ಮೈಸೂರು ಕಾಗದ ಕಾರ್ಖಾನೆ ಪುನಾರಂಭಕ್ಕೆ ಮುಂದಾದ ಸರ್ಕಾರ
ಬೆಂಗಳೂರು, ಸೆಪ್ಟಂಬರ್ 07: ಒಂದು ಕಾಲದಲ್ಲಿ ಕೈಗಾರಿಕಾ ರಂಗದ ಪ್ರತಿಷ್ಠೆಯ ಸಂಕೇತವಾಗಿದ್ದು ಈಗ ಬೀಗಮುದ್ರೆ ಕಂಡಿರುವ ಭದ್ರಾವತಿಯ ಮೈಸೂರು ಪೇಪರ್ ಮಿಲ್ಸ್ (MPM) ಕಾರ್ಖಾನೆಗೆ ಮರುಜೀವ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಕುರಿತು ಕೈಗಾರಿಕೆ ಇಲಾಖೆ ವ್ಯಾಪ್ತಿಯಲ್ಲಿ ಮಹತ್ವದ ಸಭೆ ಗುರುವಾರ ನಡೆಯಿತು.
ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ ನೇತೃತ್ವದಲ್ಲಿ ಸಭೆ ನಡೆದಿದ್ದು, ಕಾರ್ಖಾನೆ ಸ್ಥಗಿತ ಮತ್ತು ಹಾಲಿ ಸ್ಥಿತಿಗತಿಗಳ ಕುರಿತು ಭದ್ರಾವತಿ ಶಾಸಕ ಬಿ.ಕೆ ಸಂಗಮೇಶ್ವರ ಮತ್ತು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಅವರು ಚರ್ಚಿಸಿದರು.

ಭದ್ರಾವತಿ ಮೈಸೂರು ಪೇಪರ್ ಮಿಲ್ಸ್ (ಕಾಗದ ಕಾರ್ಖಾನೆ) ಉಳಿಸಿಕೊಂಡಿರುವ ಸಾಲದ ಮೊತ್ತ, ವಿದ್ಯುತ್ ಬಿಲ್ ಮತ್ತು ಮುಂದಿನ ಹಾದಿ ಏನಾಗಿರಬೇಕು? ಎಂಬ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅಧ್ಯಕ್ಷತೆಯಲ್ಲಿ ಸಭೆ ನಡೆಸಲು ಸಚಿವರು ಸೂಚಿಸಿದರು. ಈ ಸಭೆಗೆ ಹಣಕಾಸು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಸಭೆಯಲ್ಲಿರುವಂತೆ ಅವರು ತಿಳಿಸಿದರು.
ಕಾರ್ಖಾನೆ ಹಾಲಿ ಪರಿಸ್ಥಿತಿ ಹೇಗಿದೆ?
ಮೈಸೂರು ಸಂಸ್ಥಾನದ ಮಹಾರಾಜರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ದಿವಾನರಾಗಿದ್ದ ಸರ್ ಎಂ ವಿಶ್ವೇಶ್ವರಯ್ಯನವರ ಕನಸಿನ ಕೂಸು ಈ ಮೈಸೂರು ಪೇಪರ್ ಮಿಲ್ಸ್. 1,482 ಕೋಟಿ ರೂಪಾಯಿ ನಷ್ಟದ ಸುಳಿಯಲ್ಲಿದೆ. ಜೊತೆಗೆ 229 ಕೋಟಿ ರೂ.ಗಳಷ್ಟು ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದೆ. ರಾಜ್ಯ ಸರ್ಕಾರ 2010 ರಿಂದ ಈತನಕ 850 ಕೋಟಿ ರೂ. ಸಾಲದ ರೂಪದಲ್ಲಿ ಕೊಡಲಾಗಿದೆ ಎಂದು ಹೇಳಿದರು.

ಈ ಮಧ್ಯೆ ಎಂಪಿಎಂ ಖಾಸಗೀಕರಣಕ್ಕೆ ಯತ್ನ ನಡೆದಿತ್ತು. ಸಂಸ್ಥೆ ಮೇಲೆ ಇರುವ ಆರ್ಥಿಕ ಹೊರೆಯನ್ನು ನಿಭಾಯಿಸಲು ಹಣಕಾಸು ಇಲಾಖೆಯ ಸಹಕಾರ ಬೇಕಾಗುತ್ತದೆ. ಹೀಗಾಗಿ ಅಧಿಕಾರಿಗಳ ಸಭೆ ನಂತರ ಖಾಸಗೀಕರಣದ ರೂಪುರೇಷೆ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಭರವಸೆ ನೀಡಿದರು.
ಕಾರ್ಖಾನೆ ವ್ಯಾಪ್ತಿಯಲ್ಲಿ ಅಕೇಶಿಯಾ, ನೀಲಗಿರಿ, ಬಿದಿರು
ಎಂಪಿಎಂ ವ್ಯಾಪ್ತಿಯಲ್ಲಿ ಸುಮಾರು 23 ಸಾವಿರ ಹೆಕ್ಟೇರ್ ಅರಣ್ಯ ಮತ್ತು ಅರಣ್ಯೇತರ ಭೂಮಿ ಇದ್ದು ಇಲ್ಲಿ ಸದ್ಯಕ್ಕೆ ಅಕೇಶಿಯಾ, ನೀಲಗಿರಿ ಮತ್ತು ಬಿದಿರನ್ನು ಬೆಳೆಯಲಾಗುತ್ತಿದೆ. ಒಂದು ವೇಳೆ ಕಾರ್ಖಾನೆಯನ್ನು ಗುತ್ತಿಗೆ ನೀಡಿದರೂ, ಕಾರ್ಖಾನೆ ಜಾಗದಲ್ಲಿ, ನಿಷೇಧಿಸಿರುವ ನೀಲಿಗಿರಿ ಬೆಳೆಯಲು ಅವಕಾಶ ನೀಡಬಹುದೇ ಎಂಬುದನ್ನೂ ಕೂಲಂಕುಶವಾಗಿ ಪರಿಶೀಲಿಸಬೇಕು ಎಂದು ಸಚಿವರು ವಿವರಿಸಿದರು.
ಇದಲ್ಲದೆ ಕಾಗದ ಕಾರ್ಖಾನೆ ಕೆಲವು ಉದ್ಯೋಗಿಗಳಿಗೆ ಸರ್ಕಾರದ ವಿವಿಧ ಸಂಸ್ಥೆ/ನಿಗಮಗಳಲ್ಲಿ ನೌಕರಿ ಕೊಡಿಸುವ ಕೆಲಸವೂ ಆಗುತ್ತಿದೆ. ಕೆಲವರಿಗೆ ಸ್ವಯಂ ನಿವೃತ್ತಿ ನೀಡಲಾಗಿದೆ. ಜತೆಗೆ ತಾತ್ಕಾಲಿಕ ಆಧಾರದಲ್ಲಿ ಕೆಲಸ ಮಾಡುತ್ತಿರುವ 250 ಫಾರೆಸ್ಟ್ ವಾಚರ್ ಗಳ ವೇತನ ಏರಿಕೆಗೂ ಒಂದು ಪರಿಹಾರ ರೂಪಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶಿಸಿದರು.
ಸಭೆಯಲ್ಲಿ ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಶಿವಮೊಗ್ಗ ಜಿಲ್ಲಾಧಿಕಾರಿ ಮತ್ತು ಎಂಪಿಎಂ ವ್ಯವಸ್ಥಾಪಕ ನಿರ್ದೇಶಕ ಸೆಲ್ವಮಣಿ, ಎಪಿಸಿಸಿಎಫ್ ವನಶ್ರೀ ವಿಪಿನ್ ಸಿಂಗ್, ಚೀಫ್ ಆಪರೇಟಿಂಗ್ ಆಫೀಸರ್ ರವೀಂದ್ರನಾಥ್ ಮುಂತಾದವರು ಭಾಗವಹಿಸಿದ್ದರು.
-
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ












Click it and Unblock the Notifications