರಿ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು. ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಅದೇ ರೀತಿ ಹಾಸನ, ಕೊಡಗು, ಬೆಳಗಾವಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಧಾರವಾಡ. ಹಾವೇರಿ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದಿನಿಂದ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಇನ್ನೂ ಇಂದು ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಒಳನಾಡಿನ ಮಲೆನಾಡು ಜಿಲ್ಲೆಗಳಿಗೆ ಮಾತ್ರ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

The Meteorological Department has said that there will be three days of rain in the state

ಮುಂದಿನ 7 ದಿನಗಳ ಕಾಲ ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದು ಜೋರಾದ ಗಾಳಿಯೊಂದಿಗೆಭಾರಿ ಮಳೆಯಾಗಲಿದೆ. ಜೂನ್ 23 ರಿಂದ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕಳೆದ 15 ದಿನಗಳಿಂದ ಅಬ್ಬರ ಮಳೆಯಾಗಿದ್ದು, ಇದೀಗ ವರುಣಾದೇವ ಕೊಂಚ ಬಿಡುವು ಕೊಟ್ಟಿದ್ದಾನೆ. ಮಲೆ ನಾಡು ಭಾಗ ಹಾಗೂ ಕರಾವಳಿಯಲ್ಲಿ ಮಳೆ ಹೆಚ್ಚಿದ್ದರೂ ಉಳಿದ ಜಿಲ್ಲೆಗಳಲ್ಲಿ ಕಡಿಮೆಯಾಗಲಿದೆ. ಇನ್ನೂ ಜೂನ್ 25ರವರೆಗೆ ಸಾಧಾರಣ ಮಳೆ ಮುಂದುವರೆಯಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಜೂನ್ 25ರವರೆಗೆ ಸಾಧಾರಣ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಬುಧವಾರ ಕೆಲವೆಡೆ ಮಳೆಯಾಗಿದ್ದು, ಗುರುವಾರ ಮುಂಜಾನೆಯಿಂದಲೇ ಮೋಡಕವಿದ ವಾತಾವರಣವಿದ್ದರೂ ಸ್ವಲ್ಪ ಬಿಸಿಲು ಕೂಡ ಇದೆ. ಧರ್ಮಸ್ಥಳ, ಕಾರ್ಕಳ, ಕಳಸ, ಸುಳ್ಯ, ಕಮ್ಮರಡಿ, ಶೃಂಗೇರಿ, ನಾಪೋಕ್ಲು, ಬಂಟವಾಳ, ಸಿದ್ದಾಪುರ, ಪುತ್ತೂರು,ಮಾಣಿ, ಗೇರುಸೊಪ್ಪ, ಶಕ್ತಿನಗರ, ಮುಲ್ಕಿ, ಜಯಪುರ, ಸೋಮವಾರಪೇಟೆ, ಎನ್​ಆರ್​ಪುರ, ಭದ್ರಾವತಿ, ಅಂಕೋಲಾ, ಯಲ್ಲಾಪುರ, ಕುಮಟಾ, ಹಾರಂಗಿ, ಮಂಕಿ, ತರಿಕೆರೆ, ಅರಕಲಗೂಡು, ಹೊನ್ನಾಳಿ, ಶಿವಮೊಗ್ಗ, ಹಾವೇರಿ, ಬೆಳಗಾವಿಯಲ್ಲಿ ಮಳೆಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+