ರಾಜ್ಯಾದ್ಯಂತ ಕೆಂಪೇಗೌಡ, ರಾಣಿ ಚೆನ್ನಮ್ಮ ಜಯಂತಿ: ಏನಿದರ ಗುಟ್ಟು?
ಖುದ್ದು ಸಿದ್ದರಾಮಯ್ಯ ಅವರೇ ಟ್ವಿಟರ್ ನಲ್ಲಿ ಈ ಬಗ್ಗೆ ಹೇಳಿಕೊಂಡಿದ್ದಾರೆ. ಆದಿ ಚುಂಚನಗಿರಿ ಮಠದ ಶ್ರೀ ನಿರ್ಮಲಾನಂದ ಸ್ವಾಮೀಜಿಯವರೊಂದಿಗೆ ಈ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಂಡಿರುವುದಾಗಿ ಅವರು ತಿಳಿಸಿದ್ದಾರೆ.
ಬೆಂಗಳೂರು, ಏಪ್ರಿಲ್ 12: ಇದೇ ತಿಂಗಳ ಏಪ್ರಿಲ್ 17ರಂದು ಕೆಂಪೇಗೌಡ ಜಯಂತಿಯನ್ನು ರಾಜ್ಯಾದ್ಯಂತ ಆಚರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿರುವುದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.
ಇದರ ಜತೆಗೆ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನೂ ಆಚರಿಸಲು ರಾಜ್ಯ ಸರ್ಕಾರ ಉದ್ದೇಶಿಸಿರುವುದಾಗಿ ಹೇಳಲಾಗಿದೆ. ರಾಣಿ ಚೆನ್ನಮ್ಮ ಜಯಂತಿಯನ್ನು ಮುಂದಿನ ವರ್ಷದಿಂದ ಆಚರಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಆದರೆ, ಕೆಂಪೇಗೌಡ ಜಯಂತಿಯನ್ನು ಇದೇ ವರ್ಷ ರಾಜ್ಯಾದ್ಯಂತ ಆಚರಿಸುವುದಾಗಿ ಟ್ವಿಟರ್ ನಲ್ಲಿ ಸಿದ್ದರಾಮಯ್ಯ ಹೇಳಿದ್ದಾರೆ. ಇದ್ದಕ್ಕಿದ್ದಂತೆ ಅವರಈ ನಡೆ ಅನುಸರಿಸಿರುವುದು ರಾಜಕೀಯ ವಲಯದಲ್ಲಿ ಸಾಕಷ್ಟು ಕುತೂಹಲಗಳಿಗೆ ಕಾರಣವಾಗಿದೆ. ಆದಿ ಚುಂಚನಗಿರಿ ಮಠದ ಶ್ರೀ ನಿರ್ಮಲಾನಂದ ಸ್ವಾಮೀಜಿಯವರೊಂದಿಗೆ ಚರ್ಚಿಸಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ ಎಂದೂ ಹೇಳಲಾಗಿದೆ.
ಬೆಂಗಳೂರು ಮಹಾನಗರವನ್ನು ಕಟ್ಟಿದ ಈ ಮಹಾ ಪುರುಷನ ಜಯಂತಿಯನ್ನು ಕೇವಲ ಬೆಂಗಳೂರು ಮಾತ್ರವಲ್ಲದೆ, ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಕೆಂಪೇಗೌಡ ಜಯಂತಿಯನ್ನು ಆಚರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿರುವುದೇ ಎಲ್ಲರ ಕುತೂಹಲದ ವಿಚಾರವಾಗಿದೆ.

ಯಾವಾಗಲೂ, ಅಹಿಂದ, ಮುಸ್ಲಿಮರ ಪರವಾಗಿ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದ್ದ ಕಾಂಗ್ರೆಸ್ ಸರ್ಕಾರ, ಹೀಗೆ ದಿಢೀರನೆ ಒಕ್ಕಲಿಗರ ಸಮುದಾಯದ ಆದರ್ಶ ಪುರುಷ ಎನಿಸಿರುವ ಕೆಂಪೇಗೌಡರ ಜನ್ಮದಿನಾಚರಣೆಯತ್ತ ನಿರ್ಧಾರ ಕೈಗೊಂಡಿರುವುದು ಅಚ್ಚರಿಯೆನಿಸಿದೆ.
ಆದರೆ, ರಾಜಕೀಯ ತಜ್ಞರಿಗೆ ಇದು ಅಚ್ಚರಿಯ ವಿಚಾರವಲ್ಲ. ರಾಜ್ಯ ರಾಜಕೀಯದಲ್ಲಿ ಒಕ್ಕಲಿಗರ ಪ್ರಾಬಲ್ಯವೇ ಅಧಿಕ ಎನ್ನುವುದರಲ್ಲಿ ಎರಡು ಮಾತಿಲ್ಲ. ಇನ್ನು, ರಾಜ್ಯದ ಮುಂದಿನ ವಿಧಾನಸಭೆ ಚುನಾವಣೆ ಮುಂದಿನ ವರ್ಷ ನಡೆಯಲಿರುವುದರಿಂದ, ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷಕ್ಕೆ ಒಕ್ಕಲಿಗರ ಕೃಪಾಕಟಾಕ್ಷ ಅತ್ಯಗತ್ಯವಾಗಿ ಬೇಕಿದೆ.
ನಾಡಪ್ರಭು ಕೆಂಪೇಗೌಡ ದಿನಾಚರಣೆಯನ್ನು ಏ.17ರಂದು ರಾಜ್ಯ ಸರ್ಕಾರದ ವತಿಯಿಂದ ಆಚರಿಸಲಾಗುವುದು. ಜಿಲ್ಲಾ ಮಟ್ಟದಲ್ಲೂ ದಿನಾಚರಣೆ ಆಯೋಜಿಸಲು ಕ್ರಮ ಕೈಗೊಳ್ಳಲಾಗುವುದು.
— CM of Karnataka (@CMofKarnataka) April 11, 2017
ಹಾಗಾಗಿಯೇ, ಒಕ್ಕಲಿಗರ ಮನವೊಲಿಕೆಗಾಗಿ ಅದರಲ್ಲೂ ಕಾವೇರಿ ಪಾತ್ರದಲ್ಲಿರುವ ಒಕ್ಕಲಿಗರನ್ನು ಸೆಳೆಯುವ ದೃಷ್ಟಿಯಿಂದ ಸಿದ್ದರಾಮಯ್ಯ ಈ ನಿರ್ಧಾರ ಕೈಗೊಂಡಿದ್ದಾರೆ ಎಂಬ ಮಾತುಗಳು ರಾಜ್ಯ ರಾಜಕೀಯದಲ್ಲಿ ಕೇಳಿಬರುತ್ತಿವೆ.
-
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications