ಗುತ್ತಿಗೆದಾರರಿಗೆ 38 ಸಾವಿರ ಕೋಟಿ ಬಾಕಿ ಬಿಲ್ಲುಗಳು ಹಿಂದಿನ ಬಿಜೆಪಿ ಸರ್ಕಾರದ್ದು: ಸಿದ್ದರಾಮಯ್ಯ
ಬೆಂಗಳೂರು: ಗುತ್ತಿಗೆದಾರರಿಗೆ 38 ಸಾವಿರ ಕೋಟಿ ಬಾಕಿ ಇದೆ. ಸರ್ಕಾರ ನಮ್ಮ ಸಮಸ್ಯೆ ಬಗೆಹರಿಸಿಲ್ಲ. ಮಾರ್ಚ್5 ರಂದು ಬೃಹತ್ ಪ್ರತಿಭಟನೆ ಮಾಡ್ತಿದ್ದೇವೆ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಂಜುನಾಥ್ ಅವರು ಎಚ್ಚರಿಕೆ ನೀಡಿದ್ದು, ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದಾರೆ. ಗುತ್ತಿಗೆದಾರರ ಬಾಕಿ ಬಿಲ್ಲುಗಳು ಹಿಂದಿನ ಬಿಜೆಪಿ ಸರ್ಕಾರದವರು ಬಾಕಿ ಬಿಲ್ಲುಗಳನ್ನು ಪಾವತಿಸದೇ ಬಿಟ್ಟುಹೋಗಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಇಂದು ಹುತಾತ್ಮ ದಿನಾಚರಣೆ ಅಂಗವಾಗಿ ಮಹಾತ್ಮಾಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಹಳ್ಳಿಯಿಂದ ದಿಲ್ಲಿಯೇ ಹೊರತು, ದಿಲ್ಲಿಯಿಂದ ಹಳ್ಳಿ ಅಲ್ಲ ಎಂದು ಪ್ರತಿಪಾದಿಸಿದ ಮಹಾತ್ಮಾ ಗಾಂಧೀಜಿಯವರು ಗ್ರಾಮಸ್ವರಾಜ್ಯದ ಕಲ್ಪನೆಗೆ ಶಕ್ತಿ ತುಂಬಿದರು ಎಂದು ತಿಳಿಸಿದರು.

ಮಹಾತ್ಮಾಗಾಂಧೀಜಿಯವರು ದೇಶಕ್ಕೆ ನೀಡಿದ ಕೊಡುಗೆಯನ್ನು ಇಂದಿನ ದಿನ ಸ್ಮರಿಸಲಾಗುತ್ತಿದೆ. ಭಾರತ ಹಳ್ಳಿಗಳ ದೇಶವಾಗಿದ್ದು, ಅಂದು ಶೇ.80 ರಷ್ಟು ಜನ ಹಳ್ಳಿಗಳಲ್ಲಿ ವಾಸಿಸುತ್ತಿದ್ದರು. ಗ್ರಾಮಗಳು ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಾಗೂ ರಾಜಕೀಯವಾಗಿ ಸ್ವಾವಲಂಬಿಯಾಗಬೇಕು. ಗ್ರಾಮಗಳ ಪ್ರಗತಿಯಲ್ಲಿಯೇ ದೇಶದ ಪ್ರಗತಿ ಅಡಗಿದೆ ಎಂದು ಅವರು ನುಡಿದಿದ್ದರು.
ರಾಜ್ಯದಲ್ಲಿ ಸುಮಾರು 6 ಸಾವಿರ ಪಂಚಾಯ್ತಿಗಳಿವೆ. ಅವುಗಳಿಗೆ ಮಹಾತ್ಮಾಗಾಂಧಿಯವರ ಹೆಸರು ಇಡಬೇಕೆಂಬ ನಿರ್ಧಾರವನ್ನು ಕೈಗೊಳ್ಳಲಿದ್ದೇವೆ. ಗ್ರಾಮಸ್ವರಾಜ್ಯದ ಕಲ್ಪನೆಗೆ ಶಕ್ತಿ ತುಂಬಿದ್ದರು. ಹಳ್ಳಿಯಿಂದ ದಿಲ್ಲಿಯೇ ಹೊರತು, ದಿಲ್ಲಿಯಿಂದ ಹಳ್ಳಿಯಿಂದ ಅಲ್ಲ ಎಂಬುದನ್ನು ಪ್ರತಿಪಾದಿಸಿದ್ದುದಾಗಿ ತಿಳಿಸಿದರು.
ಇಂತಹ ಮಹಾನ್ ಚೇತನ ಗುಂಡೇಟಿಗೆ ಬಲಿಯಾಗಿ ನಮ್ಮನ್ನ ಅಗಲಿದ್ದಾರೆ. ಅವರ ಅಭಿಮಾನಿಯೊಬ್ಬರು- ಗಾಂಧೀಜಿಯವರು 100 ವರ್ಷ ಬದುಕಬೇಕೆಂದು ಹಾರೈಸಿದ್ದಕ್ಕೆ, ಗಾಂಧೀಜಿಯವರು ''ನಾನು 125 ವರ್ಷಗಳು ದೇಶಕ್ಕಾಗಿ ಬದುಕಲಿಚ್ಛಿಸುತ್ತೇನೆ' ಎಂದು ಉತ್ತರಿಸಿದ್ದರು. ಇಡೀ ದೇಶ ಅವರ ಕೊಡುಗೆಯನ್ನು ಸ್ಮರಿಸುತ್ತದೆ ಎಂದರು.












Click it and Unblock the Notifications