10000 ಇದ್ದ ಚಿನ್ನದ ಬೆಲೆ ಈಗ ಎಷ್ಟಿದೆ? : ಕೇಂದ್ರದ ವಿರುದ್ಧ ಸಿದ್ದರಾಮಯ್ಯ ಗರಂ
ಬೆಂಗಳೂರು, ಮೇ 21: 2014 ರಲ್ಲಿ 10000 ಇದ್ದ ಚಿನ್ನದ ಬೆಲೆ ಈಗ ಲಕ್ಷ ಆಗಿದೆ. ಗ್ಯಾಸ್ ಬೆಲೆ 400 ಇದ್ದದ್ದು ಈಗ 850 ಆಗಿದೆ. ಡೀಸೆಲ್, ಪೆಟ್ರೋಲ್, ಎಣ್ಣೆ, ಕಾಳು, ಬೇಳೆ, ರಸಗೊಬ್ಬರ ಎಲ್ಲದರ ಬೆಲೆಯನ್ನೂ ಆಕಾಶಕ್ಕೆ ಏರಿಸಿರುವ ಕೇಂದ್ರದ ಮೋದಿಯವರ ಸರ್ಕಾರದ ವಿರುದ್ಧ ಜನಾಕ್ರೋಶ ಇದೆಯೇ ಹೊರತು ನಮ್ಮ ಸರ್ಕಾರದ ಪರವಾಗಿ ಜನಾಭಿಪ್ರಾಯ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ರಾಜ್ಯದ ಜನತೆ ನಮ್ಮ ಮಾಲೀಕರು. ನಮ್ಮ ಮಾಲೀಕರಿಗೆ ನಾವು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ. ನಿಮ್ಮ ಆಶೀರ್ವಾದ ಇರುವವರೆಗೂ ಬಿಜೆಪಿಯ ಸುಳ್ಳಿನ ರಾಶಿಗೆ ನಾವು ಹೆದರುವ, ಅಂಜುವ ಪ್ರಶ್ನೆಯೇ ಇಲ್ಲ ಎಂದರು. ಹಿಂದಿನ ಬಿಜೆಪಿ ಸರ್ಕಾರದ ಮೇಲೆ 40% ಕಮಿಷನ್ ಆರೋಪ ಇತ್ತು. ನಾವು ಇದರ ವಿರುದ್ಧ ಹೋರಾಟ ಮಾಡಿದೆವು, ಅಧಿಕಾರಕ್ಕೆ ಬಂದ ಬಳಿಕ ತನಿಖೆಗೆ ನಾಗಮೋಹನ್ ದಾಸ್ ಸಮಿತಿ ರಚಿಸಿದೆವು. ಸಮಿತಿ ಕೊಟ್ಟಿರುವ ವರದಿಯಲ್ಲಿ ಕಮಿಷನ್ ವ್ಯವಹಾರ ಸಾಬೀತಾಗಿದೆ ಎಂದರು.

1.22 ಕೋಟಿ ಕುಟುಂಬಗಳ ಯಜಮಾನಿಯರಿಗೆ ಗೃಹಲಕ್ಷ್ಮಿ ಯೋಜನೆಯಡಿ 2000 ರೂಪಾಯಿ ಕೊಡುತ್ತಿದ್ದೇವೆ. 1.30 ಕೋಟಿ ಕುಟುಂಬಗಳಿಗೆ ಗೃಹ ಜ್ಯೋತಿ ಯೋಜನೆಯಡಿ ಅನುಕೂಲ ಒದಗಿಸಿದ್ದೇವೆ. ಜೊತೆಗೆ ಇಡೀ ರಾಜ್ಯದ ಮಹಿಳೆಯ ರಿಗೆ ಶಕ್ತಿ ಯೋಜನೆಯಡಿ ಉಚಿತ ಪ್ರಯಾಣದ ವ್ಯವಸ್ಥೆ ಮಾಡಿದ್ದೇವೆ ಎಂದು ಹೇಳಿದರು.
ಚುನಾವಣೆ ವೇಳೆ ನಾವು ಕೊಟ್ಟಿದ್ದ ಭರವಸೆಗಳಲ್ಲಿ ಐದು ಗ್ಯಾರಂಟಿಗಳ ಜೊತೆಗೆ 142 ಭರವಸೆಗಳನ್ನು ಎರಡು ವರ್ಷಗಳಲ್ಲಿ ಪೂರೈಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ ಭರವಸೆ ಈಡೇರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು. ಮೊದಲ ಬಾರಿ ಮುಖ್ಯಮಂತ್ರಿಯಾಗಿ ನಾವು ನೀಡಿದ್ದ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದಲ್ಲದೆ, ಪ್ರಣಾಳಿಕೆಯಲ್ಲಿ ಘೋಷಿಸದ ಹೊಸದಾದ 30 ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೊಳಿಸಿದ್ದೇವೆ ಎಂದ ಸಿ.ಎಂ ಸಿದ್ದರಾಮಯ್ಯ ಅವರು ಬಿಜೆಪಿ ಏಕೆ ತಾನು ಕೊಟ್ಟಿದ್ದ ಭರವಸೆಗಳನ್ನು ಈಡೇರಿಸದೆ, ಜನರ ಎದುರು ಸುಳ್ಳು ಹೇಳಿಕೊಂಡು ತಿರುಗುತ್ತಿದೆ ಎಂದು ಪ್ರಶ್ನಿಸಿದರು.
ನಮ್ಮ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟ. ಸರ್ವರನ್ನೂ ಸಮಾನವಾಗಿ ಗೌರವಿಸುವ ರಾಜ್ಯ. ಸಂವಿಧಾನದ ಅಡಿಯಲ್ಲಿ ಸರ್ವ ಧರ್ಮಗಳನ್ನೂ ಸಮಾನವಾಗಿ ಕಾಣಬೇಕು. ನಾವು ಇದೇ ಮೌಲ್ಯವನ್ನು ಪಾಲಿಸುತ್ತಿದ್ದೇವೆ ಎಂದರು. ಕೇಂದ್ರ ಸರ್ಕಾರದಿಂದ ಪ್ರತೀ ವರ್ಷ ನಮಗೆ ನಷ್ಟ ಆಗುತ್ತಿದೆ. ನಾವು ಪ್ರತೀ ವರ್ಷ 4.5 ಲಕ್ಷ ಕೋಟಿ ತೆರಿಗೆ ರೂಪದಲ್ಲಿ ಕೊಟ್ಟರೆ ನಮಗೆ ವಾಪಾಸ್ ಬರುವುದು ಒಂದು ರೂಪಾಯಿಗೆ 14 ಪೈಸೆ ಮಾತ್ರ. ಇದರಿಂದ ಒಕ್ಕೂಟ ವ್ಯವಸ್ಥೆಯ ಘನತೆ ಹಾಳು ಮಾಡುತ್ತಿದ್ದಾರೆ ಎಂದರು.
ಕೇಂದ್ರ ಪ್ರಾಯೋಜಿತ ಯೋಜನೆಗಳಿಗೂ ಕೇಂದ್ರದಿಂದ ಪೂರ್ತಿ ಅನುದಾನ ಬಂದೇ ಇಲ್ಲ. ಕೇಂದ್ರದ ಯೋಜನೆಗಳಿಗೆ ರಾಜ್ಯ ಸರ್ಕಾರ ರಾಜ್ಯದ ಪಾಲನ್ನು ಪೂರ್ತಿ ಕೊಟ್ಟಿದೆ. ಆದರೆ ಕೇಂದ್ರ ಸರ್ಕಾರ ತಮ್ನ ಪಾಲನ್ನು ಕೊಡದೆ ಉಳಿಸಿಕೊಂಡು ಅನ್ಯಾಯ ಮಾಡುತ್ತಿದೆ. 15 ನೇ ಹಣಕಾಸು ಯೋಜನೆಯಲ್ಲಿ ರಾಜ್ಯಕ್ಕೆ ಕೇಂದ್ರ ಮಾಡಿರುವ ಅನ್ಯಾಯ ನಿಮಗೆಲ್ಲಾ ಗೊತ್ತೇ ಇದೆ. ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿದ್ದ 5300 ಕೋಟಿ ಹಣದಲ್ಲಿ ಬಿಡಿಗಾಸನ್ನೂ ಬಿಡುಗಡೆ ಮಾಡಲಿಲ್ಲ. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸುವುದಾಗಿ ಭರವಸೆ ನೀಡಿದರು. ಇದನ್ನೂ ಈಡೇರಿಸಲಿಲ್ಲ ಎಂದು ಟೀಕಿಸಿದರು. ಈಗ ಜೆಡಿಎಸ್ ಮತ್ತು ಬಿಜೆಪಿ ಕೂಡಿಕೊಂಡಿವೆ. ಆದರೆ ಬಿಜೆಪಿ ಇದುವರೆಗೂ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಬರಲೇ ಇಲ್ಲ. ಆಪರೇಷನ್ ಕಮಲ ಮಾಡಿ ಅಧಿಕಾರಕ್ಕೆ ಬಂದದ್ದು ಬಿಟ್ಟರೆ ರಾಜ್ಯದಲ್ಲಿ ಬಿಜೆಪಿ ಇವತ್ತಿನವರೆಗೂ ಜನರಿಂದ ಆಯ್ಕೆಯೇ ಆಗಿಲ್ಲ ಎಂದು ತಿಳಿಸಿದರು.
-
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
Government Employees: ಸರ್ಕಾರಿ ನೌಕರರ ವರ್ಗಾವಣೆ ಕುರಿತು ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್












Click it and Unblock the Notifications