• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಡಿಸೆಂಬರ್ 27 ಎರಡನೇ ಹಂತದ ಗ್ರಾಮ ಪಂಚಾಯಿತಿ ಚುನಾವಣೆ: ಇಲ್ಲಿದೆ ಸಂಪೂರ್ಣ ಮಾಹಿತಿ!

|

ಬೆಂಗಳೂರು, ಡಿ. 26: ನಾಳೆ ಎರಡನೇ ಹಂತದ ಗ್ರಾಮ ಪಂಚಾಯಿತಿ ಚುನಾವಣೆ ನಡೆಯಲಿದ್ದು, ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಕಳೆದ ಡಿಸೆಂಬರ್ 22ರಂದು ಮೊದಲ ಹಂತದ ಲೋಕಲ್ ಫೈಟ್ ಮುಗಿದಿದೆ. ನಾಳೆ ಡಿಸೆಂಬರ್ 27ರಂದು ಎರಡನೇ ಹಂತದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ನಡೆಯಲಿದ್ದು, ಡಿಸೆಂಬರ್ 30ರಂದು ಫಲಿತಾಂಶ ಪ್ರಕಟವಾಗಲಿದೆ.

ಇದು ಪಕ್ಷಾತೀತ ಚುನಾವಣೆ ಆಗಿದ್ದು, ರಾಜಕೀಯ ಪಕ್ಷಗಳ ಚಿಹ್ನೆ ಇಲ್ಲದೆ ಸಾಮಾನ್ಯ ಚಿಹ್ನೆಗಳ ಮೇಲೆ ನಡೆಯುತ್ತಿದೆ. ಆದರೂ ಕೂಡ ಮೂರು ಪಕ್ಷಗಳಿಗೆ ಈ ಚುನಾವಣೆ ಪ್ರತಿಷ್ಠೆಯ ಕಣವಾಗಿದೆ. ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಮೂರು ರಾಜಕೀಯ ಪಕ್ಷಗಳು ತಮ್ಮ ಬೆಂಬಲಿತ ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ. ಈ ಚುನಾವಣೆಯ ಫಲಿತಾಂಶ ಮುಂದೆ ಬರಲಿರುವ ತಾ.ಪಂ., ಜಿ.ಪಂ., ಲೋಕಸಭಾ ಹಾಗೂ ವಿಧಾನಸಭೆ ಸಾರ್ವತ್ರಿಕ ಚುನಾವಣೆ ಮೇಲೆ ಬಹಳಷ್ಟು ಪರಿಣಾಮ ಬೀರಲಿದೆ. ಹೀಗಾಗಿ ವಿಧಾನಸಭೆ ಚುನಾವಣೆಗೆ ಕಮ್ಮಿ ಇಲ್ಲದಂತೆ 'ಪಂಚಾಯಿತಿ ಫೈಟ್' ರಂಗೇರಿದೆ.

ಎಲ್ಲ ಸಿದ್ಧತೆಗಳು ಪೂರ್ಣ

ಎಲ್ಲ ಸಿದ್ಧತೆಗಳು ಪೂರ್ಣ

ಈಗಾಗಲೇ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ತಾಲೂಕು ದಂಡಾಧಿಕಾರಿಗಳು ಆಯಾ ಜಿಲ್ಲಾ, ತಾಲೂಕುಗಳಿಗೆ ಒಳಪಡುವ ಗ್ರಾಮ ಪಂಚಾಯಿತಿ ಮತ್ತು ಹಳ್ಳಿಗಳಿಗೆ ಮಸ್ಟರಿಂಗ್‌ ವ್ಯವಸ್ಥೆ ಮಾಡಿದ್ದಾರೆ. ಚುನಾವಣಾ ಸಿಬ್ಬಂದಿಯನ್ನು ಆಯಾ ಗ್ರಾಮಗಳಿಗೆ ಕಳುಹಿಸಲಾಗುತ್ತಿದೆ. ಎರಡನೇ ಹಂತದಲ್ಲಿ ಒಟ್ಟು 109 ತಾಲೂಕುಗಳ 2,709 ಗ್ರಾಮ ಪಂಚಾಯಿತಿಗಳ 43,291 ವಾರ್ಡ್‌ಗಳಿಗೆ ಚುನಾವಣೆ ಘೋಷಣೆಯಾಗಿದೆ.

ಅಭ್ಯರ್ಥಿಗಳ ವಿವರ

ಅಭ್ಯರ್ಥಿಗಳ ವಿವರ

ಒಟ್ಟು 43,291 ಸ್ಥಾನಗಳ ಪೈಕಿ 3,697 ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿರುವುದರಿಂದ, 39,378 ಸ್ಥಾನಗಳಿಗೆ ನಾಳೆ ಮತದಾನ ನಡೆಯಲಿದೆ. 1,39,546 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಅವರಲ್ಲಿ 34,115 ಅಭ್ಯರ್ಥಿಗಳು ತಮ್ಮ ನಾಮಪತ್ರ ವಾಪಾಸ್ ಪಡೆದಿದ್ದು, ಅಂತಿಮವಾಗಿ 1,05,431 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ ಉಳಿದಿದ್ದಾರೆ. ಒಟ್ಟು 216 ಸ್ಥಾನಗಳಿಗೆ ನಾಮಪತ್ರ ಸಲ್ಲಿಕೆಯಾಗದೆ ಖಾಲಿ ಉಳಿದಿವೆ.

ಚುನಾವಣಾ ಫಲಿತಾಂಶ

ಚುನಾವಣಾ ಫಲಿತಾಂಶ

ಈಗಾಗಲೇ ಚುನಾವಣೆ ನಡೆಯುವ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಸಕಲ ಸಿದ್ದತೆ ಮಾಡಿಕೊಂಡಿದ್ದು, ಚುನಾವಣೆ ಮಸ್ಟರಿಂಗ್ ಕಾರ್ಯ ಮುಗಿದಿದೆ. ನಾಳೆ ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಕೊನೆಯ ಒಂದು ಗಂಟೆ ಅವಧಿಯಲ್ಲಿ ಕೋವಿಡ್-19 ಸೋಂಕಿತರು ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ. ಡಿಸೆಂಬರ್‌ 30 ರಂದು ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿಗಳ ಚುನಾವಣಾ ಫಲಿತಾಂಶ ಹೊರ ಬೀಳಲಿದೆ.

ಮೊದಲ ಹಂತದ ಚುನಾವಣೆ

ಮೊದಲ ಹಂತದ ಚುನಾವಣೆ

ಮೊದಲ ಹಂತದ ಚುನಾವಣೆ ಡಿಸೆಂಬರ್ 22 ರಂದು ನಡೆದಿತ್ತು. ಒಟ್ಟು 117 ತಾಲ್ಲೂಕುಗಳ 3,019 ಗ್ರಾಮ ಪಂಚಾಯಿತಿಗಳ 48,048 ಸ್ಥಾನಗಳಿಗೆ ಮತದಾನವಾಗಿದೆ. ಒಟ್ಟು 23,706 ಮತಗಟ್ಟೆಗಳಲ್ಲಿ 1,17,383 ಅಭ್ಯರ್ಥಿಗಳ ಭವಿಷ್ಯವನ್ನು ಮತದಾರರು ಈಗಾಗಲೇ ಬರೆದಿದ್ದಾರೆ. ಮೊದಲ ಹಂತದ ಚುನಾವಣೆಯಲ್ಲಿ 4,377 ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದರು. ವಿವಿಧ ಕಾರಣಗಳಿಂದ 24 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಮತದಾರರು ಚುನಾವಣೆ ಬಹಿಷ್ಕಾರ ಮಾಡಿದ್ದರು.

   #REWIND 2020: ಈ ವರ್ಷ ಬಳ್ಳಾರಿ ಜನತೆಯನ್ನು ಇನ್ನಿಲ್ಲದಂತೆ ಕಾಡಿದ 'ಕೊರೊನಾ ಸೋಂಕು ಮತ್ತು ಜಿಲ್ಲೆ ವಿಭಜನೆ' ವಿಚಾರ | Oneindia Kannada

   English summary
   The second phase of the Gram Panchayat elections will be held tomorrow and the State Election Commission is making preparations for a free and fair election. The first phase of elections was held on December 22. The Gram Panchayat election result will be announced on December 30. Know more
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X