Get Updates
Get notified of breaking news, exclusive insights, and must-see stories!

BPL Card: ರಾಜ್ಯದ ಬಡಜನತೆಗೆ ಗುಡ್ ನ್ಯೂಸ್ : ಹೊಸ ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ‌

ಬೆಂಗಳೂರು, ನವೆಂಬರ್‌ 20: ರಾಜ್ಯದಲ್ಲಿ ಶೀಘ್ರವೇ 14 ಲಕ್ಷ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲಾಗುವುದು ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದರು. ಇದೀಗ ರಾಜ್ಯದ ಬಡಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಯಾವ ಬಡ ಕುಟುಂಬದವರು ಅನ್ನಭಾಗ್ಯ ಯೋಜನೆಯಿಂದ ವಂಚಿತವಾಗಬಾರದು. ಇದಕ್ಕಾಗಿ ಹೊಸದಾಗಿ ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ.

ಈ ಕುರಿತು ಮಂಗಳವಾರ ಭಾರತ್ ಜೋಡೋ ಭವನದಲ್ಲಿರುವ ಇಂದಿರಾಗಾಂಧಿ ಅಡಿಟೋರಿಯಂನಲ್ಲಿ ಕೆಪಿಸಿಸಿ ಮಹಿಳಾ ಕಾಂಗ್ರೆಸ್ ಘಟಕ ಆಯೋಜಿಸಿದ್ದ ಮಾಜಿ ಪ್ರಧಾನಿ ಇಂದಿರಾಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ. ರಾಜ್ಯದ ಯಾವ ಬಡ ಕುಟುಂಬದವರು ಅನ್ನಭಾಗ್ಯ ಯೋಜನೆಯಿಂದ ವಂಚಿತವಾಗಬಾರದು. ಇದಕ್ಕಾಗಿ ಹೊಸದಾಗಿ ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ.

The Poor People Of The State Opportunity To Apply For A New BPL Card Says Siddaramaiah

ಕೆಲವು ಅನರ್ಹರು ಸೌಲಭ್ಯ ಪಡೆದುಕೊಂಡರೂ ಚಿಂತೆ ಇಲ್ಲ. ಅರ್ಹರು ಅನ್ನಭಾಗ್ಯ ಯೋಜನೆಯಿಂದ ವಂಚಿತರಾಗಬಾರದು. ಎಲ್ಲ ಅರ್ಹ ಬಡ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ಸಿಗಬೇಕು. ಸರ್ಕಾರ ಬಿಪಿಎಲ್ ಕಾರ್ಡುಗಳನ್ನು ರದ್ದು ಮಾಡುತ್ತಿದೆ ಎಂದು ಮಾದ್ಯಮಗಳು ಬರೆದಿವೆ, ಆದರೆ ಅರ್ಹರಿಗೆ ಬಿಪಿಎಲ್ ಕಾರ್ಡ್ ತಪ್ಪಬಾರದು ಎಂದು ಸಚಿವ ಕೆ.ಹೆಚ್.ಮುನಿಯಪ್ಪ ಅವರಿಗೆ ಸೂಚಿಸಲಾಗಿದೆ. ಎಲ್ಲಾ ಬಡವರಿಗೂ ಸೌಲಭ್ಯ ದೊರಕಬೇಕು. ಅನರ್ಹರಿಗೆ ಮಾತ್ರ ಎಪಿಎಲ್ ಕಾರ್ಡು ನೀಡಬೇಕು ಎಂದು ಹೇಳಿದ್ದೇನೆ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷ ಸದಾ ಬಡವರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರು, ರೈತರ ಪರವಾಗಿರುವ ಪಕ್ಷ. ಸಂವಿಧಾನದಲ್ಲಿ ಅಪಾರವಾದ ನಂಬಿಕೆ ಇಟ್ಟುಕೊಂಡು ಸಂವಿಧಾನದ ರೀತ್ಯಾ ಕೆಲಸ ಮಾಡುತ್ತಿರುವ ಪಕ್ಷ. ಯಾರೇ ಅಧಿಕಾರಕ್ಕೆ ಬಂದರೂ ಸಂವಿಧಾನದ ರೀತ್ಯಾ ಕೆಲಸ ಮಾಡಬೇಕು. ಅದರ ಧ್ಯೇಯೋದ್ದೇಶಗಳನ್ನು ಜಾರಿ ಮಾಡಬೇಕು. ಪ್ರತಿಯೊಬ್ಬರೂ ಇದನ್ನು ಪಾಲನೆ ಮಾಡಬೇಕಾದದ್ದು ಕರ್ತವ್ಯ. ಇಂದಿರಾ ಗಾಂಧಿಯವರು ಬಡವರ ಪರವಾಗಿ ಬಹಳಷ್ಟು ಕೆಲಸಗಳನ್ನು ಮಾಡಿದ್ದಾರೆ. ಭೂ ಸುಧಾರಣಾ ಕಾಯ್ದೆ, ಗರೀಬಿ ಹಟಾವೋ ಕಾರ್ಯಕ್ರಮ, ಬ್ಯಾಂಕುಗಳ ರಾಷ್ಟ್ರೀಕರಣ ಮುಂತಾದವುಗಳ ಫಲ ಬಡವರಿಗೆ ದೊರಕಬೇಕು. ಬಡವರು ಆರ್ಥಿಕವಾಗಿ ಸಾಮಾಜಿಕವಾಗಿ ಶಕ್ತಿಯನ್ನು ಪಡೆದುಕೊಳ್ಳಬೇಕೆಂಬ ಉದ್ದೇಶ ಅವರಿಗೆ ಇತ್ತು ಎಂದರು.

ಬ್ಯಾಂಕುಗಳು ರಾಷ್ಟ್ರೀಕರಣವಾಗುವ ಮೊದಲು ಬಡವರು ಬ್ಯಾಂಕುಗಳ ಮೆಟ್ಟಿಲುಗಳನ್ನು ಹತ್ತಲು ಸಾಧ್ಯವಾಗುತ್ತಿರಲಿಲ್ಲ. ಇಂದಿರಾ ಗಾಂಧಿಯವರು ರಾಷ್ಟ್ರೀಕರಣ ಮಾಡಿದ ನಂತರ ಬ್ಯಾಂಕುಗಳ ಬಾಗಿಲು ಬಡವರಿಗೂ ತೆರೆಯಿತು. ಕಾಂಗ್ರೆಸ್ ಪಕ್ಷ ಮಾತ್ರ ಸಮಾಜದಲ್ಲಿ ಸಾಮಾಜಿಕ ನ್ಯಾಯ , ಜಾತ್ಯಾತೀತ ತತ್ವ, ಸಂವಿಧಾನ, ಪ್ರಜಾಪ್ರಭುತ್ವಗಳಲ್ಲಿ ಅಪಾರವಾದ ನಂಬಿಕೆ ಇಟ್ಟು ಅದರಂತೆ ನಡೆಯುವ ಪಕ್ಷ ಎಂದರು.

ಈಗ ಅಧಿಕಾರದಲ್ಲಿರುವ ಬಿಜೆಪಿ ಇದಕ್ಕೆ ತದ್ವಿರುದ್ಧವಾಗಿರುವ ಪಕ್ಷ. ಬಡವರ ಪರವಾಗಿ, ಸಾಮಾಜಿಕ ನ್ಯಾಯದ ಪರವಾಗಿ ಇರಲು ಸಾಧ್ಯವೇ ಇಲ್ಲ. ಸಂವಿಧಾನದ ಬಗ್ಗೆ ಗೌರವ ಇಲ್ಲ. ಸಂವಿಧಾನ ಬದಲಾಗಬೇಕೆಂದು ಬಯಸುವ ಪಕ್ಷ. ಅವರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ. ನಮಗೆ ಅಧಿಕಾರ ವಿಕೇಂದ್ರೀಕರಣದಲ್ಲಿ ನಂಬಿಕೆಯಿದ್ದರೆ, ಬಿಜೆಪಿಗೆ ಕೇಂದ್ರೀಕೃತ ವ್ಯವಸ್ಥೆಯಲ್ಲಿ ನಂಬಿಕೆ ಇದೆ ಎಂದು ವಿವರಿಸಿದರು.

ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದ ಮೇಲೆ ಆರ್ಥಿಕ ಅಧಿಕಾರ ಕೇಂದ್ರೀಕೃತಗೊಳ್ಳುತ್ತಿದೆ. ನೆಹರೂ, ಇಂದಿರಾ ಗಾಂಧಿ, ರಾಜೀವ್ ಗಾಂಧಿ ಇಲ್ಲದೇ ಹೋಗಿದ್ದರೆ ಈ ದೇಶದಲ್ಲಿ ಅಧಿಕಾರ ವಿಕೇಂದ್ರೀಕರಣ ಆಗಲು ಸಾಧ್ಯವಾಗುತ್ತಿರಲಿಲ್ಲ. ಮಹಾತ್ಮ ಗಾಂಧಿ ದೇಶದಲ್ಲಿ ಗ್ರಾಮ ಸ್ವರಾಜ್ಯವಾಗಬೇಕೆಂದು ಬಯಸಿದ್ದರು. ಮಹಿಳೆಯರಿಗೆ ಮೀಸಲಾಗಿ ಕೊಟ್ಟಿದ್ದೇಕಾಂಗ್ರೆಸ್ ಪಕ್ಷ.

ರಾಜೀವ್ ಗಾಂಧಿಯವರು ಅಧಿಕಾರದಲ್ಲಿದ್ದಾಗ ಸಂವಿಧಾನಕ್ಕೆ ತಿದ್ದು ಪಡಿ ತಂದು ಅಧಿಕಾರ ವಿಕೇಂದ್ರೀಕರಣದ ಮೂಲಕ ಪಟ್ಟಣ ಪಂಚಾಯತಿ, ನಗರಸಭೆಗಳಿಗೆ ಅಧಿಕಾರವನ್ನು ಮಹಿಳೆಯರಿಗೆ ನೀಡಿದರು. ಇದಾಗದೇ ಹೋಗಿದ್ದರೆ ಮಹಿಳೆಯರಿಗೆ 55% ಮೀಸಲಾತಿ ದೊರೆಯುತ್ತಿರಲಿಲ್ಲ. ರಾಮಾ ಜೋಯಿಸ್ ಎಂಬ ಬಿಜೆಪಿ ಸಂಸದರು ಇದನ್ನು ಪ್ರಶ್ನಿಸಿ ಸರ್ವೋಚ್ಛ ನ್ಯಾಯಾಲಯಕ್ಕೆ ಹೋಗಿದ್ದ ಇತಿಹಾಸವನ್ನು ನೆನಪಿಸಿ ಬಿಜೆಪಿ ಹೇಗೆ ಮಹಿಳಾ ವಿರೋಧಿ ಮನಸ್ಥಿತಿ ಹೊಂದಿದೆ ಎನ್ನುವುದನ್ನು ವಿವರಿಸಿ, ಅಧಿಕಾರ ಹಂಚಿಕೆಯಾಗಬೇಕೆಂದಿದ್ದರೆ ಅವರು ನ್ಯಾಯಾಲಯಕ್ಕೆ ಯಾಕೆ ಹೋಗುತ್ತಿದ್ದರು ಎಂದು ಪ್ರಶ್ನಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+